ಡಿಕೆಶಿ ಗೆ ಸ್ನೇಹಿತರಿಂದ ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುವಂತೆ ಸೂಚನೆ; ಹಾಗಾದ್ರೆ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ತಾರಾ ಡಿ.ಕೆ.ಶಿ?

0
180

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜೈಲು ಸೆರೆವಾಸದ ಬಳಿಕ ಷರತ್ತು ಬದ್ಧ ಜಾಮೀನು ಪಡೆದು ಹೊರ ಬಂದಿದ್ದು, ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಬಿಡುಗಡೆಯಾದ ಎರಡು ದಿನಗಳು ದೆಹಲಿಯಲ್ಲೇ ಇರುವ ಡಿಕೆಶಿ ಇಂದು ರಾಜಧಾನಿಗೆ ಆಗಮಿಸಲಿದ್ದು, ಅವರ ಸ್ವಾಗತಕ್ಕೆ ಅಭಿಮಾನಿಗಳು ಭರ್ಜರಿ ತಯಾರಿ ನಡೆಸಿದ್ದಾರೆ. ಡಿಕೆಶಿ ಮಾಧ್ಯಮದವರ ಜೊತೆಗೆ ಮಾತನಾಡಿ. ನನ್ನ ಅನೇಕ ಸ್ನೇಹಿತರು ಒಳ್ಳೆಯ ಸಲಹೆ ನೀಡಿದ್ದಾರೆ. ಕೆಲವರು ಬ್ಯುಸಿನೆಸ್ ಮಾಡು. ಸನ್ಯಾಸತ್ವ ತಗೋ ಅಂದಿದ್ದಾರೆ. ಎಲ್ಲದಕ್ಕೂ ಬೆಂಗಳೂರಿನಲ್ಲೇ ಉತ್ತರ ಕೊಡುತ್ತೇನೆ ಎಂದು ಹೇಳಿದ್ದು, ಯಾವ ವಿಷಯ ಕುರಿತು ಹೇಳುತ್ತಾರೆ ಎನ್ನುವುದು ಎಲ್ಲರಲ್ಲಿ ಕುತೂಹಲ ಕೆರಳಿಸಿದೆ.

ಸನ್ಯಾಸತ್ವ ತೆಗೆದುಕೊಳ್ತಾರಾ ಡಿ.ಕೆ.ಶಿ?

ಹೌದು ಡಿಕೆ ಶಿವಕುಮಾರ್ ಅವರು 48 ದಿನಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಧನ್ಯವಾದ ಹೇಳಿ. ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ವಕೀಲರು ಹಾಗೂ ನಾಯಕರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ನಂತರ ಬೆಂಗಳೂರಿಗೆ ಆಗಮಿಸುತ್ತೇನೆ, ಬೇರೆಯವರ ಆಸ್ತಿ ಘೋಷಣೆ, ನನ್ನ ಆಸ್ತಿ ಘೋಷಣೆ ಎಲ್ಲದರ ಬಗೆ ನಾನು ಬೆಂಗಳೂರಲ್ಲಿ ಹೇಳುತ್ತೇನೆ. ನನ್ನ ಅನೇಕ ಸ್ನೇಹಿತರು ಒಳ್ಳೆಯ ಸಲಹೆ ನೀಡಿದ್ದಾರೆ. ಕೆಲವರು ಬ್ಯುಸಿನೆಸ್ ಮಾಡು. ಸನ್ಯಾಸತ್ವ ತಗೋ ಅಂದಿದ್ದಾರೆ. ಎಲ್ಲದಕ್ಕೂ ನಾನು ಉತ್ತರ ಕೊಡುತ್ತೇನೆ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಜೊತೆಗೆ ನನಗೆ ಎಲ್ಲಾ ಪಕ್ಷಗಳಿಂದಲೂ ಬೆಂಬಲ ಸಿಕ್ಕುದೆ. ಆದರೆ, ಕೆಲವರು ನನ್ನ ಸ್ಥಿತಿ ನೋಡಿ ಖುಷಿಪಟ್ಟಿದ್ದಾರೆ.ಅವರ ಮೇಲೆ ಬೇಸರ ಇಲ್ಲ, ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನನಗೆ ಜನರ ಬೆಂಬಲ ಸಿಕ್ಕಿದೆ. ಕಷ್ಟಕಾಲದಲ್ಲಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ನನಗೆ ಕಾನೂನಿನ ಮೇಲೆ ಗೌರವವಿದೆ. ನನ್ನ ಹೋರಾಟ ಮುಂದುವರಿಸುತ್ತೇನೆ. ಎಷ್ಟೋ ಜನ ರಸ್ತೆಯಲ್ಲಿ ನಿಂತು, ಬಂದ್ ಮಾಡಿ, ನನ್ನ ಪರ ಪ್ರತಿಭಟನೆ ಮಾಡಿ, ಮನೆಯಲ್ಲಿ ಕೂತು ಧ್ಯಾನ ಮಾಡಿ, ಪೂಜೆ ಮಾಡಿ ಪ್ರಾರ್ಥಿಸಿದ್ದಾರೆ. ಕೇವಲ ಕಾಂಗ್ರೆಸ್ ಪಕ್ಷದವರು ಮಾತ್ರವಲ್ಲ. ಕೆಲವು ಬಿಜೆಪಿ ನಾಯಕರು ಸೇರಿದಂತೆ ಎಲ್ಲ ಪಕ್ಷದವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ.

ಜೆಡಿಎಸ್‌ನವರು ನನಗೆ ಬೆಂಬಲಿಸಿದ್ದಾರೆ. ಇನ್ನು ಕಾಂಗ್ರೆಸ್ ನವರು ನನ್ನ ಕುಟುಂಬ. ಎಲ್ಲರೂ ಮನಸ್ಸು ಬಿಚ್ಚಿ ಪ್ರೀತಿ ತೋರಿದ್ದಾರೆ. ಆದರೆ ಕೆಲವರು ಮಾತ್ರ ನನ್ನ ಪರಿಸ್ಥಿತಿ ನೋಡಿ ಖುಷಿ ಪಟ್ಟಿದ್ದಾರೆ. ಏನು ಮಾಡಲು ಆಗುವುದಿಲ್ಲ. ಅವರೆಲ್ಲ ಇರಬೇಕು. ಅವರಿಂದಲೇ ನಾವು ಚೆನ್ನಾಗಿ ಕೆಲಸ ಮಾಡಲು ಸಾಧ್ಯ. ನನಗೆ ಅವರ ಮೇಲೆ ಯಾವುದೇ ಬೇಸರ ಇಲ್ಲ ಎಂದು ಹೇಳಿದ್ದಾರೆ. ಇಂದು ಬೆಳಗ್ಗೆ 11.50ಕ್ಕೆ ದೆಹಲಿ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳಸಲಿರುವ ಅವರು ಮಧ್ಯಾಹ್ನ 2.30ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಸೆರೆವಾಸದ ಬಳಿಕ ರಾಜಧಾನಿಗೆ ಆಗಮಿಸುತ್ತಿರುವ ಅವರಿಗೆ ಅದ್ಧೂರಿ ಸ್ವಾಗತ ನೀಡಲು ಕಾರ್ಯಕರ್ತರು ಸಜ್ಜಾಗಿದ್ದು, ಈಗಾಗಲೇ ಈ ಕುರಿತು ಅವರ ಅಭಿಮಾನಿಗಳು ರೂಪು ರೇಷ ಸಿದ್ಧಪಡಿಸಿದ್ದಾರೆ.