ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ..

0
472

ಕರ್ನಾಟಕ ರಾಜ್ಯದ ಪ್ರೌಢ ಶಿಕ್ಷಣ ಮಂಡಳಿ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರೌಢ ಶಿಕ್ಷಣ ಮಂಡಳಿ ಇಂದು 2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 21, 2019ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ.ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಿದೆ. ಈ ಕುರಿತು ವಿದ್ಯಾರ್ಥಿ ಓದಿನ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಪಾಲಕರು ತಮ್ಮ ಮಕ್ಕಳ ಪರೀಕ್ಷೆಗಳು ಹತ್ತಿರ ಬರುತ್ತಿರುವುದರಿಂದ ಮಕ್ಕಳ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಬೇಕು.


Also read: 2019 ಮಾರ್ಚ್ 1 ರಿಂದ 18 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ; ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿದ ವೇಳಾಪಟ್ಟಿ ವಿವರ ಇಲ್ಲಿದೆ ನೋಡಿ..

ಪರೀಕ್ಷೆಯು 2019ರ ಮಾರ್ಚ್ 23ರಿಂದ ಏಪ್ರಿಲ್ 4ರವರೆಗೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿವೆ.SSLC board releases 10th exam final time table

 

ದಿನಾಂಕ, ವಿಷಯ, ಸಮಯ:

1) 21-3-2019 ಗುರುವಾರ- ಪ್ರಥಮ ಭಾಷೆ: ಸಮಯ: ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30.
ಕನ್ನಡ, ತೆಲುಗು, ಹಿಂದಿ, ಮರಾಠಿ. ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ.

2) 23-3-2019 ಶನಿವಾರ: ಬೆ.9.30ರಿಂದ 12.45:
ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್, ಎಂಜಿನಿಯರಿಂಗ್-2 ಎಂಜಿನಿಯರಿಂಗ್ ಗ್ರಾಫಿಕ್ಸ್-2 ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

3) 25-3-2019 ಸೋಮವಾರ: ಬೆ.9.30ರಿಂದ 12.30
ಗಣಿತ, ಸಮಾಜ ಶಾಸ್ತ್ರ.

4) 27-3-2019 ಬುಧವಾರ: ದ್ವಿತೀಯ ಭಾಷೆ- ಬೆ.9.30ರಿಂದ 12
ಇಂಗ್ಲಿಷ್, ಕನ್ನಡ.

5). 29-3-2019 ಶುಕ್ರವಾರ: ಬೆ.9.30ರಿಂದ 12.30
ಸಮಾಜ ವಿಜ್ಞಾನ

6) 2-4-2019 ಮಂಗಳವಾರ: ಬೆ.9.30ರಿಂದ 12.30
ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದುಸ್ತಾನಿ ಸಂಗೀತ ಬೆ.9.30ರಿಂದ 12.30.

7) 4-4-2019 ಗುರುವಾರ: ತೃತೀಯಭಾಷೆ ಬೆ.9.30 ರಿಂದ 11.45: ಬೆ.9.30ರಿಂದ 12.

ಹಿಂದಿ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್ ಪರೀಕ್ಷಾ ವಿಷಯ, ಮಾಹಿತಿ ತಂತ್ರಜ್ಞಾನ, ರೀಟೇಲ್ ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್.