ಭಾರತೀಯ ಸ್ಟೇಟ್ ಬ್ಯಾಂಕ್ 8653 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
574

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಸ್ಟೇಟ್ ಬ್ಯಾಂಕ್ 8653 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಎಪ್ರಿಲ್ 12 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಮೇ 3 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: HAL ನೇಮಕಾತಿ ಮ್ಯಾನೇಜರ್ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕ್ಲರ್ಕ್

ಸಂಸ್ಥೆ (Organisation): ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಇಲ್ಲವಾದಲ್ಲಿ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪದವಿಗೆ ಸಮನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು. ಪದವಿಯ ಕೊನೆ ಸೆಮಿಸ್ಟರ್ ನಲ್ಲಿ ಇರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ಕೆಯಾದರೆ ಇದಕ್ಕೆ ಇಲಾಖೆಯ ಷರತ್ತುಗಳು ಅನ್ವಯವಾಗುತ್ತವೆ.

ವಯೋಮಿತಿ: ಏಪ್ರಿಲ್ 1,2019 ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿರುತ್ತದೆ.

ಹುದ್ದೆಗಳ ಹಂಚಿಕೆ: ಒಟ್ಟು 8653 ಹುದ್ದೆಗಳಲ್ಲಿ 3674 ಹುದ್ದೆ – ಸಾಮಾನ್ಯ ವರ್ಗ, 853 ಹುದ್ದೆ – ಆರ್ಥಿಕವಾಗಿ ಹಿಂದುಳಿದ, 1361 ಹುದ್ದೆ – ಪರಿಶಿಷ್ಟ ಜಾತಿ , 799 ಹುದ್ದೆ- ಪರಿಶಿಷ್ಟ ವರ್ಗ, ಮತ್ತು 1966 ಹುದ್ದೆ ಗಳನ್ನು ಇತರ ವರ್ಗದವರಿಗೆ ಮೀಸಲಿಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಅಂಗವಿಕಲ / ಮಾಜಿ ಸೈನಿಕ ಅಭ್ಯರ್ಥಿಗಳು 125/-ರೂ ಮತ್ತು ಸಾಮಾನ್ಯ / ಓಬಿಸಿ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಪರೀಕ್ಷೆ ದಿನಾಂಕ: ಪ್ರಾಥಮಿಕ ಪರೀಕ್ಷೆಯು ಜೂನ್ ನಲ್ಲಿ ನಡೆಯಲಿದ್ದು, ಅಂತಿಮ ಪರೀಕ್ಷೆಯು ಆಗಸ್ಟ್ 10, 2019 ರಂದು ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ: https://www.sbi.co.in/ ಹೋಗಿ ಚೆಕ್ ಮಾಡಿ.