ಯೋಧ ತೇಜ್ ಬಹದ್ದೂರ್ ಯಾದವ್‌ ಬಿಎಸ್‌ಎಫ್ ಸೇವೆಯಿಂದ ವಜಾ

0
294

ನವದೆಹಲಿ: ಬಿಎಸ್‌ಎಫ್ ಯೋಧರಿಗೆ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಫೇಸ್‌ಬುಕ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿದ್ದ ಬಿಎಸ್‌ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.   ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ‘ಅಶಿಸ್ತಿನ’ ಕಾರಣ ನೀಡಿ ಸೇವೆಯಿಂದ ವಜಾಗೊಳಿಸಲಾಗಿದೆ. ಬಿಎಸ್‌ಎಫ್ ಕಾಯ್ದೆ ಮತ್ತು ನಿಯಮಗಳ ಅನ್ವಯ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಸ್‌ಎಫ್ ಮೂಲಗಳು ತಿಳಿಸಿವೆ.

ಬಿಎಸ್‌ಎಫ್ ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ತೇಜ್ ಬಹದ್ದೂರ್ ಯಾದವ್ ಅವರು ಫೇಸ್‌ಬುಕ್‌ನಲ್ಲಿ ಹಾಕಿದ್ದ ವಿಡಿಯೊ ವೈರಲ್ ಆಗಿತ್ತು. ಈ ಬಗ್ಗೆ ಪ್ರಧಾನಿ ಕಾರ್ಯಾಲಯವು ಕೇಂದ್ರ ಗೃಹ ಸಚಿವಾಲಯ ಹಾಗೂ ಬಿಎಸ್‌ಎಫ್ ಕಡೆನಿಂದ ವರದಿ ಕೇಳಿತ್ತು.   ವಿಡಿಯೊ ವೈರಲ್ ಆಗುತ್ತಿದ್ದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಯೋಧರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಕ  ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು.    ಇದನ್ನೂ ಓದಿ… ಫೇಸ್‍ಬುಕ್ ವಿಡಿಯೊ ಅಪ್‍ಲೋಡ್ ಮಾಡಿದ್ದ ಬಿಎಸ್‍ಎಫ್ ಯೋಧನ ಬಗ್ಗೆ ತನಿಖೆ ಆರಂಭ ಫೇಸ್‍ಬುಕ್ ಖಾತೆಯಲ್ಲಿ ವಿಡಿಯೊ ಅಪ್‍ಲೋಡ್ ಮಾಡಿದ್ದು ಯೋಧ ತೇಜ್ ಬಹದ್ದೂರ್ ಅಲ್ಲ! ಸಾಮಾಜಿಕ ತಾಣದಲ್ಲಿ ಯೋಧರು ಫೋಟೊ,ವಿಡಿಯೊ ಪೋಸ್ಟ್ ಮಾಡಬಾರದು ಎಂದು ಕೇಂದ್ರ ಸರ್ಕಾರ ಆದೇಶಿಸಿತ್ತು!