ಕೇಂದ್ರ ಲೋಕ ಸೇವಾ ಆಯೋಗ 102 ಕಂಬೈನ್ಡ್ ಜಿಯೋ ಸೈಂಟಿಸ್ಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
113

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕೇಂದ್ರ ಲೋಕ ಸೇವಾ ಆಯೋಗ 102 ಕಂಬೈನ್ಡ್ ಜಿಯೋ ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಅಕ್ಟೋಬರ್ 15,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಸೈಂಟಿಸ್ಟ್

ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಪರೀಕ್ಷಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.

ವಯೋಮಿತಿ: ಕಂಬೈನ್ಡ್ ಜಿಯೋ ಸೈಂಟಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1,2020ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30ವರ್ಷ ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ: ಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಅಕ್ಟೋಬರ್ 15,2019ರ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸೆಪ್ಟೆಂಬರ್ 25,2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 15,2019
ಪ್ರಿಲಿಮಿನರಿ ಪರೀಕ್ಷಾ ದಿನಾಂಕ: ಜನವರಿ 19,2020

ಹೆಚ್ಚಿನ ಮಾಹಿತಿಗಾಗಿ: https://www.upsc.gov.in/ ಕ್ಲಿಕ್ ಮಾಡಿ.