ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ 385 ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
151

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸೌತ್ ಇಂಡಿಯನ್ ಬ್ಯಾಂಕ್ 385 ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Also read: ನೈರುತ್ಯ ರೈಲ್ವೆ ಇಲಾಖೆಯಲ್ಲಿ ಜ್ಯೂನಿಯರ್ ಕ್ಲರ್ಕ್, ಸ್ಟೇಷನ್ ಮಾಸ್ಟರ್ ಮತ್ತು ಗೂಡ್ಸ್ ಗಾರ್ಡ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಪ್ರೊಬೆಷನರಿ ಕ್ಲರ್ಕ್

ಸಂಸ್ಥೆ (Organisation): ಸೌತ್ ಇಂಡಿಯನ್ ಬ್ಯಾಂಕ್

ವಿದ್ಯಾರ್ಹತೆ (Educational Qualification): 10 ನೇ ತರಗತಿ/ ಎಸ್‌.ಎಸ್‌.ಎಲ್‌.ಸಿ ,12ನೇ ತರಗತಿ,ಪದವಿ.

ವಯೋಮಿತಿ: ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 800/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು 150/- ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 30, 2019

ಅರ್ಜಿ ಸಲ್ಲಿಸುವ ವಿಧಾನ: ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.southindianbank.com/ ಗೆ ಹೋಗಿ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ ಮಾಡಿ https://ibpsonline.ibps.in/sibclkmay19/