ರಾಜ್ಯ ಸರ್ಕಾರದಿಂದ ರೈತರ ಖಾತೆಗೆ 15 ದಿನದ ಒಳಗಾಗಿ ಹಣ ಜಮಾ; ವೇಗವಾಗಿ ರೈತರಿಗೆ ಹಣ ತಲುಪಿಸುವಂತೆ ಅಧಿಕಾರಿಗಳಿಗೆ ಬಿಎಸ್​ವೈ ಖಡಕ್ ಸೂಚನೆ..

0
216

ರಾಜ್ಯದಲ್ಲಿ ಅಧಿಕಾರಕ್ಕೇರಿದ ಯಡಿಯೂರಪ್ಪನವರ ಬಿಜೆಪಿ ಸರ್ಕಾರ ರೈತರಿಗೆ 4 ಸಾವಿರ ನೀಡುವುದಾಗಿ ಘೋಷಿಸಿ ಭರ್ಜರಿ ಕೊಡುಗೆ ನೀಡಿದರು, ಈ ಯೋಜನೆಯಲ್ಲಿ ರೈತರಿಗೆ ಹಣವನ್ನು ಇದೆ ತಿಂಗಳಲ್ಲಿ ತಲುಪಿಸಲಾಗುತ್ತೆ ಎಂದು ರಾಜ್ಯ ಸರ್ಕಾರ ತಿಳಿಸಿದ್ದು. ಮೊದಲ ಕಂತಿನ ಹಣವಾಗಿ 2 ಸಾವಿರ ರೂಪಾಯಿಯನ್ನು 15 ರಿಂದ 20 ದಿನಗಳಲ್ಲಿ ರೈತರ ಖಾತೆಗೆ ಜಮೆಯಾಗುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಅದರಂತೆ ಇನ್ನೂ ಕೆಲವೇ ದಿನಗಳಲ್ಲಿ ರೈತರಿಗೆ ರಾಜ್ಯ ಸರ್ಕಾರದಿಂದ ಮೊದಲ ಪರಿಹಾರ ಹಣ ಸಿಗಲಿದೆ.


Also read: ಪ್ರಧಾನಿ ಮೋದಿ ಅವರ ಮೊದಲ ಕ್ಯಾಬಿನೆಟ್‍ನಲ್ಲೇ ದೇಶದ ರೈತರಿಗೆ, ಶ್ರಮಿಕ ವರ್ಗದವರಿಗೆ ಭರ್ಜರಿ ಗಿಫ್ಟ್..

15 ದಿನಗಳಲ್ಲಿ ರೈತರ ಖಾತೆಗೆ ಹಣ?

ಹೌದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಹೆಸರಿನಲ್ಲಿ ಯೋಜನೆಯನ್ನು ಆರಂಭಿಸಿದೆ. ವರ್ಷಕ್ಕೆ 6 ಸಾವಿರ ರೂ. ಹಣ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದ್ದು, ಇದೆ ಯೋಜನೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದಲೂ 4 ಸಾವಿರ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದ ಒಟ್ಟು 31 ಲಕ್ಷ ರೈತರಿಗೆ ಪರಿಹಾರ ಸಿಗಲಿದೆ ಎಂದಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಧಾನಿ ಮೋದಿ ಜಾರಿ ಮಾಡಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರಿಗಾಗಿ ರಾಜ್ಯ ಸರ್ಕಾರದಿಂದ 4 ಸಾವಿರ ನೀಡುವುದಾಗಿ ಫೋಷಿಸಿದ್ದರು ಅದನ್ನು ವೇಗವಾಗಿ ಜಾರಿಗೆ ತರುತ್ತಿದ್ದಾರೆ.


Also read: ಕೇಂದ್ರ ಸರ್ಕಾರದಿಂದ ಮತ್ತೊಂದು ಬಂಪರ್? ನಿರುದ್ಯೋಗಿಗಳಿಗೆ, ರೈತರಿಗೆ ವಿಶೇಷ ಭತ್ಯೆ..

ಮೊದಲ ಕಂತಿನ ಹಣವಾಗಿ 2 ಸಾವಿರ ರೂಪಾಯಿಯನ್ನು 15 ರಿಂದ 20 ದಿನಗಳಲ್ಲಿ ರೈತರ ಖಾತೆಗೆ ಜಮೆಯಾಗುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಹಿರಿಯ ಅಧಿಕಾರಿಗಳು, ಪ್ರಾದೇಶಿಕ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅದರಂತೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 43. 75 ಲಕ್ಷ ಫಲಾನುಭವಿಗಳ ಪಟ್ಟಿಯನ್ನು ಕಳುಹಿಸಲಾಗಿದೆ. ಈ ಪೈಕಿ ಅರ್ಹ 31.72 ಲಕ್ಷ ಫಲಾನುಭವಿ ರೈತರಿಗೆ ಕೇಂದ್ರಸರ್ಕಾರದಿಂದ 6 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ 4 ಸಾವಿರ ರೂಪಾಯಿ ನೀಡುವುದರಿಂದ ರಾಜ್ಯದ ರೈತರಿಗೆ ವಾರ್ಷಿಕ 10 ಸಾವಿರ ರೂಪಾಯಿ ಸಿಗಲಿದೆ.


Also read: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್; ಬಿತ್ತನೆ ಅವಧಿಯಲ್ಲಿ ನೇರವಾಗಿ ಎಕರೆಗೆ 4 ಸಾವಿರ ನಗದು ಘೋಷಣೆ..

ಈ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಮೊದಲ ಕಂತಾಗಿ 2 ಸಾವಿರ ರೂಪಾಯಿ ಹಣವನ್ನು 10 ದಿನಗಳ ಒಳಗಾಗಿ ಅವರ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ. ಅಷ್ಟೇ ಅಲ್ಲದೆ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಧನ ಬಿಡುಗಡೆಗೆ ತೊಂದರೆಯಾಗದಂತೆ ಜಿಲ್ಲಾಧಿಕಾರಿಗಳ ಪಿ. ಡಿ ಖಾತೆಯಿಂದಲೇ ಭರಿಸುವಂತೆ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು.