ಚುನಾವಣಾ ಸಂಹಿತೆ ಎಂದರೇನು? ಜಾರಿಯಾದನಂತರ ನೀವು ಫಾಸೆಬುಕ್/ವಾಟ್ಸಾಪ್-ಗಳಲ್ಲಿ ನಿಮ್ಮ ಪಕ್ಷದ ಪರ ನೀವು ಪ್ರಚಾರದಲ್ಲಿ ತೊಡಗಬಹುದಾ ಇಲ್ಲವಾ?? ಇಲ್ಲಿದೆ ಉತ್ತರ…

0
598

ಲೋಕಸಭಾ ಚುನಾವಣೆ 2019 ದಿನಾಂಕ ಪ್ರಕಟ ಮಾಡಿದ ಕೇಂದ್ರ ಚುನಾವಣಾ ಆಯೋಗ 17ನೇ ಲೋಕಸಭಾ ಚುನಾವಣೆ ಚುನಾವಣಾ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ತಂದಿದೆ. ಏಪ್ರಿಲ್ 18 ಮತ್ತು 23ರಂದು ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನೀತಿ ಸಂಹಿತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಅನ್ವಯವಾಗುತ್ತದೆ. ಮತದಾನ ಮುಗಿದು, ಫಲಿತಾಂಶ ಘೋಷಣೆ ಆಗುವ ತನಕ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ರಾಜಕೀಯ ವ್ಯಕ್ತಿಗಳು ಮತ್ತು ಮತದಾರರು ಏನು ಮಾಡಬಾರದು, ಯಾವ ನಿಯಮ ಪಾಲಿಸಬೇಕು, ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.


Also read: ಸುಮಲತಾ ಬೆಂಬಲಕ್ಕೆ ನಿಂತ ಸ್ಟಾರ್ ನಟರಿಬ್ಬರ ವಿರುದ್ದ ಚುನಾವಣಾ ಆಯೋಗಕೆ ದೂರು; ಜೆಡಿಎಸ್ ಶಾಸಕರಿಂದ ಯಶ್, ದರ್ಶನ್ ಗೆ ಎಚ್ಚರಿಕೆ??

