SSC ನೇಮಕಾತಿ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..

0
407

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಜ್ಯೂನಿಯರ್ ಇಂಜಿನಿಯರ್ ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಕ್ವಾಂಟಿಸಿ ಸರ್ವೇಯಿಂಗ್ ಮತ್ತು ಕಾಂಟ್ರ್ಯಾಕ್ಟ್, ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 25,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: (Name Of The Posts): ಜ್ಯೂನಿಯರ್ ಇಂಜಿನಿಯರ್

ಸಂಸ್ಥೆ (Organisation): ಸ್ಟಾಫ್ ಸೆಲೆಕ್ಷನ್ ಕಮಿಷನ್

ವಿದ್ಯಾರ್ಹತೆ (Educational Qualification): ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮ ಅಥವಾ ಪದವಿ

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವೇತನ (Salary Scale): ತಿಂಗಳಿಗೆ 35,400/- ರಿಂದ 1,12,400 /- ರೂ

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನೀಡಲಾಗುವುದು. ಪರೀಕ್ಷೆಯು ಸೆಪ್ಟೆಂಬರ್ 23 ರಿಂದ 27,2019 ರವರೆಗೆ ನಡೆಯಲಿದೆ. ತದನಂತರ ಡಿಸೆಂಬರ್ 29,2019 ರಂದು ಪರೀಕ್ಷೆಯಿರುತ್ತದೆ. ತದನಂತರ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದ್ದು ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ.100/- ಪಾವತಿಸಬೇಕು. ಮಹಿಳೆ , ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕವಿನಾಯಿತಿಯನ್ನು ಹೊಂದಿರುತ್ತಾರೆ. ಅರ್ಜಿ ಶುಲ್ಕವನ್ನು ಫೆಬ್ರವರಿ 27,2019ರೊಳಗೆ ಆನ್ ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): February 25, 2019

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನೀಡಲಾಗುವುದು. ಪರೀಕ್ಷೆಯು ಸೆಪ್ಟೆಂಬರ್ 23 ರಿಂದ 27,2019 ರವರೆಗೆ ನಡೆಯಲಿದೆ. ತದನಂತರ ಡಿಸೆಂಬರ್ 29,2019 ರಂದು ಪರೀಕ್ಷೆಯಿರುತ್ತದೆ. ತದನಂತರ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ವಿಧಾನ: ಅಭ್ಯರ್ಥಿಗಳು ಎಸ್ ಎಸ್ ಸಿ ಯ ಅಧಿಕೃತ ವೆಬ್ ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://ssc.nic.in/SSCFileServer/PortalManagement/UploadedFiles/notice_eng_jemec_01022019.pdf ಕ್ಲಿಕ್ ಮಾಡಿ.