ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
394

ಉದ್ಯೋಗದ ನಿರಿಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಚೆಚ್‌ಎಸ್‌ಎಲ್‌) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಜನವರಿ 10,2020 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಭಾರತೀಯ ಜೀವ ವಿಮಾ ನಿಗಮ ಹೌಸಿಂಗ್ ಫಿನಾನ್ಸ್ ಲಿಮಿಟೆಡ್ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಗುಮಾಸ್ತ/ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಪೋಸ್ಟಲ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್.

ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ವಯೋಮಿತಿ: ನೇಮಕಾತಿ ನಿಯಮಾನುಸಾರ ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ,2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ ಶ್ರೇಣಿ: ರೂ.25,500/- ರಿಂದ 81,100/-ರೂ

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪರೀಕ್ಷಾ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-
ಪ.ಜಾ/ಪ.ಪಂ/ಮಹಿಳೆ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್/ಚಲನ್ ಮೂಲಕ ಪಾವತಿಸಬಹುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-1-2020ರ ರಾತ್ರಿ 11:59ರೊಳಗೆ

ಕಂಪ್ಯೂಟರ್ ಆಧಾರಿತ ಪರೀಕ್ಷೆಯ (ಟಯರ್-1) ದಿನಾಂಕ: ಮಾರ್ಚ್ 16 ರಿಂದ 27,2020ರ ವರೆಗೆ

ಟಯರ್-2 ಪರೀಕ್ಷೆಯ (ವಿವರಣಾತ್ಮಕ) ದಿನಾಂಕ: ಜೂನ್ 28,2020