ಜ.23 ನೇತಾಜಿ ಸುಭಾಷ್ ಚಂದ್ರ ಬೋಸ್ ರ 120ನೇ ಜಯಂತಿ

0
963

ಜ.23 ನೇತಾಜಿ ಸುಭಾಷ್ ಚಂದ್ರ ಬೋಸ್ ರ 120ನೇ ಜಯಂತಿ

ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಸಂಭಾವಿತ): ಆಗಸ್ಟ್ ೧೮, ೧೯೪೫) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.

ನೇತಾಜಿ ಸುಭಾಷ್ ಚಂದ್ರ ಬೋಸ್ ರ 120ನೇ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ದಶಕಗಳಿಂದ ಬೇಡಿಕೆಯಲ್ಲಿರುವ ನೇತಾಜಿಯವರಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಹಿರಂಗಪಡಿಸಲು ತಮಗೆ ಅವಕಾಶ ಸಿಕ್ಕಿರುವುದು ಅವರಿಗೆ ನೀಡುವ ಗೌರವ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ನೇತಾಜಿಯವರ ಹುಟ್ಟುಹಬ್ಬದ ಅಂಗವಾಗಿ ದೇಶಾದ್ಯಂತ ಇಂದು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನೇತಾಜಿಯವರಿಗೆ ಪುಷ್ಪ ನಮನ ಸಲ್ಲಿಸಲಾಗುತ್ತದೆ.

ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಭಾರತಕ್ಕೆ ಮುಕ್ತಿ ಸಿಗಲು ನೇತಾಜಿಯವರು ಹೋರಾಡಲು ಪ್ರಮುಖ ಪಾತ್ರ ವಹಿಸಿದ್ದರು. ಅತ್ಯಂತ ಬುದ್ಧಿಶಾಲಿಗಳಾಗಿದ್ದ ನೇತಾಜಿಯವರು ದೇಶದ ಜನರ ಹಿತಾಸಕ್ತಿ ಬಯಸಿದ್ದು ಇಡೀ ಸಮಾಜದ ಬಡಬಗ್ಗರು ಮತ್ತು ದೀನದಲಿತರ ಏಳಿಗೆಗಾಗಿ ಶ್ರಮಿಸಿದ್ದರು ಎಂದು ಟ್ವೀಟ್ ಮೂಲಕ ಪ್ರಧಾನಿ ಪ್ರಶಂಸಿಸಿದ್ದಾರೆ.

ನೇತಾಜಿಯವರಿಗೆ ಸಂಬಂಧಪಟ್ಟ ದಾಖಲೆಗಳು http://www.netajipapers.gov.in ನಲ್ಲಿ ಲಭ್ಯವಾಗುತ್ತದೆ.ಈ ಮಧ್ಯೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಎಂ.ವೆಂಕಯ್ಯ ನಾಯ್ಡು, ನೇತಾಜಿಯವರನ್ನು ಕಟ್ಟಾ ರಾಷ್ಟ್ರವಾದಿ ಮತ್ತು ಭಾರತವನ್ನು ಬ್ರಿಟಿಷರ ಆಡಳಿತದಿಂದ ಮುಕ್ತಗೊಳಿಸಲು ನಿರಂತರವಾಗಿ ಹೋರಾಡುತ್ತಿದ್ದರು ಎಂದು ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 2016ರ ಜನವರಿಯಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಈ ಸ್ವಾತಂತ್ರ್ಯ ಹೋರಾಟಗಾರನಿಗೆ ಸಂಬಂಧಿಸಿದ, ಕೇಂದ್ರ ಸರ್ಕಾರದ ವಶದಲ್ಲಿದ್ದ ವರ್ಗೀಕೃತ ಕಡತಗಳನ್ನು ಬಹಿರಂಗಪಡಿಸುವ ಕೆಲಸಕ್ಕೆ ಚಾಲನೆ ನೀಡಿದರು. ಮೋದಿ ಅವರ ಪ್ರವೃತ್ತಿಗೆ ಅನುಗುಣವಾಗಿ ಈ ಕಾರ್ಯಕ್ರಮ ಭಾರಿ ಅಬ್ಬರದ ಪ್ರದರ್ಶನವಾಗಿಯೇ ನಡೆಯಿತು.