ನೀತಿ ಸಂಹಿತೆ ನಿಯಮಗಳು

 • ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ
  ಸಾಮಾಜಿಕ ಜಾಲತಾಣಗಳಾದ facebook, whatsapp, instagram, ಟ್ವೀಟ್, ನಲ್ಲಿ ಪ್ರಚಾರ ಮಾಡಿದರೆ ತಪ್ಪಲ್ಲ ಆದರೆ ಚುನಾವಣಾ ಆಯೋಗದ ಚೌಕಟ್ಟಿನಲ್ಲಿ, ಕಾನೂನಿನ ಅಡ್ಡಿಯಲ್ಲಿ ಯಾವುದೇ ವ್ಯಕ್ತಿ ಚುನಾವಣೆ ಬಗ್ಗೆ ಪ್ರಚಾರ ಮಾಡಬಹುದು. ಇದರ ಬಗ್ಗೆ ಆಯೋಗ ಹೇಳಿದ್ದು, ಏನೆಂದರೆ ಅಭ್ಯರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿದ ಬಗ್ಗೆ ಲೆಕ್ಕ ನೀಡಬೇಕು. ಅದು ಅಭ್ಯರ್ಥಿಗಳಿಗೆ ಸಂಬಂಧಪಟ್ಟಿದ್ದು. ಆಕ್ಟ್ 19 ರ ಪ್ರಕಾರ ಅಭಿವ್ಯಕ್ತಿ ಸ್ವಾತಂತ್ರ ಕೊಟ್ಟಿದು, ಕಾನೂನಿನ ಚೌಕಟ್ಟಿನಲ್ಲಿ ಯಾವುದೇ ಪ್ರಚಾರವನ್ನು ಮಾಡಬಹುದು. ಆದರೆ ಯಾವುದೇ ವ್ಯಕ್ತಿಯನ್ನು ಅವಹೇಳನ ಮಾಡುವುದು ತಪ್ಪು.
  Also read: ಈ ಹೊಸ ಸಮೀಕ್ಷೆ ನೋಡಿ ಇದರ ಪ್ರಕಾರ ಮೋದಿ ಮತ್ತೆ ಅಧಿಕಾರಕ್ಕೆ ಬರುವುದು ಪಕ್ಕಾ!! ನೀವು ಈ ಸಮೀಕ್ಷೆ ನಿಜವಾಗುತ್ತೆ ಅಂತೀರಾ??
 • ಮಂತ್ರಿಗಳು ಚುನಾವಣಾ ಪ್ರಚಾರ ಕೈಗೊಂಡಾಗ ಸರ್ಕಾರಿ ಅಧಿಕಾರಿಗಳ ವರ್ತನೆ ಬಗ್ಗೆ ಹಲವಾರು ಸೂಚನೆಗಳನ್ನು ಆಯೋಗ ಹೊರಡಿಸಿದೆ. ಅದರಂತೆ ಅಧಿಕಾರಿಗಳು ನಡೆದುಕೊಳ್ಳಬೇಕು.
 • ಒಂದು ವೇಳೆ ಮಂತ್ರಿಗಳು ಪ್ರವಾಸ ಸರ್ಕಾರಿ ಕೆಲಸಗಳನ್ನು ಮಾತ್ರ ನಿರ್ವಹಿಸುತ್ತಿದ್ದರೆ ಅವರಿಗೆ ಕೆಲಸವನ್ನು ನಿರ್ವಹಿಸಲು ಅನುಕೂಲವಾಗುವಂತೆ ಎಲ್ಲಾ ವ್ಯವಸ್ಥೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಅನುವು ಮಾಡಿ ಕೊಡಬೇಕು.
 • ತಮ್ಮ ಪ್ರವಾಸದಲ್ಲಿ ಮೇಲಿನ ಎರಡು ಅಂಶಗಳ ಬಗ್ಗೆ ಸ್ಪಷ್ಟ ಸೂಚನೆ ನೀಡದಿದ್ದಲ್ಲಿ ಅಥವಾ ಅವರು ತಮ್ಮ ಪ್ರವಾಸ ಕಾರ್ಯಕ್ರಮದ ವಿವರಗಳನ್ನು ಕೊಡದಿದ್ದಲ್ಲಿ ಈ ಪ್ರವಾಸಗಳು ಚುನಾವಣಾ ಪ್ರವಾಸಗಳೆಂದು ಭಾವಿಸಲಾಗುತ್ತದೆ.
 • ಹೊಸ ಯೋಜನೆ, ವಿನಾಯಿತಿ ಘೋಷಣೆ ಮಾಡುವಂತಿಲ್ಲ
  ಚುನಾವಣೆ ನೀತಿ ಸಂಹಿತೆ ಜಾರಿ ಆದ ಮೇಲೆ ಸರಕಾರದಿಂದ ಯಾವುದೇ ಯೋಜನೆ ಅಥವಾ ಕಾರ್ಯಕ್ರಮ ಅಥವಾ ವಿನಾಯಿತಿ ಅಥವಾ ಭರವಸೆ ಘೋಷಣೆ ಮಾಡುವಂತಿಲ್ಲ. ಶಂಕುಸ್ಥಾಪನೆ ಮುಂತಾದವು ಮಾಡುವಂತಿಲ್ಲ. ಮತದಾರರ ಮೇಲೆ ಒಂದು ಪಕ್ಷಕ್ಕೆ ಒಲವು ಮೂಡುವಂಥದ್ದನ್ನು ಮಾಡುವಂತಿಲ್ಲ.
 • ರಾಜಕಾರಣಿಗಳಿಗೆ ನಿಷಿದ್ಧ ಯೋಜನೆಗಳು
  ಈ ಮಿತಿಗಳು ಹೊಸ ಯೋಜನೆ ಹಾಗೂ ಅದಾಗಲೇ ನಡೆಯುತ್ತಿರುವ ಯೋಜನೆಗಳಿಗೆ ಅನ್ವಯಿಸುತ್ತದೆ. ಆದರೆ ಇದು ರಾಷ್ತ್ರೀಯ, ಪ್ರಾದೇಶಿಕ ಹಾಗೂ ರಾಜ್ಯದ ಜನೋಪಯೋಗಿ ಯೋಜನೆಗಳು, ