ಅನರ್ಹ ಶಾಸಕರಿಗಾಗಿ ಉಪಚುನಾವಣೆಯನ್ನು ಮುಂದೂಡಲು ಸಾಧ್ಯವಿಲ್ಲ ಸುಪ್ರೀಂಕೋರ್ಟ್; ಅನರ್ಹ ಶಾಸಕರಿಗೆ ಹೆಚ್ಚಿದ ಸಂಕಷ್ಟ.!

0
128

ರಾಜ್ಯದಲ್ಲಿ ಉಪ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಚುನಾವಣೆಗೆ ಸ್ಪರ್ಧಿಗಳು ತಯಾರಿಯಲ್ಲಿದ್ದಾರೆ. ಆದರೆ ಅನರ್ಹ ಶಾಸಕರಲ್ಲಿ ಭಯ ಹುಟ್ಟಿದ್ದು ಮತ್ತೆ ಸುಪ್ರಿಂ ಮೆಟ್ಟಿಲೇರಿ ಚುನಾವಣೆಯನ್ನು ಮುಂದೂಡುವಂತೆ ಮನವಿ ಸಲ್ಲಿಸಿದರು, ಈ ಕುರಿತು ಇಂದು ಪ್ರತಿಕ್ರಿಯೆ ನೀಡಿದ ಸುಪ್ರಿಂ ಅನರ್ಹ ಶಾಸಕರಿಗಾಗಿ ಉಪಚುನಾವಣೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದ್ದು, ಅದರಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಮಣ್ ನೇತೃತ್ವದ ತ್ರಿಸದಸ್ಯ ಪೀಠ ತಿರಸ್ಕರಿಸಿದ್ದು, ಉಪ ಚುನಾವಣೆಯನ್ನು ಮುಂದೂಡಲು ನಿರ್ದೇಶನ ನೀಡುವುದಿಲ್ಲ ಎಂದು ತಿಳಿಸಿದೆ.

Also read: ಸ್ವಂತ ಮನೆಯ ಕನಸು ಕಾಣುವ ಮಧ್ಯಮ ಮತ್ತು ಕೆಳ ವರ್ಗದ ಜನರಿಗೆ ಸಿಹಿ ಸುದ್ದಿ ನೀಡಿದ ನಿರ್ಮಲಾ ಸೀತಾರಾಮನ್.!

ಚುನಾವಣೆ ಮುಂದೂಡಲು ಸಾಧ್ಯವಿಲ್ಲ

ಹೌದು ಅನರ್ಹ ಶಾಸಕರ ಅರ್ಜಿ ವಿಚಾರಣೆ ಕುರಿತು ಸುಪ್ರೀಂಕೋರ್ಟ್​ ಇನ್ನು ತೀರ್ಪು ಪ್ರಕಟಿಸದ ಹಿನ್ನೆಲೆ ಉಪಚುನಾವಣೆ ಮುಂದೂಡುವಂತೆ ಕೋರಿ ಅವರು ಸುಪ್ರೀಂಕೋರ್ಟ್​ಗೆ ಸಲ್ಲಿಸಿ ಮನವಿಯನ್ನು ತ್ರಿಸದಸ್ಯ ಪೀಠ ತಿರಸ್ಕರಿಸಿದೆ. ಪ್ರಕರಣದ ವಿಚಾರಣೆ ನ್ಯಾ.ಎನ್​.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ನಡೆಯುತ್ತಿದೆ. ಈಗಾಗಲೇ ಸುದೀರ್ಘ ವಿಚಾರಣೆ ನಡೆಸಿರುವ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ನ್ಯಾ. ಎನ್.ವಿ. ರಮಣ ನೇತೃತ್ವದ ಪೀಠದ ಕಲಾಪ ಪಟ್ಟಿಯಲ್ಲಿ ಅನರ್ಹ ಶಾಸಕರ ತೀರ್ಪು ಪ್ರಕಟಿಸುವ ಮಾಹಿತಿ ಇಲ್ಲ. ಸೋಮವಾರದಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುವುದರಿಂದ ಉಪಚುನಾವಣೆಯನ್ನು ಮುಂದೂಡಿಕೆ ಮಾಡುವಂತೆ ಅನರ್ಹ ಶಾಸಕರ ಪರ ವಕೀಲ ಮುಕುಲ್​ ರೋಹ್ಟಗಿ ಸುಪ್ರೀಂ ಕೋರ್ಟ್​ ಮುಂದೆ ಮನವಿ ಸಲ್ಲಿಸಿದರು.

