SSC ನೇಮಕಾತಿ; ಶೀಘ್ರಲಿಪಿಗಾರ ಗ್ರೇಡ್ “ಸಿ” ಮತ್ತು ಗ್ರೇಡ್ “ಡಿ” ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
228

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ /ಸ್ಟೆನೋಗ್ರಾಫರ್ ಗ್ರೇಡ್ “ಸಿ” ಮತ್ತು ಗ್ರೇಡ್ “ಡಿ” ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 18,2019ರೊಳಗೆ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.

Also read: ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಸ್ಟೆನೋಗ್ರಾಫರ್ ಗ್ರೇಡ್ “ಸಿ” ಮತ್ತು ಗ್ರೇಡ್ “ಡಿ”

ವಿದ್ಯಾರ್ಹತೆ: ಶೀಘ್ರಲಿಪಿಗಾರ /ಸ್ಟೆನೋಗ್ರಾಫರ್ ಗ್ರೇಡ್ “ಸಿ” ಮತ್ತು ಗ್ರೇಡ್ “ಡಿ” ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು 12ನೇ ತರಗತಿ / ದ್ವಿತೀಯ ಪಿಯುಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ: ಶೀಘ್ರಲಿಪಿಗಾರ ಗ್ರೇಡ್ “ಸಿ” ಹುದ್ದೆಗಳಿಗೆ ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಸ್ಟೆನೋಗ್ರಾಫರ್ ಗ್ರೇಡ್ “ಡಿ” ಹುದ್ದೆಗಳಿಗೆ ಜನವರಿ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯತಕ್ಕದ್ದು.

ಅರ್ಜಿ ಶುಲ್ಕ: ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಕ್ಟೋಬರ್ 20,2019ರ ಸಂಜೆ 5 ಗಂಟೆಯೊಳಗೆ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಮಾಜಿ ಸೈನಿಕ /ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್‌ಸೈಟ್‌ https://ssc.nic.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 18,2019ರ ಒಳಗೆ ಅರ್ಜಿ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆಗೆ ಕೊನೆಯ ದಿನ : 18.10.2019

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 20.10.2019

ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ : 5.5.2020 ರಿಂದ 7.5.2020

ಹೆಚ್ಚಿನ ಮಾಹಿತಿಗಾಗಿ: https://ssc.nic.in/ ಕ್ಲಿಕ್ ಮಾಡಿ.