ನಡೆದಾಡುವ ದೇವರು ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು ಇನ್ನಿಲ್ಲ; ನಾಳೆ ಶಾಲಾ-ಕಾಲೇಜುಗಳಿಗೆ ರಜೆ..

0
301

ಶ್ರೀಗಳ ಚಿಕಿತ್ಸೆ ಫಲಕಾರಿಯಾಗೇ ಇಂದು ನಮ್ಮನಗಲಿದ್ದಾರೆ. ಇಂದು ಬೆಳಿಗ್ಗೆ 11.45ಕ್ಕೆ ಸರಿಯಾಗಿ ಇಹಲೋಕ ತ್ಯಜಿಸಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಅಂತರರಾಷ್ಟ್ರೀಯ ಮಟ್ಟದಲ್ಲಿರುವ ಕೋಟ್ಯಂತರ ಭಕ್ತರನ್ನು ಹೊಂದಿದ ಶ್ರೀಗಳು ಭಕ್ತಕುಲವನ್ನು ಅಗಲಿದ್ದಾರೆ. ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಹಳೆಯ ಮಠದಲ್ಲಿ ಚಿಕಿತ್ಸೆ ನೀಡುತ್ತಿದ್ದರೂ ಫಲಕಾರಿಯಾಗದೆ ಇಂದು ಬೆಳಗ್ಗೆ 11.44 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಮಠದ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಈ ವಿಷಯ ಸಿದ್ದಗಂಗಾ ಮಠದಲ್ಲಿ ನೀರವ ಮೌನ ಆವರಿಸಿದೆ. ಶೀಗಳ ಅಗಲಿಕೆಯಿಂದ ವಿದ್ಯಾರ್ಥಿಗಳ ಆಕ್ರಂದನ ಮನ ಮುಟ್ಟಿದೆ. ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯ ಗಣ್ಯರು ಮತ್ತು ಭಕ್ತರು ಮಠಕ್ಕೆ ಆಗಮಿಸುತ್ತಿದ್ದಾರೆ. ನಿನ್ನೆ ಸಂಜೆವರೆಗೂ ಸ್ವಾಮೀಜಿಯವರ ಆರೋಗ್ಯ ಸಹಜ ಸ್ಥಿತಿಯಲ್ಲಿತ್ತು. ಇಂದು ಮುಂಜಾನೆ ಅವರ ಶ್ವಾಸಕೋಶ, ರಕ್ತದೊತ್ತಡ, ಹೃದಯ ಬಡಿತ, ಉಸಿರಾಟದಲ್ಲಿ ಏರುಪೇರಾಗಿ ಪ್ರೋಟೀನ್ ಅಂಶ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಕೊನೆಗೂ ಚಿಕಿತ್ಸೆ ಫಲಿಸದೇ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.
ಏಪ್ರಿಲ್ 1, 1908ರಲ್ಲಿ ಮಾಗಡಿ ತಾಲೂಕಿನ ವೀರಾಪುರದಲ್ಲಿ ಶಿವಕುಮಾರ ಸ್ವಾಮೀಜಿ ಜನಿಸಿದ್ದರು. ವೀರಾಪುರದ ಹೊನ್ನೇಗೌಡ, ಗಂಗಮ್ಮ ದಂಪತಿಗೆ ಜನಿಸಿದ ಇವರ ಬಾಲ್ಯದ ಹೆಸರು ಶಿವಣ್ಣ ಆಗಿತ್ತು. ಮರಳಿನ ಮೇಲೆ ಅಕ್ಷರ ಬರೆಯುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭಗೊಂಡಿತ್ತು. ಪ್ರಾಥಮಿಕ ಶಾಲಾ ದಿನಗಳಲ್ಲೇ ತಾಯಿ ಕಳೆದುಕೊಂಡ ಶಿವಣ್ಣ, ನಾಗವಲ್ಲಿಯಲ್ಲಿ ಮಾಧ್ಯಮಿಕ ಶಿಕ್ಷಣ 1922ರಿಂದ ತುಮಕೂರಿನ ಸರ್ಕಾರಿ ಪ್ರೌಢ ಶಿಕ್ಷಣ, 1926ರಲ್ಲಿ ಮೆಟ್ರಿಕ್ಯುಲೇಷನ್ ಪೂರ್ಣ ಬಳಿಕ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಓದಿದ್ದರು.

