ಒಂದೇ ಬಾರಿ ಎಲ್ಲರೂ ಲೈಟ್ ಆಫ್ ಮಾಡಿದರೆ ಎಲೆಕ್ಟ್ರಿಕ್ ಗ್ರಿಡ್-ಗೆ ಹಾನಿಯುಂಟಾಗಲಿದೆ: ಪವರ್ ಗ್ರಿಡ್ ಕಂಪನಿಗಳು!!

0
183

ಕೊರೋನಾ ವೈರಸ್ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಅದರಂತೆ ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ನಿಮ್ಮ ಅಮೂಲ್ಯ ಸಮಯ ನನಗೆ ಬೇಕು ಎಂದು ಪ್ರಧಾನಿ ಮೋದಿ 130 ಕೋಟಿ ಭಾರತೀಯರಲ್ಲಿ ಮನವಿ ಮಾಡಿದ್ದಾರೆ. ಭಾನುವಾರ ರಾತ್ರಿ 9 ಗಂಟೆಗೆ ಪ್ರತಿಯೊಬ್ಬ ಭಾರತೀಯ ಕೂಡ ಮನೆಯ ಲೈಟ್ ಆರಿಸಿ, ಮೊಬೈಲ್ ಟಾರ್ಚ್ ಅಥವಾ ಮೇಣದ ಬತ್ತಿ ಹಿಡಿಯಬೇಕು. ಆ ಮೂಲಕ ಇಡೀ ವಿಶ್ವಕ್ಕೆ ಭಾರತದ ಬೆಳಕನ್ನು ತೋರಿಸಬೇಕು ಎಂದು ಮೋದಿ ಭಾರತೀಯರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರಶ್ನೆಗಳು ಹುಟ್ಟಿಕೊಂಡಿದ್ದು. ದೇಶದ ಎಲ್ಲ ಗ್ರಿಡ್-ಗಳನ್ನ ಒಂದೇ ಸಾರಿ ಬಂದ್ ಮಾಡಿದರೆ ಗ್ರಿಡ್ ವೈಫಲ್ಯಕ್ಕೆ ಕಾರಣವಾಗಬಹುದು ಮತ್ತು ತುರ್ತು ಸೇವೆಗಳ ಮೇಲೆ ಪರಿಣಾಮ ಬೀರಬಹುದು” ಎಂದು ಮಹಾರಾಷ್ಟ್ರ ಇಂಧನ ಸಚಿವ ಡಾ.ನಿತಿನ್ ರೌತ್ ಹೇಳಿದ್ದಾರೆ.

ಗ್ರಿಡ್ ಹಾಳಾಗುತ್ತೆ?

ಹೌದು ಕೊರೋನಾವೈರಸ್ ವಿರುದ್ಧ ಹೋರಾಟದಲ್ಲಿ ದೇಶದ ಉತ್ಸಾಹವನ್ನು ಹೆಚ್ಚಿಸಲು ಭಾನುವಾರ ರಾತ್ರಿ 9 ಗಂಟೆಗೆ ಮನೆಯ ಲೈಟ್ ಸ್ವಿಚ್ ಆಫ್ ಮಾಡಿ ಹಣತೆ, ಮೊಂಬತ್ತಿ, ಮೊಬೈಲ್ ಟಾರ್ಚ್ ಲೈಟ್ ಗಳನ್ನು ಉರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವುದು”ಪವರ್ ಗ್ರಿಡ್” ಮತ್ತು ತುರ್ತು ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಮಹಾರಾಷ್ಟ್ರ ಇಂಧನ ಸಚಿವ ನಿತಿನ್ ರೌತ್ ಹೇಳಿದ್ದಾರೆ. ಜನರು ತಮ್ಮ ಮನೆಗಳಲ್ಲಿ ದೀಪಗಳನ್ನು ಸ್ವಿಚ್ ಆಫ್ ಮಾಡದೆ ಮೇಣದ ಬತ್ತಿಗಳು ಮತ್ತು ದೀಪಗಳನ್ನು ಬೆಳಗಿಸಬೇಕು ಎಂದು ಸಚಿವರು ತಿಳಿಸಿದ್ದು “ಎಲ್ಲಾ ದೀಪಗಳನ್ನು ಒಮ್ಮೆಗೇ ಸ್ವಿಚ್ ಆಫ್ ಮಾಡಿದರೆ ಅದು ಗ್ರಿಡ್ ಗಳ ವೈಫಲ್ಯಕ್ಕೆ ಕಾರಣವಾಗಬಹುದು. ನಮ್ಮ ಎಲ್ಲಾ ತುರ್ತು ಸೇವೆಗಳ ಮೇಲೆ ಇದು ಪರಿಣಾಮ ಬೀರುತ್ತದೆ.ಮತ್ತೆ ವಿದ್ಯುತ್ ಗ್ರಿಡ್ ಪುನಃಸ್ಥಾಪಿಸಲು ಒಂದು ವಾರ ಸಮಯ ತೆಗೆದುಕೊಳ್ಳಬಹುದು .” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಪೂರೈಕೆಯಲ್ಲಿ ವ್ಯತಾಸವಾಗುತ್ತಾ?

