ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ 130 ಯಂಗ್ ಪ್ರೊಫಷನಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
203

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ 130 ಯಂಗ್ ಪ್ರೊಫಷನಲ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 20,2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 2814 ಚಾಲಕ ಹಾಗೂ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಯಂಗ್ ಪ್ರೊಫಷನಲ್

ಸಂಸ್ಥೆ (Organisation) ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ

ವಿದ್ಯಾರ್ಹತೆ (Educational Qualification): ಪೋಸ್ಟ್ ಗ್ರಾಜುಯೇಟ್ ಪದವಿ ಅಥವಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ
ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಮಾಹಿತಿ (Job Location): ಭಾರತದೆಲ್ಲೆಡೆ

ವಯೋಮಿತಿ: ಡಿಸೆಂಬರ್ 20,2019ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಭಾರತ ಸರ್ಕಾರದ ನೇಮಕಾತಿ
ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://sportsauthorityofindia.nic.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 20,2019ರ ಒಳಗೆ ಅರ್ಜಿ ಸಲ್ಲಿಸಬೇಕು.