ಸ್ಟಾಫ್ ಸೆಲೆಕ್ಷನ್ ಕಮಿಷನ್ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
141

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಜ್ಯೂನಿಯರ್ ಇಂಜಿನಿಯರ್ (ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಕ್ವಾಂಟಿಸಿ ಸರ್ವೇಯಿಂಗ್ ಮತ್ತು ಕಾಂಟ್ರ್ಯಾಕ್ಟ್) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 12,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ…

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಜ್ಯೂನಿಯರ್ ಇಂಜಿನಿಯರ್

ಸಂಸ್ಥೆ (Organisation): ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ)

ವಿದ್ಯಾರ್ಹತೆ (Educational Qualification): ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಹುದ್ದೆಗಳಿಗನುಸಾರ ಕೇಳಲಾಗಿರುವ ವಯೋಮಿತಿಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಅಂಗವಿಕಲ ಮತ್ತು ಮಾಜಿ ಸೈನಿಕ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 12,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://kannada.careerindia.com/downloads/2019/8/notice_eng_je.pdf ಕ್ಲಿಕ್ ಮಾಡಿ.