ಮೋದಿ ಕರೆಯಂತೆ ಒಂದೇ ಬಾರಿಗೆ ದೀಪಗಳನ್ನು ಆಫ್ ಮಾಡುವುದರಿಂದ ಬೇಡಿಕೆ ಮತ್ತು ಪೂರೈಕೆಯಲ್ಲಿ ಭಾರಿ ವ್ಯತ್ಯಾಸ ಉಂಟಾಗುತ್ತದೆ. ಲಾಕ್‌ಡೌನ್ ಇರುವುದರಿಂದ, ಕಾರ್ಖಾನೆ ಗಳು ಕಾರ್ಯಾಚರಣೆ ಮಾಡದ ಕಾರಣ ಬೇಡಿಕೆ ಈಗಾಗಲೇ 23,000 ಮೆಗಾವ್ಯಾಟ್‌ನಿಂದ 13,000 ಮೆಗಾವ್ಯಾಟ್‌ಗೆ ಇಳಿದಿದೆ” ಎಂದು ಅವರು ಹೇಳಿದರು.”ಆ ಸಮಯದಲ್ಲಿ ದೀಪಗಳನ್ನು ಸ್ವಿಚ್ ಆಫ್ ಮಾಡುವುದರಿಂದ ಅದು ತುರ್ತು ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಸೇವೆಗಳನ್ನು ಪುನಃಸ್ಥಾಪಿಸಲು ನಮಗೆ ಕನಿಷ್ಠ 12-16 ಗಂಟೆಗಳ ಸಮಯ ತೆಗೆದುಕೊಳ್ಳುತ್ತದೆ. ಕೊರೋನಾವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ವಿದ್ಯುತ್ ಒಂದು ಪ್ರಮುಖ ಸಾಧನವಾಗಿದೆ” ಎಂದು ಅವರು ಹೇಳಿದರು.

ಮನೆಗಳನ್ನು ಸುಟ್ಟುಕೊಳ್ಳದಿದ್ದರೆ ಸಾಕು:

ಮೋದಿ ಅವರು ಕೊಟ್ಟಿರುವ ಕರೆಗೆ ಶಿವಸೇನೆ ಸಂಸದ ಸಂಜಯ್ ರಾವತ್ ವ್ಯಂಗ್ಯವಾಡಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಂಜಯ್ ರಾವತ್, ದೀಪ ಬೆಳಗಿಸುವ ವೇಳೆ ಜನರು ಅವರ ಮನೆಗಳನ್ನು ಸುಟ್ಟುಕೊಳ್ಳುವುದಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ಜನತಾ ಕರ್ಫ್ಯೂ ದಿನ ಮೋದಿ ಅವರು ಚಪ್ಪಾಳೆ ತಟ್ಟಲು ಜನರಿಗೆ ಹೇಳಿದ್ದರು. ಆದರೆ ಅವರು ರಸ್ತೆಗಳಲ್ಲಿ ಕಿಕ್ಕಿರಿದು ಡ್ರಮ್‍ಗಳನ್ನು ಭಾರಿಸಿದ್ದರು. ಈಗ ಅವರು ತಮ್ಮ ಸ್ವಂತ ಮನೆಗಳನ್ನು ಸುಟ್ಟುಕೊಳ್ಳುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಸರ್ ದೀಪಗಳನ್ನು ಬೆಳಗಿಸಿ ಆದರೆ ದಯವಿಟ್ಟು ಕೊರೊನಾ ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಏನು ಮಾಡುತ್ತಿದೆ ಎಂದು ನಮಗೆ ತಿಳಿಸಿ ಎಂದು ಸಂಸದ ಲೇವಡಿ ಮಾಡಿ ಟ್ವೀಟ್ ಮಾಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕರೋನ ಪೀಡಿತ 14 ರಾಜ್ಯಗಳಿಗೆ ಮೋದಿ ಸರ್ಕಾರ ಅನುದಾನವನ್ನು ನೀಡಿ ಕರ್ನಾಟಕಡೆಗಣಿಸಿರುವ ಮಲತಾಯಿ ಧೋರಣೆ ನ್ಯಾಯ ಸಮ್ಮತವೇ??