ರಾಜ್ಯದ ಕಾಲೇಜು ಮಂಡಳಿಗಳು ಮಾಡಿದ ತಪ್ಪಿಗೆ ಪದವಿ ಪ್ರಮಾಣ ಪತ್ರ ಕಳೆದುಕೊಳ್ಳುವ ಭೀತಿಯಲ್ಲಿರುವ ಸಾವಿರಾರು ವಿದ್ಯಾರ್ಥಿಗಳು..

0
207

ರಾಜ್ಯ ಸರ್ಕಾರ ಮಾತ್ರವಲ್ಲ ರಾಜ್ಯದ ಹಲವು ಕಾಲೇಜುಗಳು ಅತಂತ್ರದ ಸ್ಥಿತಿಯಲ್ಲಿದ್ದು, 50 ಕ್ಕೂ ಅಧಿಕ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಇದೀಗ ಪದವಿ ಪ್ರಮಾಣ ಪತ್ರ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಇನ್ನೊಂದೆಡೆ ಕಾಲೇಜ್ ಆಡಳಿತಾಧಿಕಾರಿಗಳು ಮಾಡಿದ ತಪ್ಪಿಗೆ ನಗರದ 80 ಕಾಲೇಜುಗಳ ಸುಮಾರು 5 ಸಾವಿರ ವಿದ್ಯಾರ್ಥಿಗಳು ಬೆಲೆ ತೆತ್ತಬೇಕಾಗಿದೆ. ಇದರಿಂದ ರಾಜ್ಯದ ಶಿಕ್ಷಣ ಸಂಸ್ಥೆಗಳು ಸರಿಯಾಗಿ ನಿರ್ವಹಣೆ ಮಾಡದೆ ವಿದ್ಯಾರ್ಥಿಗಳ ಜೀವನದಲ್ಲಿ ಚಲ್ಲಾಟವಾಡುತ್ತಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ.


Also read: ರಾಜ್ಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡಿದವರು ಕಡ್ಡಾಯವಾಗಿ ಗ್ರಾಮೀಣ ಸೇವೆಯನ್ನು ಮಾಡಲೇಬೇಕು ಇಲ್ಲದಿದ್ದರೆ ಬಿಳ್ಳಲಿದೆ ಬಾರಿ ದಂಡ..

ಹೌದು ಸರ್ಕಾರದಿಂದ ಅನುಮತಿ ಪಡೆಯದೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದ ವಿದ್ಯಾ ಸಂಸ್ಥೆಗಳು ಇಂದು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಬೀದಿಗೆ ತಂದಿದ್ದು, 2010ರಿಂದ 2014ರ ನಡುವೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು)ಕ್ಕೆ ಒಳಪಟ್ಟ 50 ಕ್ಕೂ ಅಧಿಕ ಕಾಲೇಜುಗಳು ಪೂರ್ವಾನ್ವಯವಾಗುವಂತೆ ಅನುಮತಿ ನೀಡಬೇಕು ಎಂದು ಸರಕಾರವನ್ನು ಒತ್ತಾಯಿಸಿವೆ. ಕೆಲವು ವರ್ಷಗಳ ಹಿಂದೆ ಇದರಲ್ಲಿ ಕೆಲವು ಕಾಲೇಜುಗಳು ಅಂದಿನ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರಿಗೂ ಪತ್ರ ಬರೆದಿದ್ದವು. ಆದರೆ ಇದು ಕಾನೂನುಬಾಹಿರ ಎಂದು ನಿರಾಕರಣೆ ಮಾಡಲಾಗಿತ್ತು. ಇದೀಗ ಈ ಕಾಲೇಜುಗಳು ಸರಕಾರಕ್ಕೆ ಪತ್ರ ಬರೆದಿದ್ದು, ಒಟ್ಟಾಗಿ ಒತ್ತಾಯ ಮಾಡುತ್ತಿದೆ. ಈ ಸಂಬಂಧ ಗಮನ ನೀಡಲು ಉನ್ನತ ಶಿಕ್ಷಣ ಇಲಾಖೆ ಸಮಿತಿಯೊಂದನ್ನೂ ರಚಿಸಲಾಗಿದೆ.


