ಮನೆಮುಂದೆ ಉಚಿತವಾಗಿ ಸಿಗುವ ತುಳಸಿಯ 5 ಎಲೆಗಳನ್ನು ಪ್ರತಿನಿತ್ಯ ತಿನ್ನುವುದರಿಂದ ಎಷ್ಟೊಂದು ಲಾಭವಿದೆ ನೋಡಿ.!

0
956

ಹಲವು ಅರೋಗ್ಯದ ಗುಣಗಳನ್ನು ಹೊಂದಿರುವ ತುಳಸಿ ಎಲೆಗಳನ್ನು ತಿನ್ನಬೇಕು ಎನ್ನುವುದು ಹಲವು ಅಧ್ಯಯನಗಳು ಹೇಳುತ್ತೇವೆ ಅದರಂತೆ ಪ್ರತಿನಿತ್ಯ ತುಳಸಿ ತಿಂದರೆ ಎಷ್ಟೊಂದು ಆರೋಗ್ಯಕ್ಕೆ ಲಾಭವಿದೆ ಎನ್ನುವ ಕುರಿತು ತಿಳಿಸಲಾಗಿದ್ದು. ತುಳಸಿ ಎಲೆಗಳಲ್ಲಿರುವ ಒಂದು ಬಗೆಯ ವಿಶಿಷ್ಟ ಸುವಾಸನೆಯು ಕ್ರಿಮಿಕೀಟಗಳನ್ನು ವಿಕರ್ಷಣಗೊಳಿಸುವಂತಹ ಗುಣವನ್ನು ಹೊಂದಿದೆ. ಆದ್ದರಿಂದ ತುಳಸಿ ಗಿಡಗಳು ಮನೆಯ ಸುತ್ತ ಮುತ್ತಲೂ ಇಟ್ಟುಕೊಂಡಿರುತ್ತಾರೆ.

Also read: ತುಳಸಿ ನೀರಿನಲ್ಲಿರುವ ಔಷಧೀಯ ಅಂಶ ಹಲವಾರು ರೋಗ ರುಜಿನಗಳನ್ನು ದೂರಮಾಡುತ್ತದೆ !! ಇದೆ ಕಾರಣಕ್ಕೆ ನಮ್ಮ ಹಿರಿಯರು ನಿತ್ಯ ತುಳಸಿ ತೀರ್ಥವನ್ನು ಸೇವಿಸುತಿದ್ದಿದ್ದು!!

ತುಳಸಿ ಎಲೆಯಿಂದ ಏನೆಲ್ಲಾ ಆರೋಗ್ಯ?

ತುಳಸಿ ದೇವಿಯನ್ನು ಮುಟ್ಟಿದೊಡನೆಯೇ ನಾವು ಶುದ್ಧರಾಗುತ್ತೇವೆ ಹಾಗೂ ಪ್ರಾರ್ಥಿಸುವುದರಿಂದ ಎಲ್ಲಾ ಕಾಯಿಲೆಗಳು ಹೇಳಹೆಸರಿಲ್ಲದಂತೆ ಮಾಯವಾಗಿ ನೆಮ್ಮದಿ ಸಿಗುತ್ತದೆ ಹಾಗೆಯೇ ಒಮ್ಮೆ ತುಳಸಿಯನ್ನು ನೀರಿನಿಂದ ತೋಯಿಸಿದರೆ ಯಮರಾಜನ ಭಯವು ಮರೆಯಾಗುತ್ತದೆ ಎಂದು ಸ್ಕಂದ ಪುರಾಣವು ಹೇಳುತ್ತದೆ. ವೈದ್ಯಕೀಯ ಕ್ಷೇತ್ರದಲ್ಲೂ ತುಳಸಿಯು ಹಲವಾರು ಅದ್ಭುತಗಳನ್ನು ಮಾಡಿದೆ. ನಮ್ಮ ಭಾರತೀಯ ಪರಂಪರೆಯು ಸಾವಿರಾರು ವರ್ಷಗಳಿಂದ ತುಳಸಿಯನ್ನು ಬಳಸಿಕೊಂಡು ಬರುತ್ತಿದೆ. ಇದು ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ ಎಂಬ ನಂಬಿಕೆಯೂ ಇದೆ.

