ಅಯೋ ದೇವ್ರೇ !! ವಿಷ್ಣು ಸ್ಮಾರಕಕ್ಕೆ ಮೈಸೂರಿನಲ್ಲೂ ವಿಘ್ನ

0
734

ಯಾಕೋ ಏನೋ ವಿಷ್ಣುವರ್ಧನ್ ಅವರ ಸಮಾಧಿಗೆ ಮುಕ್ತಿ ದೊರಕಿದಂತೆ ಕಾಣುತಿಲ್ಲ, ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಮೊದಲಿಗೆ ಸ್ಮಾರಕ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತಾದರೂ, ಅಲ್ಲಿ ಅಡೆ ತಡೆ ಎದುರಾಗಿದ್ದರಿಂದ ಮೈಸೂರಿಗೆ ಸ್ಥಳಾಂತರಿಸಲು ಸರ್ಕಾರ ನಿರ್ಧರಿಸಿತ್ತು.

ಈ ಹಿನ್ನಲೆಯಲ್ಲಿ ಜಿಲ್ಲಾಡಳಿತದಿಂದ ಸ್ಥಳ ಪರಿಶೀಲನೆಗೆ ತೆರಳಿದ್ದ ಸಂದರ್ಭದಲ್ಲಿ ಸಾಗುವಳಿದಾರರು ಸ್ಮಾರಕ ನಿರ್ಮಿಸಬಾರದೆಂದು ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲಾ ಸರಿ ಹೋಯ್ತು. ಕೊನೆಗೂ ಸಾಹಸ ಸಿಂಹ ವಿಷ್ಣುವಿರ್ಧನ್ ಸಿಂಹಧಾಮ ಸ್ಥಾಪನೆ ಆಗಿಯೇ ಹೋಗುತ್ತದೆ ಎನ್ನುವಾಗ ಮೈಸೂರಿನಲ್ಲಿ ರೈತರ ಪ್ರತಿಭಟನೆ ಕಾವೇರಿದೆ.  ನಿಗದಿತ ಸ್ಥಳದಲ್ಲಿ ವಿಷ್ಣು ಸಮಾಧಿ ನಿರ್ಮಾಣವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತರು ಬೆದರಿಕೆ ಹಾಕಿದ್ದಾರೆ.ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ನಮಗೆ ಹಕ್ಕುಪತ್ರ ನೀಡಬೇಕೆಂದು ಹಿಂದೆಯೇ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಈಗ ಜೀವನೋಪಾಯಕ್ಕಾಗಿ ಇರುವ ಜಮೀನನ್ನೇ ಕಸಿದುಕೊಳ್ಳುತ್ತಿರುವುದು ಸರಿಯಲ್ಲ ಎಂದು ರೈತರು ವಿಷ ಸೇವಿಸಲು ಮುಂದಾಗಿದ್ದು, ರೈತ ಮಹಿಳೆಯರು ಕಣ್ಣೀರಿಟ್ಟಿದ್ದಾರೆ. ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಬಳಿಕ ಸ್ಮಾರಕ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದ್ದಾರೆ. ಆದರೆ, ಜಿಲ್ಲಾಡಳಿತ ಇದು ಸರ್ಕಾರಿ ಜಾಗವಾಗಿದ್ದು, ಇದೇ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಹೇಳಿದೆ.

ಈಗಾಗಲೇ ಬಹಳ ವರ್ಷಗಳಿಂದ ನೆನೆಗುದಿಗೆ ಬಿದಿದ್ದ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಮೈಸೂರಿನಲ್ಲಿ ನಿರ್ಮಾಣವಾಗಬೇಕು ಎಂದು ಭಾರತಿಯವರ ಆಸೆಯಂತೆ ನಿಶ್ಚಯಿಸಲಾಯಿತಾದರೂ ಅಲ್ಲಿಯೂ ಕೂಡ ಮತ್ತೊಂದು ಸಂಕಷ್ಟ ಎದುರಾಗಿದೆ. ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಮೈಸೂರಿಗೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದ್ದು, ಮತ್ತೆ ವಿಘ್ನ ಎದುರಾಗಿದೆ. ಮೈಸೂರಿನ ಹಾಲಾಳು ಗ್ರಾಮದಲ್ಲಿ 5 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ಗುರುತಿಸಿದ್ದು, ಇಲ್ಲಿ ಸ್ಮಾರಕ ನಿರ್ಮಾಣಕ್ಕೆ ಡಿಸೆಂಬರ್ 6 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಗುದ್ದಲಿಪೂಜೆ ನೆರವೇರಿಸಲಿದ್ದಾರೆ.