ಕೇಂದ್ರ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಸೂಚನೆ; ಫೆಬ್ರುವರಿ 20 ರ ನಂತರ ಸರ್ಕಾರಿ ನೌಕರರ ವರ್ಗಾವಣೆ, ಹೊಸ ನೇಮಕಾತಿ ಬಂದ್..

0
449

ಲೋಕಸಭಾ ಚುನಾವಣೆ ತಯಾರಿಯಲ್ಲಿರುವ ಕೇಂದ್ರ ಸರ್ಕಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೌಕರರ ವರ್ಗಾವಣೆ, ನೇಮಕಾತಿ ಮಾಡದಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ ನೀಡಿದ್ದು. ಯಾವುದೇ ಕಾರಣಕ್ಕೂ ಈ ತಿಂಗಳ 20 ರ ನಂತರ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವುದು ಇಲ್ಲವೇ ನಿಯೋಜನೆ ಸೇರಿದಂತೆ ಹೊಸದಾಗಿ ನೇಮಕಾತಿಗೆ ಆದೇಶ ಹೊರಡಿಸದಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಸೂಚನೆ ಕೊಟ್ಟಿದೆ.

Also read: ನಿಮಗೂ ಹುತಾತ್ಮ ಸೈನಿಕರ ಕುಟುಂಬಗಳಿಗೆ ಧನ ಸಹಾಯ ಮಾಡುವ ಇಚ್ಛೆ ಇದ್ರೆ ಈ ಆ್ಯಪ್​ ಮೂಲಕ ಹುತಾತ್ಮ ಸೈನಿಕರ ಕುಟುಂಬಕ್ಕೆ ನೆರವಾಗಿ..

ಹೌದು ಈ ತಿಂಗಳ 20ರೊಳಗೆ ಸರ್ಕಾರಿ ನೌಕರರನ್ನು ವರ್ಗಾವಣೆ ಗೊಳಿಸುವುದು, ಹೆಚ್ಚುವರಿಯಾಗಿ ನಿಯೋಜನೆ, ಹೊಸದಾಗಿ ನೇಮಕ ಮಾಡಿಕೊಳ್ಳುವುದು ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಬೇಕೆಂದು ಸೂಚಿಸಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಪರೋಕ್ಷವಾಗಿ ಸಲಹೆ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದ ಪ್ರಧಾನ ಕಾರ್ಯದರ್ಶಿ ನರೇಂದ್ರ .ಎನ್ ಬುಟಲಿಯಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್‍ಗೆ ಪತ್ರ ಬರೆದಿದ್ದಾರೆ.

ಎಲ್ಲಾ ರಾಜ್ಯಗಳಿಗೂ ಪತ್ರ?

ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಚುನಾವಣಾಧಿಕಾರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ನರೇಂದ್ರ .ಎನ್ ಬುಟಲಿಯಾ, ಮಾರ್ಚ್ ತಿಂಗಳಿನಲ್ಲಿ ಬಹುತೇಕ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ ಎಂಬ ಸುಳಿವು ನೀಡಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಜಿಲ್ಲಾಧಿಕಾರಿಗಳು, ಸಿಇಓ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಲೋಕಸಭೆ ಚುನಾವಣೆಗೆ ಕೈಗೊಳ್ಳಬೇಕಾದ ಪೂರ್ವ ಸಿದ್ಧತೆಗಳ ಬಗ್ಗೆ ಸಲಹೆಗಳನ್ನು ನೀಡಲಿದ್ದಾರೆ.

ನಾಲ್ಕು ವರ್ಷ ಕಾರ್ಯ ನಿರ್ವಹಿಸಿದ್ದರೆ ಎತ್ತಂಗಡಿ?

Also read: ಖಾಸಗಿ ಕಂಪೆನಿಯಲ್ಲಿ ಕನ್ನಡಿಗರಿಗೆ ಮೀಸಲಾತಿ, ಆದರೆ ಇದು ಐಟಿ-ಬಿಟಿಗೆ ಅನ್ವಯ ಅಗೋಲ್ವಂತೆ, ಇದು ಕೇವಲ ಎಲೆಕ್ಷನ್ ಗಿಮ್ಮಿಕ್?

ಚುನಾವಣಾ ಆಯೋಗ ಕಳುಹಿಸಿದ ಪತ್ರ ಸೂಚನೆಯಂತೆ ಹಿರಿಯ ಅಧಿಕಾರಿಯಿಂದ ಹಿಡಿದು ಒಂದೇ ಸ್ಥಳದಲ್ಲಿ ನಾಲ್ಕು ವರ್ಷ ಕಾರ್ಯ ನಿರ್ವಹಿಸಿದ್ದರೆ ಅಂತಹ ಅಧಿಕಾರಿಯನ್ನು ಕೂಡಲೇ ಬೇರೊಂದು ಸ್ಥಳಕ್ಕೆ ವರ್ಗಾವಣೆ ಮಾಡಬೇಕು. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮುಖ್ಯಮಂತ್ರಿ ಸೇರಿದಂತೆ ಸಂಬಂಧಪಟ್ಟ ಇಲಾಖಾ ಸಚಿವರ ಗಮನಕ್ಕೆ ತರಬೇಕೆಂದು ಸೂಚಿಸಲಾಗಿದೆ. ಅದರಂತೆ ಸತತವಾಗಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸಿರುವ ಅಧಿಕಾರಿಗಳ ಪಟ್ಟಿಯನ್ನು ಸಿದ್ಧಪಡಿಸಿ ಸರ್ಕಾರದ ಗಮನಕ್ಕೆ ತರುವುದು ನಿಮ್ಮ ಕರ್ತವ್ಯ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಸರ್ಕಾರ ವರ್ಗಾವಣೆ ಮಾಡದಿದ್ದರೆ ನಂತರ ಆಯೋಗವೇ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.

ಶಾಸಕರ ಕನಸು ಭಗ್ನ?

ಜೆಡಿಎಸ್‍ನಲ್ಲಿ ಬಾಕಿ ಇದ್ದ ಕೆಲವು ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ತೀರ್ಮಾನಿಸಿದ್ದರು. ಈ ಮೂಲಕ ಅಸಮಾಧಾನಗೊಂಡಿರುವ ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಯಾವುದೇ ರೀತಿಯ ಭಿನ್ನಮತಕ್ಕೆ ಅವಕಾಶವಿಲ್ಲದಂತೆ ಒಗ್ಗಟ್ಟಿನ ಮೂಲಕ ಹೆಚ್ಚು ಸ್ಥಾನ ಗಳಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿತ್ತು. ಆದರೆ ಹೊಸದಾಗಿ ನೇಮಕಾತಿ ಆದೇಶ ಮಾಡಬಾರದು ಎಂದು ಚುನಾವಣಾ ಆಯೋಗ ಸೂಚಿಸಿರುವ ಹಿನ್ನೆಲೆಯಲ್ಲಿ ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕಾತಿ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.