ಬರಗಾಲದಲ್ಲಿ ಮಹಾರಾಷ್ಟ್ರದ ಕೊಯ್ನಾದಿಂದ ಕರ್ನಾಟಕಕ್ಕೆ ನೀರು

0
501

ಬೆಂಗಳೂರು: ಇಂದು ರಾತ್ರಿ ಕೊಯ್ನಾ ಜಲಾಶಯದಿಂದ ರಾಜ್ಯಕ್ಕೆ 2.5 ಟಿಎಂಸಿ ನೀರು ಬಿಡುಗಡೆ ಮಾಡಲು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ ನೀಡಿದ್ದಾರೆ.

ಮಾ.10ರಂದು ಸಂಸದ ಪ್ರಹ್ಲಾದ್ ಜೋಷಿ, ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಅಥಣಿ ಶಾಸಕ ಲಕ್ಷ್ಮಣ್ ಸವದಿ ನೇತೃತ್ವದ ಬಿಜೆಪಿ ನೇತೃತ್ವದ ನಿಯೋಗ ನೀರು ಬಿಡುಗಡೆ ಮಾಡಲು ಮನವಿ ಮಾಡಿದ್ದರು.

‘ನಮ್ಮ ಮನವಿಗೆ ಸ್ಪಂದಿಸಿ 2.5 ಟಿಎಂಸಿ ನೀರನ್ನು ಕೊಯ್ನಾ ಜಲಾಶಯದಿಂದ ಬಿಡಲು ಸೂಚಿಸಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಮಹಾರಾಷ್ಟ್ರ ಸರಕಾರಕ್ಕೆ ಧನ್ಯವಾದಗಳು’ ಎಂದು ಅಥಣಿ ಶಾಸಕ ಶ್ರೀ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದ್ದಾರೆ.

ಈ ಹಿಂದೆ ಉತ್ತರ ಕರ್ನಾಟಕ ಬಿಜೆಪಿ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ಗೆ ನೀರು ಬಿಡುವಂತೆ ಮನವಿ ಸಲ್ಲಿಸಿದ್ದರು. ಜತೆಗೆ ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಆಲಮಟ್ಟಿ ಜಲಾಶಯದಿಂದ ಸೊಲ್ಲಾಪುರ ಭಾಗಕ್ಕೆ ನೀರು ಕೊಡಲಾಗುವುದು, ಕೋಯ್ನಾದಿಂದ ನೀರು ಕೊಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ತಿಳಿಸಿದ್ದರು. ಅದರಂತೆ ಇದೀಗ ಮಹಾರಾಷ್ಟ್ರ ನೀರು ಬಿಡುಗಡೆ ಮಾಡಿದೆ.