ದಕ್ಷಿಣ ಮಧ್ಯ ರೈಲ್ವೆಯಲ್ಲಿ 4103 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
160

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ದಕ್ಷಿಣ ಮಧ್ಯ ರೈಲ್ವೆಯಲ್ಲಿ 4103 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

Also read: ಎನರ್ಜಿ ಎಫಿಷಿಯೆನ್ಸಿ (EESL) ಸರ್ವೀಸಸ್ ಲಿಮಿಟೆಡ್ 235 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಪ್ರೆಂಟಿಸ್

ಸಂಸ್ಥೆ (Organisation): ದಕ್ಷಿಣ ಮಧ್ಯ ರೈಲ್ವೆ

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಿದ್ಯಾರ್ಹತೆ (Educational Qualification): 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಶೇ.50% ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್ ನಿಂದ ಹೊಂದಿರಬೇಕು ಮತ್ತು ಯಾವುದೇ ಟ್ರೇಡ್‌ನಲ್ಲಿ ಐಟಿಐ ಸರ್ಟಿಫಿಕೇಟ್ ಅನ್ನು ಎನ್‌ಸಿವಿಟಿ/ಎಸ್‌ಸಿವಿಟಿ ಇಂದ ಮಾನ್ಯತೆ ಹೊಂದಿರುವ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕದಬಹುದು.

ವಯೋಮಿತಿ: ಡಿಸೆಂಬರ್ 8,2019ರ ಅನ್ವಯ ಕನಿಷ್ಟ 15 ರಿಂದ ಗರಿಷ್ಟ 24 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ದಕ್ಷಿಣ ಮಧ್ಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ https://scr.indianrailways.gov.in/ ಗೆ ಭೇಟಿ ನೀಡಿ
ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://scr.indianrailways.gov.in/ ಕ್ಲಿಕ್ ಮಾಡಿ.