UPSC 398 ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
255

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ 398 ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌-ನಲ್ಲಿ ಮೇ 20,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸೆಂಟ್ರಲ್ ಆರ್ಮ್ಡ್ ಪೊಲೀಸ್ ಫೋರ್ಸ್

ಸಂಸ್ಥೆ (Organisation): ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location) ಭಾರತದೆಲ್ಲೆಡೆ

ವಯೋಮಿತಿ: ಆಗಸ್ಟ್ 1,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 200/-ರೂ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ
ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌-ನಲ್ಲಿ https://upsc.gov.in/ ಕೇಳಲಾಗಿರುವ ಮಾಹಿತಿಯನ್ನು ಭರ್ತಿ
ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 20,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.