UPSC ನೇಮಕಾತಿ ಅಸಿಸ್ಟೆಂಟ್ ಹೈಡ್ರೋಜಿಯೋಲಜಿಸ್ಟ್ ಮತ್ತು ಡೈರೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
219

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ನೇಮಕಾತಿ 51 ಅಸಿಸ್ಟೆಂಟ್ ಹೈಡ್ರೋಜಿಯೋಲಜಿಸ್ಟ್ ಮತ್ತು ಡೈರೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌-ನಲ್ಲಿ ಮೇ 2,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಉತ್ತರ ರೈಲ್ವೆ ಮೆಡಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಸಿಸ್ಟೆಂಟ್ ಹೈಡ್ರೋಜಿಯೋಲಜಿಸ್ಟ್ ಮತ್ತು ಡೈರೆಕ್ಟರ್

ಸಂಸ್ಥೆ (Organisation): ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ)

ವಿದ್ಯಾರ್ಹತೆ (Educational Qualification): ಡೈರೆಕ್ಟರ್ ಹುದ್ದೆಗಳಿಗೆ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪಿ.ಹೆಚ್‌ಡಿ ಅಥವಾ ಎಂ.ಫಿಲ್ ಮತ್ತು ಅಸಿಸ್ಟೆಂಟ್ ಹೈಡ್ರೋಲಜಿಸ್ಟ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಡೈರೆಕ್ಟರ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ಮತ್ತು ಅಸಿಸ್ಟೆಂಟ್ ಹೈಡ್ರೋಲಜಿಸ್ಟ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು
ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು 25/-ರೂ ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ / ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): May 2, 2019

ಹೆಚ್ಚಿನ ಮಾಹಿತಿಗಾಗಿ: https://upsc.gov.in/ ಕ್ಲಿಕ್ ಮಾಡಿ.