ದಕ್ಷಿಣ ರೈಲ್ವೆ 3585 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
108

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ದಕ್ಷಿಣ ರೈಲ್ವೆಯು 3585 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

Also read: ಡಿಪ್ಲೋಮಾದವರಿಗೆ ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಉದ್ಯೋಗ ಅವಕಾಶ

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಪ್ರೆಂಟಿಸ್

ಸಂಸ್ಥೆ (Organisation): ದಕ್ಷಿಣ ರೈಲ್ವೆ

ವಿದ್ಯಾರ್ಹತೆ (Educational Qualification): ಅಪ್ರೆಂಟಿಸ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/ತತ್ಸಮಾನ ವಿದ್ಯಾರ್ಹತೆ, ದ್ವಿತೀಯ ಪಿಯುಸಿ/10+2 ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಹುದ್ದೆಗಳಿಗನುಸಾರ ಕನಿಷ್ಟ 15 ರಿಂದ ಗರಿಷ್ಟ 22/24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿಯ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಅಂಗವಿಕಲ ಅಥವಾ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ದಕ್ಷಿಣ ರೈಲ್ವೆಯ ಅಧಿಕೃತ ವೆಬ್‌ಸೈಟ್‌ https://sr.indianrailways.gov.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2019ರ ಒಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://sr.indianrailways.gov.in/ ಕ್ಲಿಕ್ ಮಾಡಿ.