ಬಿಗ್ ಬ್ರೇಕಿಂಗ್ ಜಮ್ಮು-ಕಾಶ್ಮೀರದಲ್ಲಿ ಯುದ್ದದ ವಾತಾವರಣ; 370 ವಿಶೇಷ ಸ್ಥಾನಮಾನಕ್ಕೆ ಅಂತಿಮ?ಕಾಶ್ಮೀರದಲ್ಲಿ ನಿಷೇಧಾಜ್ಞೆ ಜಾರಿ..

0
299

ಜಮ್ಮು-ಕಾಶ್ಮೀರದಲ್ಲಿ ಯುದ್ದದ ವಾತಾವರಣ ಮೂಡಿದ್ದು, ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಚುನಾವಣೆಯ ಸಮಯದಲ್ಲಿ ಆಶ್ವಾಸನೆಯಂತೆ ಜಮ್ಮು-ಕಾಶ್ಮೀರದ ಕಲಂ 370 ಅಡಿಯಲ್ಲಿ ನೀಡಲಾಗಿರುವ ವಿಶೇಷ ಸ್ಥಾನಮಾನಕ್ಕೆ ಅಂತಿಮ ಹಾಡಲು ಮುಂದಾಗಿದ್ದು, ಇದರ ಪರಿಣಾಮ ಕಣಿವೆ ರಾಜ್ಯದಲ್ಲಿ ಯುದ್ದ ನಡೆಯುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಗೌಬಾ ಅವರೊಂದಿಗೆ ಸಭೆ ನಡೆಸಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಯುದ್ದದ ವಾತಾವರಣ?

ಕಳೆದೊಂದು ವಾರದಲ್ಲಿ ಕೇಂದ್ರ ಸರ್ಕಾರ 38,000 ಹೆಚ್ಚುವರಿ ಯೋಧರನ್ನು ಜಮ್ಮು-ಕಾಶ್ಮೀರಕ್ಕೆ ರವಾನಿಸಿದೆ. ಕೇಂದ್ರದ ಈ ನಡೆ ದೇಶಾದ್ಯಂತ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಇದಕ್ಕೆ ಕಾರಣ ಕೇಂದ್ರದ ಐತಿಹಾಸಿಕ ನಿರ್ಣಯ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ತಾನು ನೀಡಿದ ಆಶ್ವಾಸನೆಯಂತೆ ಜಮ್ಮು-ಕಾಶ್ಮೀರದ ಕಲಂ 370 ಅಡಿಯಲ್ಲಿ ನೀಡಲಾಗಿರುವ ವಿಶೇಷ ಸ್ಥಾನಮಾನಕ್ಕೆ ಕೊನೆಗೂ ಕತ್ತರಿ ಹಾಕಲು ಮುಂದಾಗಿದೆ. ಪರಿಣಾಮ ಇಂದು ಇಡೀ ಕಾಶ್ಮೀರದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.
ಕೇಂದ್ರದ ಈ ನಿರ್ಣಯವನ್ನು ಸ್ಥಳೀಯ ರಾಜಕೀಯ ನಾಯಕರು ಆರಂಭದಿಂದಲೂ ವಿರೋಧಿಸುತ್ತಲೇ ಬಂದಿದ್ದಾರೆ. ಕಣಿವೆ ರಾಜ್ಯಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದರೆ ಜಮ್ಮು-ಕಾಶ್ಮೀರ ಸಾಂವಿಧಾನಿಕವಾಗಿ ಕಾನೂನುಬದ್ಧವಾಗಿ ಭಾರತದಿಂದ ಬೇರ್ಪಟ್ಟಂತಾಗುತ್ತದೆ. ಇದು ಸಾಧ್ಯವಾದರೆ ಪ್ರತ್ಯೇಕತಾವಾದಿಗಳ ಹಾದಿ ಮತ್ತಷ್ಟು ಸಲೀಸಾಗಲಿದೆ ಎಂಬುದು ಅವರ ಅಂಬೋಣ. ಆದರೂ, ಅವರ ಮಾತಿಗೆ ಮಣೆ ಹಾಕದ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಓಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಪ್ರಮುಖ ನಾಯಕರನ್ನು ಗೃಹಬಂಧನದಲ್ಲಿರಿಸಿದೆ.

ಭಯೋತ್ಪಾದಕರ ದಾಳಿ ಬೆದರಿಕೆ ಹಿನ್ನಲೆ ಇತ್ತೀಚೆಗಷ್ಟೇ ಕಾಶ್ಮೀರದ ಕಣಿವೆಗೆ 35 ಸಾವಿರ ಸೈನಿಕರನ್ನು ಸ್ಥಳಾಂತರಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಶುಕ್ರವಾರ ಅಮರನಾಥ ಯಾತ್ರೆಯನ್ನು ಮೊಟಕುಗೊಳಿಸಿದೆ. ಅಲ್ಲದೆ, ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರು ರಾಜ್ಯವನ್ನು ತೊರೆಯುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆ ಸಾವಿರಾರು ಅಮರನಾಥ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರು ಕಾಶ್ಮೀರವನ್ನು ತೊರೆದಿದ್ದಾರೆ. ಈ ಕುರಿತು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಶೇ.95ರಷ್ಟು ಅಂದರೆ ಸುಮಾರು 20 ಸಾವಿರಕ್ಕೂ ಅಧಿಕ ಭಾರತ ಹಾಗೂ ವಿದೇಶಿ ಪ್ರವಾಸಿಗರು ಹಾಗೂ ಯಾತ್ರಾರ್ಥಿಗಳು ಶುಕ್ರವಾರದ ವೇಳೆಗೆ ಕಾಶ್ಮೀರ ತೊರೆದಿದ್ದಾರೆ ಎಂದು ತಿಳಿಸಿದ್ದಾರೆ.

370 ಮತ್ತು 35ಎ ವಿಧಿ ರದ್ದು?

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನಬದ್ಧವಾಗಿ ನೀಡಲಾಗಿರುವ 35ಎ ಮತ್ತು 370ರ ವಿಶೇಷ ಸ್ಥಾನ ಮಾನ ಮತ್ತು ವಿಶೇಷ ಅಧಿಕಾರವನ್ನು ರದ್ದುಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಕೇಂದ್ರ ಸರ್ಕಾರ ಇಂದು ಘೋಷಿಸಿದೆ. 370 ಮತ್ತು 35ಎ ವಿಧಿ ರದ್ದುಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಇಂದು ರಾಜ್ಯಸಭೆಯಲ್ಲಿ ಮಂಡಿಸುವ ಮೂಲಕ ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಜ್ಯಸಭೆಯಲ್ಲಿಂದು ಈ ನಿರ್ಧಾರವನ್ನು ಪ್ರಕಟಿಸಿ ಮಸೂದೆಯನ್ನು ಮಂಡಿಸಿದರು.