ರೊಹ್ಟಗಿ ಸಲ್ಲಿಸಿದ ಸಲ್ಲಿಸಿದ ಮನವಿಯನ್ನು ಮನವಿಯನ್ನು ಆಲಿಸಿದ ನ್ಯಾಯಾಧೀಶರು ಚುನಾವಣೆ ಮುಂದೂಡುವ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದರು. ಸೋಮವಾರದಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ. ಅನರ್ಹ ಶಾಸಕರು ಪ್ರಕರಣದ ತೀರ್ಪು ಬರಬೇಕಿದೆ. ಹಾಗಾಗಿ ಚುನಾವಣೆ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದರು. ಅನರ್ಹ ಶಾಸಕರಿಗಾಗಿ ಚುನಾವಣೆ ಮುಂದೂಡಲು ಸಾಧ್ಯವಿಲ್ಲ. ನಿಮ್ಮ ಅರ್ಜಿಯನ್ನು ಸಲ್ಲಿಸಿ, ಬುಧವಾರ ಪರಿಶೀಲನೆ ಮಾಡುತ್ತೇವೆ ಎಂದು ಸೂಚಿಸಿದರು. ನ್ಯಾಯಾಧೀಶರ ಸೂಚನೆಯಂತೆ ಮುಕುಲ್ ರೊಹ್ಟಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸೋಮವಾರ ಮತ್ತು ಮಂಗಳವಾರ ಸರ್ಕಾರಿ ರಜೆ ಹಿನ್ನೆಲೆ ಬುಧವಾರ ಅಥಾವ ಗುರುವಾರ ತೀರ್ಪು ಪ್ರಕಟ ಆಗುವ ಸಾಧ್ಯತೆ ಇದೆ. ಆದರೆ ಅಷ್ಟರೊಳಗೆ ಚುನಾವಣೆ ಪ್ರಕ್ರಿಯೆ ಆರಂಭವಾಗುವ ಹಿನ್ನೆಲೆ ಅನರ್ಹ ಶಾಸಕರು ಮತ್ತೆ ಚುನಾವಣೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

Also read: ಅಗತ್ಯಕ್ಕಿಂತ ಹೆಚ್ಚಿನ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ಕೂಡಲೇ ಖಾತೆಯನ್ನು ಮುಚ್ಚಿ ಇಲ್ಲವಾದಲ್ಲಿ ಬೀಳುತ್ತೆ ಭಾರಿ ದಂಡ!! .

ಚುನಾವಣೆ ಹಿನ್ನೆಲೆಯಲ್ಲಿ ರಾಣೆಬೆನ್ನೂರು ಮತ್ತು ಹಿರೇಕೆರೂರಿಗೆ ಬೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಹಲವು ಹಿರೇಕೆರೂರು ಹಾಗೂ ರೆಟ್ಟಿಹಳ್ಳಿ ತಾಲೂಕಿನಲ್ಲಿನ ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿ ಲೋಕೋಪಯೋಗಿ ಇಲಾಖೆ ವತಿಯಿಂದ 85.19ಕೋಟಿ ವೆಚ್ಚದಲ್ಲಿ 20 ಕಾಮಗಾರಿ, ಜಲಸಂಪನ್ಮೂಲ ಹಾಗೂ ನೀರಾವರಿ ನಿಗಮದಿಂದ 25 ಕೋಟಿ ವೆಚ್ಚದಲ್ಲಿ ತುಂಗಾ ಮೇಲ್ದಂಡೆ ಯೋಜನೆಯ ಕಟ್ ಕವರ್ (ಆರ್ಚ ಟೈಪ್ ) ನಿರ್ಮಾಣ, ಪಂಚಾಯಿತ್ ರಾಜ್ಯ ಇಂಜಿನೀಯರಿಂಗ್ ಇಲಾಖೆಯಿಂದ‌ 9.45 ಕೋಟಿ ವೆಚ್ಚದ 13 ಕಾಮಗಾರಿಗಳು, ಸಮಾಜಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗಗಳ ಇಲಾಖೆಯಿಂದ 1.56 ಕೋಟಿ ವೆಚ್ಚದಲ್ಲಿ ಒಂದು ಕಾಮಾಗರಿಗೆ ಶಂಕು‌ಸ್ಥಾಪನೆ ಸಂಸ್ಥಾಪನೆ ಮಾಡಲಾಗಿದೆ‌. ಈ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು‌ ಹೇಳಿದರು.