ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಅನುಮೋದನೆ

0
563

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಕೆಆರ್ಡಿಸಿಎಲ್) ಮತ್ತು ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆಶಿಪ್) ಅಡಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಟೋಲ್ ಸಂಗ್ರಹಕ್ಕೆ ಅನುಮೋದನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್‌) ಮತ್ತು ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆಶಿಪ್‌) ಅಡಿ  ಅಭಿವೃದ್ಧಿಪಡಿಸಿರುವ 19 ರಾಜ್ಯ ಹೆದ್ದಾರಿಗಳಲ್ಲಿ ಬಳಕೆದಾರರ ಶುಲ್ಕ (ಟೋಲ್‌) ಸಂಗ್ರಹಿಸುವ ಪ್ರಸ್ತಾವಕ್ಕೆ  ಸಚಿವ ಸಂಪುಟ ಸಭೆ ಶುಕ್ರವಾರ ಒಪ್ಪಿಗೆ ನೀಡಿದೆ.

ಕೆಆರ್‌ಡಿಸಿಎಲ್‌ ಮತ್ತು ಕೆಶಿಪ್‌ ಯೋಜನೆಯಡಿ ಒಟ್ಟು 1,530 ಕಿ.ಮೀ ಉದ್ದದ 19 ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿವೆ. ಈ ರಸ್ತೆಗಳಲ್ಲಿ ಟೋಲ್‌ ಸಂಗ್ರಹಿಸುವ ಪ್ರಸ್ತಾವ ಈ ಹಿಂದೆಯೇ ಇತ್ತು. ಸರ್ಕಾರ ಈಗ ಒಪ್ಪಿಗೆ ನೀಡಿರುವುದರಿಂದ ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಾಗುತ್ತದೆ.

ಟೋಲ್‌ ಸಂಗ್ರಹಿಸುವ ಸಂಸ್ಥೆಯನ್ನು ಟೆಂಡರ್‌ ಪ್ರಕ್ರಿಯೆ ಮೂಲಕ ಕೆಶಿಪ್‌ ಅಂತಿಮಗೊಳಿಸಲಿದೆ. ಟೋಲ್‌ ಎಷ್ಟಿರಬೇಕೆಂದು ಇನ್ನೂ ನಿಗದಿಯಾಗಿಲ್ಲ. ಈ ಎಲ್ಲ ಪ್ರಕ್ರಿಯೆಗಳಿಗೆ ಕಾಲಾವಕಾಶ ಬೇಕಾಗಲಿದೆ ಎಂದು ತಿಳಿದುಬಂದಿದೆ.