ಸಶಸ್ತ್ರ ಸೀಮಾ ಬಲ ನೇಮಕಾತಿ 290 ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
68

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸಶಸ್ತ್ರ ಸೀಮಾ ಬಲ ನೇಮಕಾತಿ 290 ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಅರ್ಜಿ ಭರ್ತಿಮಾಡಿ. ಅಗತ್ಯ ದಾಖಲೆಗಳೊಂದಿಗೆ ಜೂನ್ 7,2019 ರೊಳಗೆ ಪೋಸ್ಟ್ ಮೂಲಕ ಕಚೇರಿ ವಿಳಾಸಕ್ಕೆ ಕಳುಹಿಸಬೇಕು.

Also read: ಆರ್ಡನ್ಯಾನ್ಸ್ ಫ್ಯಾಕ್ಟರಿ ಬೋರ್ಡ್‌ 1704 ಚಾರ್ಜ್‌ಮ್ಯಾನ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕಾನ್ಸ್‌ಟೇಬಲ್ (ಜಿಡಿ)

ಸಂಸ್ಥೆ (Organisation): ಸಶಸ್ತ್ರ ಸೀಮಾ ಬಲ್‌ (SSB)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ / ಮೆಟ್ರಿಕ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಬೋರ್ಡ್‌ನಿಂದ ಹೊಂದಿರಬೇಕು.

ಉದ್ಯೋಗ ಸ್ಥಳ (Job Location): ದೆಹಲಿ, ಭಾರತದೆಲ್ಲೆಡೆ

ವಯೋಮಿತಿ: ಈ ಹುದ್ದೆಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಪಿಇಟಿ, ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ , ಮೆಡಿಕಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 25/-ರೂ ಅನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://ssb.nic.in/ ಗೆ ಹೋಗಿ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಹುದ್ದೆಗಳಿಗೆ ಸಂಬಂಧಿತ ಕಚೇರಿಗಳಿಗೆ ಜೂನ್ 7,2019 ರೊಳಗೆ ಪೋಸ್ಟ್ ಮೂಲಕ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://ssb.nic.in/WriteReadData/LINKS/scan000533b0609e-56b1-4501-b6d7-88e65676d4c1.pdf ಇಲ್ಲಿ ಕ್ಲಿಕ್ ಮಾಡಿ.