UPSC ನೇಮಕಾತಿ 965 ಸಿಎಂಎಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
208

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) 965 ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 6,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಏರ್ ಇಂಡಿಯಾ ಲಿಮಿಟೆಡ್ ಫ್ಲೈಟ್ ಡಿಸ್ಪ್ಯಾಚರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕಂಬೈನ್ಡ್ ಮೆಡಿಕಲ್ ಸರ್ವೀಸಸ್

ಸಂಸ್ಥೆ (Organisation): ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ)

ವಿದ್ಯಾರ್ಹತೆ (Educational Qualification): ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಹುದ್ದೆಗಳಿಗೆ ಎಂಬಿಬಿಎಸ್‌ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ (Job Location): ಭಾರತದೆಲ್ಲೆಡೆ

ವಯೋಮಿತಿ (Age): ಆಗಸ್ಟ್ 1,2019 ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ (Selection process): ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ /ಪರ್ಸನಾಲಿಟಿ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ(Application Fee): ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ /ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ https://upsc.gov.in/sites/default/files/Notif-CMSE-2019-Engl_0.pdf ಕ್ಲಿಕ್ ಮಾಡಿ.