12 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ UPSC ಮೂಲಕ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
467

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. 12 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ UPSC ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ. ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 4. 2019ರೊಳಗೆ ಅರ್ಜಿ ಸಲ್ಲಿಸಬೇಕು.


Also read: 10ನೇ ತರಗತಿ ಪಾಸಾದವರಿಗೆ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಉದ್ಯೋಗ ಅವಕಾಶ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು: ನೌಕ ಪಡೆ, ಏರ್ ಫೋರ್ಸ್
  • ಸಂಸ್ಥೆ: ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ
  • ಹುದ್ದೆಗಳ ವಿವರ: ಸೈನ್ಯ-208, ನೌಕ ಪಡೆ- 42, ಏರ್ ಫೋರ್ಸ್-92, ನೌಕಾ ಅಕಾಡೆಮಿ -50 ಒಟ್ಟು 392.
  • ವಿದ್ಯಾರ್ಹತೆ: ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಆರ್ಮಿ ವಿಂಗ್ ಹುದ್ದೆಗೆ ಅರ್ಜಿ ಹಾಕುವವರು 10+2 ಮಾದರಿಯ ಶಾಲೆಯಲ್ಲಿ ಶಿಕ್ಷಣ ಪೂರ್ಣಗಳಿಸಿರಬೇಕು ಅಥವಾ ರಾಷ್ಟ್ರೀಯ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜುಲೈ 2,2000 ರ ಮುಂಚೆ ಜನಿಸಿರಬಾರದು ಮತ್ತು ಜುಲೈ 1,2003 ರೊಳಗೆ ಜನಿಸಿದ ಅವಿವಾಹಿತ ಪುರುಷ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.


Also read: ಲಕ್ಷಾಂತರ ರುಪಾಯಿ ಸಂಬಳ ನೀಡುವ ಸ್ಟೇಟ್​ ಬ್ಯಾಂಕ್ ಆಫ್​ ಇಂಡಿಯಾ ಸ್ಪೆಷಲಿಸ್ಟ್​ ಕ್ಯಾಡರ್​ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯಾಗಿದೆ!

ಅರ್ಜಿ ಶುಲ್ಕ: ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು ಶುಲ್ಕ 100/- ರೂ. SC/ST ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ: UPSC ಯ ಅಧಿಕೃತ ವೆಬ್ ಸೈಟ್ http://www.upsc.gov.in/ ಕ್ಲಿಕ್ ಮಾಡಿ.