ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
259

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ತುಮಕೂರು ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 21 ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಜಾರಿಪೇದೆ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 18,2020ರೊಳಗೆ ಅರ್ಜಿ ಸಲ್ಲಿಸಬೇಕು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಜಾರಿಪೇದೆ

ಸಂಸ್ಥೆ (Organisation): ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ವಿದ್ಯಾರ್ಹತೆ (Educational Qualification): ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಜಾರಿಪೇದೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ ಹೊರಡಿಸಿದ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಯ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ.

ಆಯ್ಕೆಯ ವಿಧಾನ: 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಗಣಕಯಂತ್ರದಲ್ಲಿ ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾವುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ತುಮಕೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/tumakuru ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಏಪ್ರಿಲ್ 18,2020ರ ಒಳಗೆ ಅರ್ಜಿ ಸಲ್ಲಿಸಬೇಕು.