ಅಂದು ವಾರಂಗಲ್ ಎನ್‍ಕೌಂಟರ್ ಮಾಡಿದ್ದು, ಇಂದು ಪಶುವೈದ್ಯೆ ಅತ್ಯಾಚಾರಿಗಳನ್ನೂ ಎನ್‍ಕೌಂಟರ್ ಮಾಡಿದ್ದು ವೀರ ಕನ್ನಡಿಗ ವಿಶ್ವನಾಥ್ ಸಜ್ಜನವರ್.!

0
255

ಎನ್ಕೌಂಟರ್ ಮಾಡಿದ ಪೊಲೀಸ್ ಆಯುಕ್ತರು ಕರ್ನಾಟಕದ ಹುಬ್ಬಳ್ಳಿಯವರು.

ಪಶುವೈದ್ಯೆಯ ಮೇಲೆ ಅತ್ಯಾಚಾರ ಮಾಡಿ ಜೀವಂತವಾಗಿ ಸುಟ್ಟು ಹಾಕಿದ ಪಾಪಿಗಳನ್ನು ಎನ್​ಕೌಂಟರ್ ಮಾಡಿದ್ದು, ಕನ್ನಡಿಗ ವಿಶ್ವನಾಥ್ ಸಜ್ಜನವರ್ ಎನ್ನುವುದು ಹೆಮ್ಮೆಯ ವಿಚಾರ ಎಂದು ದೇಶವೇ ಮೆಚ್ಚುಗೆಯ ವ್ಯಕ್ತಪಡಿಸಿದೆ. ಏಕೆಂದರೆ ಎನ್ಕೌಂಟರ್ ಮಾಡಿದ ಪೊಲೀಸ್ ಆಯುಕ್ತರು ಕರ್ನಾಟಕದ ಹುಬ್ಬಳ್ಳಿ ಮೂಲದವರು ಎನ್ನುವುದು ವಿಶೇಷವಾದರೆ ಎನ್ ಕೌಂಟರ್ ಸ್ಪೆಷಲಿಸ್ಟ್ ಎಂದೇ ಹೆಸರು ಪಡೆದಿದ್ದಾರೆ. ಈ ಹಿಂದೆ ಕೂಡ ವಿಶ್ವನಾಥ್ ಸಜ್ಜನರ್ ವಾರಂಗಲ್ ಆಸಿಡ್ ದಾಳಿಯ ಮೂವರು ಆರೋಪಿಗಳನ್ನು ಎನ್ಕೌಂಟರ್ ಮೂಲಕ ಹತ್ಯೆಗೈದಿದ್ದರು. ಈ ಎರಡು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡಿಗ ವಿಶ್ವನಾಥ್ ಸಜ್ಜನವರ್ ಅವರು ಸ್ಟಾರ್ ಆಗಿದ್ದಾರೆ.

2008 ರಲ್ಲಿಯೂ ಎನ್​ಕೌಂಟರ್?

ಹೌದು ಇಂದು ಜನರ ಬೇಡಿಕೆಯಂತೆ ಕೊನೆಗೂ ಪೊಲೀಸರು ವಾರಂಗಲ್ ಪ್ರಕರಣದ ಮಾದರಿಯಲ್ಲೇ ಪಶುವೈದ್ಯೆ ಆರೋಪಿಗಳನ್ನು ಎನ್​ಕೌಂಟರ್ ಮಾಡಿದ್ದಾರೆ.ಅತ್ಯಾಚಾರ ಆರೋಪಿಗಳನ್ನು ಎನ್​ಕೌಂಟರ್ ಮಾಡಿದ ಕನ್ನಡಿಗ ವಿಶ್ವನಾಥ್ ಸಜ್ಜನವರ್-ನವರು ಹುಬ್ಬಳ್ಳಿಯರಾಗಿದ್ದು ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2008 ಡಿಸೆಂಬರ್ 13. ವಾರಂಗಲ್ ಜಿಲ್ಲೆಯ ಕಾಕತೀಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದ ಸ್ವಪ್ನಿಕ ಮತ್ತು ಪ್ರಣೀತ ಎಂದಿನಂತೆ ಕಾಲೇಜು ಮುಗಿಸಿ ಬಸ್ಸಿಗಾಗಿ ಬಸ್ ನಿಲ್ದಾಣದಲ್ಲಿ ಕಾದು ನಿಂತಿದ್ದರು.