1930ರ ನವೆಂಬರ್ 11 ರಂದು ಸಿದ್ದಗಂಗಾ ಮಠದ ಶ್ರೀ ಮರುಳಾರಾಧ್ಯ ಸ್ವಾಮಿಗಳವರ ಸಮಾಧಿ ಕ್ರಿಯೆಗೆ ಬಂದಾಗ ಶ್ರೀ ಉದ್ದಾನ ಶಿವಯೋಗಿಗಳವರ ಕೃಪಾದೃಷ್ಟಿಗೆ ಒಳಗಾಗಿದ್ದರು. ಬಳಿಕ 1930ರ ಮಾ.3ರಂದು ಸಿದ್ದಗಂಗಾ ಕ್ಷೇತ್ರದ ಉತ್ತರಾಧಿಕಾರಿಯಾಗಿ ಉದ್ದಾನ ಶ್ರೀಗಳು ಶಿವಣ್ಣ ಅವರನ್ನು ಆಯ್ಕೆ ಮಾಡಿದ್ದರು ಮುಂದೆ ತಮ್ಮ ಕಾಯಕದಲ್ಲಿ ತೊಡಗಿ ಇಷ್ಟೊಂದು ಪವಾಡವನ್ನು ಮಾಡಿ ಒಂದು 10 ಸಾವಿರ ಮಕ್ಕಳನ್ನು ಸಾಕಿದ್ದಾರೆ. ಶ್ರೀಗಳ ಸಾವಿನ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಎರಡು ದಿನಗಳು ರಜೆ ಘೋಷಣೆ ಮಾಡಿದ್ದು ಇನ್ನು ರಾಜ್ಯದ ತುಂಬೆಲ್ಲ ನಾಳೆಯ ದಿನ ಸರ್ಕಾರಿ ರಜೆ ಘೋಸಿಸಿದೆ.

ಅಂತಿಮ ದರ್ಶನದ ವ್ಯವಸ್ಥೆ:

ಶ್ರೀಗಳ ನಿಧನ ಹಿನ್ನೆಲೆ ಸಿಎಂ ಕುಮಾರಸ್ವಾಮಿಯವರು ಈಗಾಗಲೇ ಮಠದ ಕಿರಿಯ ಸ್ವಾಮೀಜಿಗಳ ಜೊತೆಗೆ ಚರ್ಚಿಸಿದ್ದಾರೆ. ಅಲ್ಲದೇ ಸಾರ್ವಜನಿಕರ ದರ್ಶನಕ್ಕೆ ಹಳೆ ಮಠದ ಆವರಣದಲ್ಲಿಯೇ ಅವಕಾಶ ಮಾಡಲಾಗಿದೆ. ಇಲ್ಲಿ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು , ಬಸವಣ್ಣ ದೇವರ ಮಠದ ಸಿದ್ಧಲಿಂಗ ಸ್ವಾಮೀಜಿ, ವನಕಲ್ಲು ಮಲ್ಲೇಶ್ವರ ಡಾ.ಬಸವರಮಾನಂದ ಸ್ವಾಮೀಜಿ, ಮೇಲಣಗವಿ ಮಲಯ ಶಾಂತಮುನಿ ದೇಶಿಕೇಂದ್ರ ಸ್ವಾಮೀಜಿ, ಹೊನ್ನಮದೇವಿ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಬಂಡೆಮಠದ ಮಹಾಸ್ವಾಮೀಜಿ ಬಸವಲಿಂಗ ಸ್ವಾಮೀಜಿ, ಗದ್ದಿಗೆ ಮಠದ ಶ್ರೀ ಮಹಂತ ಸ್ವಾಮೀಜಿಗಳು ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ.