ರಾಜ್ಯ ರಾಜಕೀಯಕ್ಕೆ ಸುಪ್ರೀಂ ಕೋರ್ಟ್ ತೀರ್ಪು; ಅನರ್ಹತೆ ನಿರ್ಧಾರ ಕೈಗೊಳ್ಳಲು ಸ್ಪೀಕರ್ ಅವಕಾಶ, ಮೈತ್ರಿಗೆ ನಾಳೆಯೇ ಕೊನೆಯ ದಿನ..

0
332

ರಾಜ್ಯ ರಾಜಕೀಯ ಕೊನೆಯ ಹಂತದಲ್ಲಿದ್ದು, ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ನಿಂತಿತ್ತು ಇದಕ್ಕೆ ಸಂಬಂಧಪಟ್ಟಂತೆ ಇಂದು ಸುಪ್ರಿಂ ತೀರ್ಪು ನೀಡಿದ್ದು. ಇಬ್ಬರ ಹಕ್ಕುಗಳನ್ನೂ ಎತ್ತಿ ಹಿಡಿದಿದೆ. ಆದರೆ ಸುಪ್ರೀಂ ಕೋರ್ಟ್‌ನ ಈ ತೀರ್ಪಿನಿಂದ ಸರ್ಕಾರಕ್ಕೆ ಪತನಗೊಳ್ಳುವ ಭೀತಿ ಎದುರಾಗಿದೆ. ಸುಪ್ರಿಂ ಹೇಳುವಂತೆ ಹದಿನೈದು ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ತೀರ್ಮಾನ ಕೈಗೊಳ್ಳಬೇಕು. ಅವರ ತೀರ್ಮಾನವೇ ಅಂತಿಮ. ಕಾಲ ಮಿತಿಯಲ್ಲಿ ಸ್ಪೀಕರ್ ತೀರ್ಪು ಪ್ರಕಟಿಸಬೇಕು ತ್ರಿಸದಸ್ಯ ಪೀಠ ಅದೇಶಿಸಿದೆ.

Also read: ರೆಸಾರ್ಟ್ ರಾಜಕೀಯ ಮಾಡುತ್ತಿರುವ ನಾಯಕರ ವಿರುದ್ಧ ರೈತರಿಂದ ಬುಗಿಲೆದ್ದ ‘ಕ್ಯಾಕರಿಸಿ ಉಗಿಯುವ’ ಛೀ.. ಥೂ..ಚಳುವಳಿ..

ಹೌದು ಹೌದು ಕಳೆದೆರಡು ವಾರದಿಂದ ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾ ನಡೆಯುತ್ತಿದೆ. ಒಂದೆಡೆ 15 ಅತಪ್ತ ಶಾಸಕರು ರಾಜೀನಾಮೆ ಸಲ್ಲಿಸಿ ಮುಂಬೈ ಹೋಟೇಲ್ ಸೇರಿದ್ದರೆ, ಇತ್ತ ದೋಸ್ತಿ ನಾಯಕರು ಅವರ ಮನವೊಲಿಲು ಯತ್ನಿಸಿದ್ದರು. ಆದರೆ ಯಾವುದಕ್ಕೂ ಜಗ್ಗದ ಅತೃಪ್ತ ಶಾಸಕರು ರಾಜೀನಾಮೆ ಅಂಗೀಕಾರಕ್ಕೆ ಸುಪ್ರೀಂ ಬಾಗಿಲು ತಟ್ಟಿದ್ದರು. ಹೀಗಿರುವಾಗ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸುವ ದಾಳವೆಸೆದಿದ್ದರು. ಅಲ್ಲದೇ ಎಲ್ಲಾ ಶಾಸಕರು ಸದನಕ್ಕೆ ಹಾಜರಾಗಬೇಕೆಂದು ವಿಪ್ ಜಾರಿಗೊಳಿಸಿದ್ದರು. ಇದಕ್ಕೆ ಸುಪ್ರಿಂ ಹೇಳಿದ ಪ್ರಕಾರ ‘‘ಅಧಿವೇಶನದಲ್ಲಿ ಭಾಗವಹಿಸುವುದು ಶಾಸಕರಿಗೆ ಬಿಟ್ಟ ವಿಚಾರ. ಈ ಕುರಿತು ಅವರನ್ನು ಒತ್ತಾಯ ಮಾಡುವಂತಿಲ್ಲ. ಸ್ಪೀಕರ್ ನಿರ್ಧಾರದವರೆಗೂ ಶಾಸಕರಿಗೆ ಅಧಿವೇಶನದಲ್ಲಿ ಭಾಗವಹಿಸಲು ಒತ್ತಾಯಿಸುವಂತಿಲ್ಲ. ಶಾಸಕರಿಗೆ ವಿಪ್ ಅನ್ವಯವಾಗುವುದಿಲ್ಲ. ರಾಜೀನಾಮೆ ಪ್ರಕರಣ ಅನುಚ್ಚೇದ 190ರ ಅಡಿ ಇತ್ಯರ್ಥ ಮಾಡಬೇಕು. ನಾಳೆಯೇ ವಿಶ್ವಾಸಮತ ಸಲ್ಲದು’’ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.

ದೋಸ್ತಿಗೆ ಎದುರಾದ ಸಂಕಷ್ಟ?

Also read: ರೇಷನ್‌ ಕಾರ್ಡ್ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ; ಶೀಘ್ರದಲ್ಲೇ ರೇಷನ್‌ ಕಾರ್ಡ್ ಪೋರ್ಟೆಬಿಲಿಟಿ ಜಾರಿಗೆ..

