ಮಹಾರಾಷ್ಟ್ರದಲ್ಲಿ ಭಾರೀ ಸಂಖ್ಯೆಯಲ್ಲಿ ಬಹುಮತ ಸಾಬೀತುಪಡಿಸಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ; ಕೊನೆಗೂ ಅಧಿಕಾರ ಕಳೆದುಕೊಂಡ ಬಿಜೆಪಿ.!

0
194

ದೇಶದಲ್ಲಿ ಭಾರಿ ಕುತೂಹಲ ಮೂಡಿಸಿದ ಮಹಾರಾಷ್ಟ್ರ ಚುನಾವಣೆಗ ಅಂತಿಮ ಹಂತಕ್ಕೆ ಬಂದಿದ್ದು, ಬಿಜೆಪಿ ಸರ್ಕಾರ ಕುರ್ಚಿ ಬಿಟ್ಟು ಕೆಳಗಿಳಿದಿದೆ, ಇಂದು ನಡೆದ ವಿಶ್ವಾಸ ಮತ ಪರೀಕ್ಷೆಯಲ್ಲಿ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಆಘಾಡಿ ಮೈತ್ರಿ ಸರ್ಕಾರದಲ್ಲಿ ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್ ಸರ್ಕಾರ ಬಹುಮತವನ್ನು ಸಾಬೀತುಪಡಿಸಿ ಹಂಗಾಮಿ ಸ್ಪೀಕರ್ ಬದಲಾವಣೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯವರು ವಿಶ್ವಾಸ ಮತದಲ್ಲಿ ಪಾಲ್ಗೊಳ್ಳದೆ ಸದನದಿಂದ ಹೊರಗಿಟ್ಟಿವೆ.

ಹೌದು ಮಹಾರಾಷ್ಟ್ರ ರಾಜಕಾರಣದ ಕುರಿತು ಇಡೀ ದೇಶವೇ ಚರ್ಚೆಯಲ್ಲಿ ಮುಳುಗಿತ್ತು. ಈ ಎಲ್ಲ ಚರ್ಚೆಗಳ ಮಧ್ಯೆ ಉದ್ಧವ್ ಠಾಕ್ರೆ ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ಸದನದಲ್ಲಿಯೂ ಭಾರೀ ಗದ್ದಲ ಹಾಗೂ ಬಿಜೆಪಿಯ ಸಭಾತ್ಯಾಗದ ಮಧ್ಯೆ ಠಾಕ್ರೆ ವಿಶ್ವಾಸ ಮತ ಸಾಬೀತು ಪಡಿಸಿದ್ದಾರೆ. ಈ ಮೂಲಕ ಉದ್ಧವ್ ನೇತೃತ್ವದ ಮೈತ್ರಿ ಸರ್ಕಾರ ಅಗ್ನಿ ಪರೀಕ್ಷೆಯನ್ನು ಗೆದ್ದಂತಾಗಿದೆ. ಹಂಗಾಮಿ ಸ್ಪೀಕರ್ ದಿಲೀಪ್ ವಾಸ್ಲೆ ಪಾಟೀಲ್ ಸಮ್ಮುಖದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬಹುಮತ ಸಾಬೀತುಪಡಿಸಿದರು. ಶಿವಸೇನೆ, ಎನ್‍ಸಿಪಿ ಹಾಗೂ ಕಾಂಗ್ರೆಸ್ ಒಟ್ಟು 169 ಶಾಸಕರು ಸರ್ಕಾರಕ್ಕೆ ಬೆಂಬಲ ಸೂಚಿಸಿದರು. ಇನ್ನು 1 ಎಂಎನ್‍ಎಸ್, 2ಎಐಎಂಐಎಂ, 1 ಸಿಪಿಐಎಂ ಶಾಸಕರು ತಮ್ಮ ಬೆಂಬಲವನ್ನು ಸೂಚಿಸದೇ ತಟಸ್ಥವಾಗಿದ್ದರು.

