ನೈರುತ್ಯ ರೈಲ್ವೆ ಇಲಾಖೆಯಲ್ಲಿ ಜ್ಯೂನಿಯರ್ ಕ್ಲರ್ಕ್, ಸ್ಟೇಷನ್ ಮಾಸ್ಟರ್ ಮತ್ತು ಗೂಡ್ಸ್ ಗಾರ್ಡ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
531

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ನೈರುತ್ಯ ರೈಲ್ವೆ ಇಲಾಖೆಯು 179 ಜ್ಯೂನಿಯರ್ ಕ್ಲರ್ಕ್,ಸ್ಟೇಷನ್ ಮಾಸ್ಟರ್ ಮತ್ತು ಗೂಡ್ಸ್ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯ್ರಥಿಗಳು ಜುಲೈ 15.2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಹಲವಾರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಜ್ಯೂನಿಯರ್ ಕ್ಲರ್ಕ್,ಸ್ಟೇಷನ್ ಮಾಸ್ಟರ್, ಗೂಡ್ಸ್ ಗಾರ್ಡ್

ಸಂಸ್ಥೆ (Organisation): ನೈರುತ್ಯ ರೈಲ್ವೆ

ವಿದ್ಯಾರ್ಹತೆ (Educational Qualification): ಪದವಿ, 12ನೇ ತರಗತಿ.

ಉದ್ಯೋಗ ಸ್ಥಳ (Job Location): ಹುಬ್ಬಳ್ಳಿ

Application Start Date: June 24, 2019

Application End Date: July 15, 2019

ವಯೋಮಿತಿ: ಜುಲೈ 1,2019 ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಲ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://www.rrchubli.in/index.html ನಲ್ಲಿ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: http://www.rrchubli.in/GDCE_Notification_No01_2019.pdf ಕ್ಲಿಕ್ ಮಾಡಿ.