UPSC 106 ಜಿಯೋಲಜಿಸ್ಟ್ & ಜಿಯೋ ಸೈಂಟಿಸ್ಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
281

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್(upsc) ಜಿಯೋಲಜಿಸ್ಟ್, ಜಿಯೋ ಸೈಂಟಿಸ್ಟ್ 106 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 16,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕೆಪಿಎಸ್‌ಸಿ ನೇಮಕಾತಿ 306 ಗ್ರೂಪ್ ಸಿ ಟೆಕ್ನಿಕಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಜಿಯೋಲಜಿಸ್ಟ್, ಜಿಯೋ ಸೈಂಟಿಸ್ಟ್

ಸಂಸ್ಥೆ (Organisation): ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ)

ವಿದ್ಯಾರ್ಹತೆ (Educational Qualification): ಜಿಯೋಲಜಿಸ್ಟ್ ಮತ್ತು ಜಿಯೋ ಸೈಂಟಿಸ್ಟ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಎಂಎಸ್ಸಿ ವಿದ್ಯಾರ್ಹತೆಯನ್ನು
ಮಾನ್ಯತೆ ಪಡೆದ ಸಂಸ್ಥೆ /ಬೋರ್ಡಿನಿಂದ ಹೊಂದಿರುವ ಅಭ್ಯರ್ಥಿಗಳು ಅಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಜನವರಿ 1,2019ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಪ್ರಿಲಿಮಿನರಿ /ಮೈನ್ಸ್ ಮತ್ತು ಪರ್ಸನಾಟಿಲಿ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ಗೆ https://upsc.gov.in/ ಹೋಗಿ ಅರ್ಜಿಯನ್ನು ಏಪ್ರಿಲ್ 16,2019ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1BrcK2DAaHGA_xIGxjFCqHonfgWs5-Mby/view ಕ್ಲಿಕ್ ಮಾಡಿ.