ಮಂಡ್ಯದ ಕನಗನಮರಡಿ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ..

0
294

ಮಂಡ್ಯ ಜಿಲ್ಲೆ ಪಾಂಡವಪುರದ ಕನಗನಮರಡಿ ಗ್ರಾಮದ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 30 ಜನರು ಸಾವನಪ್ಪಿದ ಘಟನೆ ಇಡಿ ರಾಜ್ಯವನ್ನೇ ದುಃಖದಲ್ಲಿ ಮುಳುಗಿಸಿತ್ತು, ಇದರಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದರು. ಈ ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಕೇಂದ್ರ ಸರ್ಕಾರ ಈಗ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಕರ್ನಾಟಕ ರಾಜ್ಯ ಸರಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು. ಇದೀಗ ಕೇಂದ್ರ ಸರಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಅಂದರೆ ಸಂತ್ರಸ್ತರಿಗೆ 7 ಲಕ್ಷ ರೂ. ಪರಿಹಾರ ಸಿಕ್ಕಿದೆ.

ಹೌದು ನರೇಂದ್ರ ಮೋದಿಯವರು ಮಂಡ್ಯದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟ 30 ಜನರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಪರಿಹಾರ ಘೋಷಿಸಿರುವುದಕ್ಕೆ ರಾಜ್ಯದ ಮುಖ್ಯಮಂತ್ರಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಅದರಂತೆ ಸುಮಲತಾ ಅವರು, “ಮೃತ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿರುವುದು ವೈಯಕ್ತಿಕವಾಗಿ ನನಗೆ ಸಂತಸ ತಂದಿದೆ. ಅಂದಿನ ದುರ್ಘಟನೆ ಎಲ್ಲರಿಗೂ ನೋವುಂಟು ಮಾಡಿತ್ತು. ಒಟ್ಟಿನಲ್ಲಿ ಮಂಡ್ಯ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ನೀಡಿದಕ್ಕಾಗಿ ಮೋದಿಜೀ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದಗಳು” ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ. ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿ, ರಾಜ್ಯ ಸರ್ಕಾರ ಈ ಮೊದಲು 5 ಲಕ್ಷ ಪರಿಹಾರ ನೀಡಿತ್ತು ಈಗ ಮತ್ತೆ ಕೇಂದ್ರದಿಂದ 2 ಲಕ್ಷ ಪರಿಹಾರ ಸಿಕ್ಕಿದ್ದು, ಸಂತಸ ತಂದಿದೆ. ಎಂದು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ದುರಂತದ ದಿನ ಭೀಕರ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಮಂಡ್ಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ತಿಳಿಸಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ಗ್ರಾಮೀಣ ಪ್ರದೇಶಕ್ಕೆ ಸರ್ಕಾರ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದ್ದರು.

ಈ ದುರತಂದಲ್ಲಿ ಬಸ್ 15 ಅಡಿ ಆಳದ ವಿಸಿ ನಾಲೆಗೆ ಉರುಳಿದ ಪರಿಣಾಮ ಮಕ್ಕಳು ಸೇರಿದಂತೆ 30 ಮಂದಿ ದಾರುಣವಾಗಿ ಮೃತಪಟ್ಟಿದ್ದರು. ಅದರಲ್ಲಿ ಒಂದೇ ಕುಟುಂಬದ 5 ಜನ ಮೃತ ಪಟ್ಟಿದರು ಇವರೆಲ್ಲ ಡಾಮನಹಳ್ಳಿ ಗ್ರಾಮದ ನಾಗರಾಜ್ ಎನ್ನುವವರ ಪತ್ನಿ ಮಂಜುಳ (57) , ಪ್ರೇಕ್ಷ (2), ಅನುಷಾ (17), ತಮ್ಮನ ಮಗಳಾದ ರಾಧಾ (26) ಹಾಗೂ ಕಮಲಮ್ಮ (48) ಸಾವನ್ನಪ್ಪಿದು, ಆಗ ಕರ್ನಾಟಕ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು. ಈಗ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಇದೀಗ ಸಂತ್ರಸ್ತೆ ಕುಟುಂಬದವರಿಗೆ ಒಟ್ಟು 7 ಲಕ್ಷ ರೂ. ಪರಿಹಾರ ಸಿಕ್ಕಿದೆ.

Also read: ಕಬ್ಬನ್ ಪಾರ್ಕಿನಲ್ಲಿ ಉಚಿತ ಯೋಗ ಅಭ್ಯಾಸಕ್ಕೆ ಮುಸ್ಲಿಮರ ವಿರೋಧ; ಯೋಗದಂತೆ ನಮಾಜ್ ಮಾಡಲು ಅವಕಾಶ ನೀಡಿ ಎನ್ನುವ ಬೇಡಿಕೆ, ಮುಸ್ಲಿಂರ ವರ್ತನೆ ಸರಿನಾ??