ರಾಮನಗರ ಜಿಲ್ಲೆಯಲ್ಲಿ 104 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
186

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಮನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 104 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆಗಸ್ಟ್ 14,2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕರ್ನಾಟಕ ಬ್ಯಾಂಕ್ ನೇಮಕಾತಿ ಹಲವು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿ

ಸಂಸ್ಥೆ (Organisation): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ವಿದ್ಯಾರ್ಹತೆ (Educational Qualification): ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್‌.ಎಲ್‌.ಸಿ ವಿದ್ಯಾರ್ಹತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಟ 9ನೇ ತರಗತಿ ತೇರ್ಗಡೆಯಾಗಿರಬೇಕು.

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆಯ ಆದ್ಯತೆ: ಮೊದಲ ಆದ್ಯತೆ ಆಸಿಡ್ ದಾಳಿಗೊಳಗಾದವರಿಗೆ, ಎರಡನೇ ಆದ್ಯತೆ: ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ಮೂರನೆ ಆದ್ಯತೆ ವಿಧವೆಯರಿಗೆ , ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ,

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಂಗನವಾಡಿಯ ಅಧಿಕೃತ ವೆಬ್‌ಸೈಟ್‌ www.anganwadirecruit.kar.nic.in ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 14,2019ರ ಒಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/docs/24981180633.pdf ಕ್ಲಿಕ್ ಮಾಡಿ.