ಈ ವೇಳೆ ಅದೇ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದ ಎಸ್. ಶ್ರೀನಿವಾಸ ರಾವ್ (25), ಪಿ. ಹರಿಕೃಷ್ಣ (24) ಹಾಗೂ ಬಿ. ಸಂಜಯ್ (22) ಬಸ್ ನಿಲ್ದಾಣದಲ್ಲಿ ಯುವತಿಯರ ಜೊತೆಗೆ ಗಲಾಟೆ ಮಾಡಿ. ಆಸಿಡ್ ಅನ್ನು ಇಬ್ಬರೂ ಯುವತಿಯರ ಮುಖಕ್ಕೆ ಎರಚಿ ಪರಾರಿಯಾಗಿದ್ದರು. ಆಸಿಡ್ ದಾಳಿಯಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ಯುವತಿ ಸ್ವಪ್ನಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ತನಿಖೆಯ ವೇಳೆ ಬಾಯ್ಬಿಟ್ಟಿದ್ದ ಪ್ರಮುಖ ಆರೋಪಿ ಶ್ರೀನಿವಾಸ್ ರಾವ್ ಸ್ವಪ್ನಿಕ ತನ್ನ ಪ್ರೇಮ ನಿವೇದನೆಯನ್ನು ಒಪ್ಪಿಕೊಳ್ಳದ ಕಾರಣಕ್ಕೆ ಆಸಿಡ್ ದಾಳಿ ನಡೆಸಿದ್ದಾಗಿ ತಿಳಿಸಿದ್ದ.

ಈ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಆಂಧ್ರಪ್ರದೇಶದ ಜನ ಬೀದಿಗಿಳಿದು ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಆರೋಪಿಗಳನ್ನು ಸಾರ್ವಜನಿಕವಾಗಿ ಗುಂಡಿಟ್ಟು ಕೊಲ್ಲುವಂತೆ ಆಗ್ರಹಿಸಿದ್ದರು. ಅಂದಿನ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿಗೆ ಈ ಪ್ರಕರಣ ದೊಡ್ಡ ತಲೆ ನೋವಾಗಿ ಪರಿಣಮಿಸಿತ್ತು. ಕೊನೆಗೆ ಆಸಿಡ್ ದಾಳಿ ನಡೆದು ಒಂದು ವಾರದ ತರುವಾಯ ಸ್ಥಳ ಮಹಜರ್ ಹೆಸರಲ್ಲಿ ದಾಳಿ ನಡೆದ ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದಿದ್ದ ಪೊಲೀಸರು ಆತ್ಮರಕ್ಷಣೆಯ ಹೆಸರಲ್ಲಿ ಮೂವರು ಆರೋಪಿಗಳನ್ನು ಹೊಡೆದುರುಳಿಸಿದ್ದರು. ಯುವತಿಯರಿಗೆ ಮೇಲೆ ಆಸಿಡ್ ದಾಳಿ ನಡೆಸಿದ್ದ ಪಾತಕಿಗಳ ಎನ್ಕೌಂಟರ್​ಗೆ ಇಡೀ ರಾಜ್ಯ ಮತ್ತು ದೇಶ ಮೆಚ್ಚುಗೆ ಸೂಚಿಸಿತ್ತು. ಮತ್ತೆ ಈಗ ವೀರ ಕನ್ನಡಿಗ ವಿಶ್ವನಾಥ್ ‘ಕಾಮುಕರನ್ನು ಎನ್‍ಕೌಂಟರ್ ಮಾಡಿದ್ದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

Also read: ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಸುಟ್ಟು ಹಾಕಿದ ನಾಲ್ವರು ಆರೋಪಿಗಳು ಎನ್​ಕೌಂಟರ್; ಪೊಲೀಸರ ಕ್ರಮಕ್ಕೆ ದೇಶವೇ ಮೆಚ್ಚುಗೆ.!