ಸರ್ಕಾರ ಉಳಿಸಿಕೊಳ್ಳುವ ಯತ್ನದಲ್ಲಿದ್ದ ದೋಸ್ತಿಗೆ ಸುಪ್ರೀಂ ತೀರ್ಪಿನಿಂದ ಹಿನ್ನಡೆಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಸರ್ಕಾರ ನಾಳೆ ಗುರುವಾರ ವಿಶ್ವಾಸಮತ ಯಾಚಿಸಬಹುದು ಎಂದು ತಿಳಿಸಿದೆಯಾದರೂ, ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವುದು ಅವರ ವಿವೇಚನೆಗೆ ಬಿಟ್ಟಿದ್ದು ಎಂದಿದ್ದಾರೆ. ಅಲ್ಲದೇ ಈಗಾಗಲೇ ಸರ್ರಕಾರ ಜಾರಿಗೊಳಿಸಿರುವ ವಿಪ್ ರಾಜೀನಾಮೆ ಸಲ್ಲಿಸಿರುವ 15 ಅತೃಪ್ತ ಶಾಸಕರಿಗೆ ಅನ್ವಯಿಸುವುದಿಲ್ಲ. ಹೀಗಾಗಿ ಅವರು ಅನರ್ಹಗೊಳ್ಳುವ ಬೀತಿಯಿಂದಲೂ ಪಾರಾಗಿದ್ದಾರೆ. ಒಂದು ವೇಳೆ ಅತೃಪ್ತ ಶಾಸಕರು ವಿಶ್ವಾಸಮತ ಯಾಚನೆ ವೇಳೆ ಹಾಜರಾಗದಿದ್ದರೆ ಸರ್ಕಾರ ಅಲ್ಪಮತಕ್ಕೆ ಕುಸಿದು ಪತನಗೊಳ್ಳಲಿದೆ. ಈ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ 5 ವರ್ಷದ ಅವಧಿ ಪೂರ್ಣಗೊಳಿಸುವ ಮೊದಲೇ ಬೀಳಲಿದೆ.

ಅತೃಪ್ತ ಶಾಸಕರ ಪರ ವಾದ

Also read: ಇನ್ಮುಂದೆ ಬೇಕಾಬಿಟ್ಟಿ ವಾಹನ ಚಲಾಯಿಸುವ ಮುನ್ನ ಎಚ್ಚರ; ಆಕ್ಸಿಡೆಂಟ್ ಮಾಡಿದ್ರೆ ಮೃತರಿಗೆ, ಗಾಯಾಳುಗಳಿಗೆ ನೀವೆ ಪರಿಹಾರ ಕೊಡಬೇಕು..

10 ಶಾಸಕರು ಜುಲೈ 10ರಂದೇ ರಾಜೀನಾಮೆ ನೀಡಿದ್ದಾರೆ. ಆರ್ಟಿಕಲ್ 190 ಮತ್ತು ಶೆಡ್ಯೂಲ್ 10ರ ನಡುವೆ ವ್ಯತ್ಯಾಸ ಇದ್ದು ಸ್ಪೀಕರ್ ನಿರ್ಧಾರವನ್ನು ಕೋರ್ಟ್ ಪ್ರಶ್ನಿಸಬಹುದು. ಅನರ್ಹತೆ ಬಾಕಿ ಇರೋದು ರಾಜೀನಾಮೆ ಸ್ವೀಕಾರಕ್ಕೆ ಅಡ್ಡಿಯಾಗಬಾರದು. ಉಮೇಶ್ ಜಾಧವ್ ಮೇಲೆ ಅನರ್ಹತೆ ದೂರು ಇದ್ದರೂ ರಾಜೀನಾಮೆ ಅಂಗೀಕರಿಸಲಾಗಿತ್ತು. ಅದೇ ರೀತಿ ಎಲ್ಲ ಶಾಸಕರು ರಾಜೀನಾಮೆಯನ್ನು ಅಂಗೀಕರಿಸಬೇಕು. ಈ ವಿಚಾರದಲ್ಲಿ ಸ್ಪೀಕರ್ ದ್ವಂದ್ವ ನೀತಿಯನ್ನು ಹೊಂದಿದ್ದಾರೆ. ಶಾಸಕರು ಅನರ್ಹ ಮಾಡುವಂತಹ ತಪ್ಪು ಏನು ಮಾಡಿದ್ದಾರೆ? ಅನರ್ಹತೆಗೊಳಿಸಲು ಯಾವುದೇ ಕಾರಣ ಇಲ್ಲ. ನಮ್ಮ ಕಕ್ಷಿದಾರರ ಮೇಲೆ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಆರೋಪವನ್ನು ಹೊರಿಸಲಾಗಿದೆ. ಶಾಸಕರು ಇಷ್ಟಪಟ್ಟಲ್ಲಿ ನಿರ್ಧಾರ ತೆಗೆದುಕೊಳ್ಳಲು ಸರ್ವ ಸ್ವತಂತ್ರರು. ಎಲ್ಲ ಶಾಸಕರು ನಿಯಮಬದ್ಧವಾಗಿಯೇ ರಾಜೀನಾಮೆ ನೀಡಿದ್ದಾರೆ. ಹಾಗಾಗಿ ಈ ಕೂಡಲೇ ಸ್ಪೀಕರ್ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಮುಕುಲ್ ರೋಹಟಗಿ ವಾದ ಮಂಡಿಸಿದ್ದರು.