1. ಜ್ಞಾಪಕ ಶಕ್ತಿ ಹೆಚ್ಚುತ್ತದೆ

ಐದು ತುಳಸಿ ಎಲೆಯನ್ನು ಪ್ರತಿ ದಿನ ತಿಂದರೆ ಹಲವು ಸೋಂಕು ಮತ್ತು ರೋಗವನ್ನು ದೂರವಿರಿಸಬಹುದು. ಇದರ ಸೇವನೆಯಿಂದ ಜ್ಞಾಪಕ ಶಕ್ತಿಯೂ ಹೆಚ್ಚಾಗಿ ಬುದ್ಧಿವಂತಿಕೆಯೂ ಚುರುಕುಗೊಳ್ಳುತ್ತದೆ. ಇದನ್ನು ವಯಸ್ಸಾದವರು ಸೇವಿಸಿದರೆ ಸುಸ್ತು ಕಡಿಮೆಗೊಳ್ಳುತ್ತದೆ.

2. ಜ್ವರ ಹಾಗೂ ಶೀತಕ್ಕೆ ರಾಮಬಾಣ:

ಜ್ವರ ಹಾಗೂ ಶೀತಕ್ಕೆ ಇದರ ಎಲೆಗಳನ್ನು ಚಹಾದೊಂದಿಗೆ ಕುದಿಸಿ ಕುಡಿಯುವುದರಿಂದ ಮಲೇರಿಯಾ ಹಾಗೂ ಡೆಂಗ್ಯೂ ಜ್ವರ ಉಪಶಮನವಾಗುತ್ತದೆ. ಮತ್ತು ತುಳಸಿ ರಸ ಜ್ವರವನ್ನು ತಗ್ಗಿಸುವಲ್ಲಿ ಸಹಕಾರಿ. ಇದರ ಎಲೆಯನ್ನು ಜಗಿಯುವುದರಿಂದ ಶೀತ ಹಾಗೂ ಕೆಮ್ಮು ನಿವಾರಣೆಯಾಗುತ್ತದೆ.

3. ಕಿಡ್ನಿ ಕಲ್ಲಿನ ಸಮಸ್ಯೆ:

ತುಳಸಿ ರಸವನ್ನು ಜೇನಿನೊಂದಿಗೆ ನಿಯಮಿತವಾಗಿ 6 ತಿಂಗಳು ತೆಗೆದುಕೊಂಡಲ್ಲಿ ನೋವಿನ ಬಾಧೆ ಕಡಿಮೆಯಾಗುತ್ತದೆ. ಹೀಗೆ ಬಹುವಿಧ ಕಾಯಿಲೆಗಳಿಗೆ ಮನೆಮದ್ದಾಗಿರುವ ತುಳಸಿಯು ವಾತಾವರಣಕ್ಕೂ ಒಳ್ಳೆಯದು. ಹೆಚ್ಚು ಖರ್ಚಿಲ್ಲದೆ ಬೆಳೆಸಬಹುದಾದ ತುಳಸಿಯಿಂದ ನಾವು ಪಡೆಯಬಹುದಾದ ಪ್ರಯೋಜನ ಅಪಾರವಾದುದು.

4. ಹೊಳೆವ ತ್ವಚೆ:

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ರಸವನ್ನು ನೀರಿನೊಂದಿಗೆ ಬೆರೆಸಿ ಸೇವಿಸಿದರೆ ತ್ವಚೆಯ ಸಾಂದ್ರತೆ ಹೆಚ್ಚಾಗುತ್ತದೆ. ಇದರಿಂದ ಸುಕ್ಕು ಕಟ್ಟಿದ ಚರ್ಮವು ಹೊಳಪನ್ನು ಪಡೆಯುತ್ತೆ. ಅಷ್ಟೇ ಅಲ್ಲದೆ ಚರ್ಮಕ್ಕೆ ಬರುವ ಹಲವು ರೋಗವನ್ನು ದೂರ ಮಾಡುತ್ತೆ.

5. ಕೊಲೆಸ್ಟ್ರಾಲ್:

source: getdocsays.com

ತುಳಸಿ ಬೊಜ್ಜನ್ನು ನಿಯಂತ್ರಿಸುವುದಲ್ಲದೆ ರಕ್ತದಲ್ಲಿನ ಕೊಬ್ಬಿನಂಶವನ್ನೂ ನಿಯಂತ್ರಿಸುತ್ತದೆ. ಜ್ವರ, ಕೆಮ್ಮು ಮತ್ತು ಟಿಬಿ ರೋಗಿಗಳೂ 3 ಗ್ರಾಂ ತುಳಸಿಯನ್ನು ಪ್ರತಿನಿತ್ಯ ಸೇವಿಸಿದರೆ ಉಪಯೋಗ ಹೊಂದಬಹುದು.

Also read: ಮನೆಯ ಮುಂದೆ ತುಳಸಿ ಕಟ್ಟೆ ಕಟ್ಟುವ ಹಿಂದಿನ ವೈಜ್ಞಾನಿಕ ಸತ್ಯ!!!