Also read: ಪ್ರತಿಷ್ಠಿತ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಪಾಸು ಮಾಡಿದ ಅದೇ ಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಎಲ್ಲರಿಗೂ ಮಾದರಿ!!

ಎಂಜಿನಿಯರಿಂಗ್ ಕಾಲೇಜ್‌ಗಳ ಸೀಟು ಹೆಚ್ಚಳ ಅಥವಾ ಹೊಸ ಕೋರ್ಸ್ ಆರಂಭಕ್ಕೆ ಅಧಿಕೃತ ಒಪ್ಪಿಗೆ ಪಡೆಯಬೇಕಿದೆ. ಆದರೆ, ಇದೀಗ ಅರ್ಜಿ ಸಲ್ಲಿಸಿರುವ ಕಾಲೇಜುಗಳಲ್ಲಿ ಅನುಮತಿಯಿಲ್ಲದೆ ಪ್ರವೇಶಕ್ಕೆ ವಿಟಿಯು ಹೇಗೆ ಅನುಮತಿ ಕಲ್ಪಿಸಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಭವಿಷ್ಯದಲ್ಲಿ ಯಾವುದೇ ಕಾನೂನು ತೊಡಕು ನಿವಾರಿಸುವ ಸಲುವಾಗಿ ಈ ಸಮಿತಿ ರಚಿಸಲಾಗಿದ್ದು, ಅದು ನೀಡುವ ವರದಿಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ತಿಳಿಸಿದ್ದಾರೆ. ಇದರಂತೆ ಮತ್ತೊಂದು ವಿವಾದ ಕೇಳಿಬರುತ್ತಿದ್ದು.


Also read: `ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರ ಮಾಹಿತಿ ನೀಡಿದರೆ ಸಿಗಲಿದೆ ಆಕರ್ಷಕ ಬಹುಮಾನ..

ನಗರದ 80 ಕಾಲೇಜುಗಳ ಸುಮಾರು 5 ಸಾವಿರ ವಿದ್ಯಾರ್ಥಿಗಳು ಬೆಲೆ ತೆತ್ತಬೇಕಾಗಿದೆ. ಕ್ರೀಡಾ ಮತ್ತು ಸಾಂಸ್ಕೃತಿಕ ಶುಲ್ಕದ ರಶೀದಿ ಸಲ್ಲಿಕೆ ಮಾಡದ ಕಾರಣ 77ಕ್ಕೂ ಹೆಚ್ಚು ಕಾಲೇಜುಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಕಪ್ಪು ಪಟ್ಟಿಗೆ ಸೇರಿಸಿದೆ. ಬಿಎ, ಬಿಎಸ್ ಸಿ, ಬಿಕಾಂ, ಬಿಬಿಎ, ಬಿಸಿಎ, ಬಿವಿಎ, ಬಿಎಸ್ಸಿ, ಮತ್ತಿತತರ ಕೋರ್ಸ್ ಗಳಲ್ಲಿ ಎರಡನೇ ಹಾಗೂ ತೃತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ 2018-19 ನೇ ಸಾಲಿನ ಬಿಹೆಚ್ ಎಂ ಸಾಲಿಗೆ ಸೇರ್ಪಡೆಯಾಗಿರುವ ದ್ವಿತಿಯೀ, ತೃತೀಯ ಹಾಗೂ ನಾಲ್ಕನೇ ವರ್ಷದ ವಿದ್ಯಾರ್ಥಿಗಳ ಮಾಹಿತಿ ಸಲ್ಲಿಸುವಂತೆ ಈ ಕಾಲೇಜುಗಳಿಗೆ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ.
ಅಲ್ಲದೇ ಜುಲೈ 18ರೊಳಗೆ ಕಾಲೇಜುಗಳು ಕ್ರೀಡಾ ಮತ್ತು ಸಾಂಸ್ಕೃತಿಕ ಶುಲ್ಕ ಪಾವತಿ ರಶೀದಿಗಳನ್ನು ಸಲ್ಲಿಸಬೇಕು ತಪ್ಪಿದಲ್ಲಿ, ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯೊಳಗೆ ನಡೆಯುವ ಪರೀಕ್ಷೆಯಲ್ಲಿ ಹಾಜರಾಗುವ ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆ ಹಿಡಿಯಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.