ಕೇಂದ್ರ ಲೋಕ ಸೇವಾ ಆಯೋಗ 415 ಎನ್‌ಡಿಎ, ಎನ್‌ಎ-II ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
158

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕೇಂದ್ರ ಲೋಕ ಸೇವಾ ಆಯೋಗ 415 ಎನ್‌ಡಿಎ ಮತ್ತು ಎನ್‌ಎ-II ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಸೆಪ್ಟೆಂಬರ್ 3,2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಭಾರತೀಯ ಕೋಸ್ಟ್ ಗಾರ್ಡ್ ನಾವಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನಾವೆಲ್ ಅಕಾಡೆಮಿ ಎಕ್ಸಾಮಿನೇಷನ್ (II)

ಸಂಸ್ಥೆ (Organisation): ಕೇಂದ್ರ ಲೋಕ ಸೇವಾ ಆಯೋಗ

ವಿದ್ಯಾರ್ಹತೆ (Educational Qualification): ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹುದ್ದೆಗಳಿಗೆ ದ್ವಿತೀಯ ಪಿಯುಸಿ / 10+2 ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನಾವಲ್ ಅಕಾಡೆಮಿ (10+2 ಕೆಡೆಟ್ ಎಂಟ್ರಿ ಸ್ಕ್ಮೀಮ್) ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ /10+2 ನಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್‌ನಲ್ಲಿ ಅಧ್ಯಯನ ಮಾಡಿರಬೇಕು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಈ ಹುದ್ದೆಗಳಿಗೆ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಜನವರಿ 2,2001ರ ಮುಂಚೆ ಮತ್ತು ಜನವರಿ 1,2004 ರ ನಂತರ ಜನಿಸಿರಬಾರದು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ,ಸಂದರ್ಶನ ಮತ್ತು ಫಿಸಿಕಲ್ ಫಿಟ್ ನೆಸ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು : 100/-ರೂ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ – ಯಾವುದೇ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 3,20019ರ
ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://upsc.gov.in/ ಕ್ಲಿಕ್ ಮಾಡಿ.