ಸ್ಪೀಕರ್ ಅವರನ್ನು ನಿಯಮಬದ್ಧವಾಗಿ ಆಯ್ಕೆ ಮಾಡಲಾಗಿಲ್ಲ, ಈ ರೀತಿಯ ಪರಿಸ್ಥಿತಿ ಹಿಂದೆಂದೂ ಆಗಿರಲಿಲ್ಲ. ಉದ್ಧವ್ ಠಾಕ್ರೆ ಸಹ ಅಕ್ರಮವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಬಿಜೆಪಿ ಸದನದಲ್ಲಿ ಗದ್ದಲ ಎಬ್ಬಿಸಿತು. ಗದ್ದಲದ ವಾತಾವರಣ ನಿರ್ಮಾಣವಾಗುತ್ತಿದ್ದಂತೆ. ಸ್ಪೀಕರ್ ವಿಶ್ವಾಸ ಮತಯಾಚನೆ ಮಾಡುವಂತೆ ಸೂಚಿಸಿದರು. ನಂತರ ಬಿಜೆಪಿಯ 105 ಶಾಸಕರು ದೇವೇಂದ್ರ ಫಡ್ನವೀಸ್ ನಾಯಕತ್ವದಲ್ಲಿ ಸಭಾತ್ಯಾಗ ಮಾಡಿ ಹೊರ ನಡೆದರು. ಬಹುಮತ ಸಾಬೀತಿಗೆ 145 ಸ್ಥಾನಗಳ ಅಗತ್ಯವಿತ್ತು. ವಿಶ್ವಾಸ ಮತಯಾಚನೆಯ ಸಂದರ್ಭದಲ್ಲಿ ಮೂರು ಪಕ್ಷದ ಒಟ್ಟು 169 ಶಾಸಕರು ಸರ್ಕಾರಕ್ಕೆ ಬೆಂಬಲ ಸೂಚಿಸಿದ ಕಾರಣ ಸಹಜವಾಗಿಯೇ ಠಾಕ್ರೆಯವರು ಬಹುಮತ ಸಾಬೀತು ಪಡಿಸಿದರು. ಈ ಮೂಲಕ 105 ಸ್ಥಾನಗಳನ್ನು ಗಳಿಸಿದ್ದರೂ ಸಹ ಬಿಜೆಪಿ ಅಧಿಕಾರದಿಂದ ದೂರ ಉಳಿಯುವಂತಾಯಿತು.

ಅದರಂತೆ ನೋಡಿದರೆ ಸುಮಾರು 40 ವರ್ಷಗಳ ಶಿವಸೇನೆಯ ರಾಜಕೀಯ ಇತಿಹಾಸದಲ್ಲಿ ಠಾಕ್ರೆ ಕುಟುಂಬದ ಮೊದಲ ಕುಡಿಯಾಗಿ ಉದ್ಧವ್ ಮುಖ್ಯಮಂತ್ರಿ ಸ್ಥಾನವನ್ನು ಏರಿದ್ದಾರೆ. ಉದ್ಧವ್ ಠಾಕ್ರೆ ಅವರೊಂದಿಗೆ ಮೂರು ಪಕ್ಷಗಳ ಹಿರಿಯ, ಅನುಭವಸ್ಥರಾದ ಶಿವಸೇನೆಯ ಏಕನಾಥ್ ಶಿಂಧೆ, ಸುಭಾಶ್ ದೇಸಾಯಿ, ಎನ್‍ಸಿಪಿಯ ಜಯಂತ್ ಪಾಟೀಲ್, ಛಗನ್ ಭುಜ್ಬಲ್ ಹಾಗೂ ಕಾಂಗ್ರೆಸ್ ಅಧ್ಯಕ್ಷ ಬಾಳಾ ಸಾಹೇಬ್ ಥೋರಟ್, ದಲಿತ ನಾಯಕ ನಿತಿನ್ ರಾವತ್ ಪ್ರಮಾಣ ವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಯಾಗಿ ಯಾರೊಬ್ಬರೂ ಪ್ರಮಾಣ ವಚನ ಸ್ವೀಕರಿಸಿರಲಿಲ್ಲ ಒಟ್ಟಾರೆಯಾಗಿ ಕರ್ನಾಟಕದಲ್ಲಿ ಸಧ್ಯ ನಿರ್ಮಾಣವಾಗಿರುವ ರಾಜಕೀಯ ದುಸ್ಥಿತಿಯಂತೆ ಮಹಾರಾಷ್ಟ್ರದಲ್ಲಿವೂ ಮತ್ತೆ ಸರ್ಕಾರ ಪತನಗೊಂಡು ಉಪ ಚುನಾವಣೆ ನಡೆಯುತ್ತಾ ಎನ್ನುವ ಅನುಮಾನ ದೇಶದಲ್ಲಿ ಎದ್ದು ಕಾಣುತ್ತಿದೆ ಎನ್ನುವುದು ಜನರ ಅಭಿಪ್ರಾಯ.

Also read: ರಾಜ್ಯದಲ್ಲಿ ರಂಗೇರಿದ ಉಪಚುನಾವಣಾ ಅಖಾಡ; ಎಲ್ಲ ಪಕ್ಷಗಳಿಗೆ ಸಂಕಷ್ಟ ತಂದ ಹನಿಟ್ರ್ಯಾಪ್​ ಪ್ರಕರಣ, ವಿಡಿಯೋ ಡಿಲೀಟ್​ ಮಾಡಿಸಲು ಸಿಸಿಬಿ ಕಚೇರಿ ಸುತ್ತುತ್ತಿರುವ ಶಾಸಕರು.!