ರಾಜ್ಯದ ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಸಾವಿರಾರು ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಶುರುವಾಗಲಿದ್ದು, ಅಭ್ಯರ್ಥಿಗಳು ತಯಾರಿಯಲ್ಲಿರಬೇಕು..

0
998

ಉದ್ಯೋಗದ ನಿರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಹಲವಾರು ಹುದ್ದೆಗಳ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು ಶೀಘ್ರವಾಗಿ ನೇಮಕಾತಿ ಪ್ರಕಟಣೆ ಹೊರಡಿಸಲು ತಯಾರಿ ನಡೆಸಿದೆ. ಕರ್ನಾಟಕ ಪೊಲೀಸ್, ಸಹಾಯಕ ಪ್ರಾಧ್ಯಾಪಕರ ನೇಮಕ, ಆರೋಗ್ಯ ಇಲಾಖೆ ಸೇರಿದಂತೆ ಹಲವು ಹುದ್ದೆಗಳ ಭರ್ತಿಗೆ ತಯಾರಿಯಲ್ಲಿದೆ ಅದಕ್ಕಾಗಿ ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ತಯಾರಿ ನಡೆಸಬೇಕು.

ಹುದ್ದೆಗಳ ವಿವರ:

3,800 ಸಹಾಯಕ ಪ್ರಾಧ್ಯಾಪಕರ ನೇಮಕ:

Also read: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದಗಳಿಗೆ ನೇಮಕಾತಿ ಪ್ರಕಟಣೆ..

ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 396 ಪ್ರಾಂಶುಪಾಲರ ಹುದ್ದೆಗಳಲ್ಲಿ ಶೇ. 50 ರಷ್ಟು ಹುದ್ದೆ ಹಾಗೂ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 3,800 ಉಪನ್ಯಾಸಕರ ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆಯ ಅನುಮತಿ ಕೋರಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಖಾಲಿ ಇರುವ 396 ಪ್ರಾಂಶುಪಾಲರ ಹುದ್ದೆಗಳಲ್ಲಿ ಶೇ. 50 ರಷ್ಟು ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಈಗಾಗಲೇ ಅನುಮತಿ ನೀಡಿದೆ. ಆದಷ್ಟು ಬೇಗ ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭಿಸುತ್ತೇವೆ ಹಾಗೂ ಖಾಲಿ ಇರುವ 3,800 ಉಪನ್ಯಾಸಕರ ಹುದ್ದೆ ಭರ್ತಿಗೆ ಅನುಮತಿ ಕೋರಿದ್ದೇವೆ ಎಂದು ತಿಳಿಸಿದರು.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ:

Also read: ರಾಜ್ಯ ನೌಕರರ ವಿಮಾ ನಿಗಮ ಜ್ಯೂನಿಯರ್ ರೆಸಿಡೆಂಡ್ ಮತ್ತು ಟ್ಯೂಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ಸಿಕ್ಕಿದೆ. 2019 ರಿಂದ 2022ರ ತನಕ ಒಟ್ಟು 877 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಪೊಲೀಸ್ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಒಪ್ಪಿಗೆ ಸಿಕ್ಕಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಭರ್ತಿ ಮಾಡಲಾಗುತ್ತದೆ. 2019-20ನೇ ಸಾಲಿನಲ್ಲಿ 292 ಹುದ್ದೆ ಭರ್ತಿಯಾಗಲಿದೆ. ಇಲಾಖೆಯ ನೇಮಕಾತಿ ಕುರಿತು ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ ಆಇ 228 ವೆಚ್ಚ 11/2018 ದಿನಾಂಕ31/5/2019ರ ಸಹಸಮಿತಿರನ್ವಯ ಹೊರಡಿಸಲಾಗಿದೆ. ಶೀಘ್ರದಲ್ಲೇ ಈ ಕುರಿತು ಅಂತಿಮ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದೆ…..

ಆರ್ಥಿಕ ಇಲಾಖೆ ಅನುಮೋದನೆ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಈ ಕೆಳಕಂಡಂತೆ ಭರ್ತಿ ಮಾಡಲು ಮಂಜೂರಾತಿ ನೀಡಿ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. 2019-20 ರಿಂದ 2021-22ರ ತನಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು;

Also read: ಇಂಡಿಯನ್‌ ಏರ್‌ಫೋರ್ಸ್‌ನಲ್ಲಿ ಗ್ರೂಪ್ ‘X’ & ಗ್ರೂಪ್ ‘Y’ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ…

ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ಉಪ ಕಾರ್ಯಕ್ರಮಗಳಡಿ ಮಂಜೂರಾಗಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಅಹ್ವಾನಿಸಿದು ಅರವಳಿಕೆ ತಜ್ಞರು, ಪ್ರಸೂತಿ ತಜ್ಞರು, ಎಂಬಿಬಿಎಸ್ ವೈದ್ಯರು, ನಗರ ಆರೋಗ್ಯ ವೈದ್ಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಪ್ರಯೋಗಶಾಲಾ ತಂತ್ರಜ್ಞರ, ಹುದ್ದೆಗಳಿಗೆ ವಿವಿಧ ಕಾರ್ಯಕ್ರಮಗಳಡಿ ವಿದ್ಯಾರ್ಹತೆ ಆಧರಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಜೂನ್ 12 ರಂದು ಬೆಳಗ್ಗೆ 10.30 ರಿಂದ 2 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಶ್ರೀರಾಮನಗರ ರಸ್ತೆ, ದಾವಣಗೆರೆ, ಎಸ್.ಎಸ್. ಆಸ್ಪತ್ರೆ ಹಿಂಭಾಗ, ಎಂಸಿಸಿ ಕ್ಯಾಂಪ್ ಪಕ್ಕ, ದಾವಣಗೆರೆ ಇಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಅರ್ಜಿದಾರರು ಸೂಕ್ತ ಅರ್ಜಿಗಳನ್ನು ಪಡೆದು ಸ್ವಯಂ ದೃಢೀಕರಣ ವಿರುವ ವಿದ್ಯಾರ್ಹತೆ, ಮೀಸಲಾತಿ ಮತ್ತು ಅನುಭವಕ್ಕೆ ಸಂಬಂಧಿಸಿದ ಮೂಲ ದಾಖಲಾತಿಗಳು ಹಾಗೂ ಭಾವಚಿತ್ರದೊಂದಿಗೆ ಸ್ವಯಂ ಅಭ್ಯರ್ಥಿಯೇ ಹಾಜರಾಗಿ ಅದೇ ದಿನ ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಹಿಂತಿರುಗಿಸತಕ್ಕದ್ದು.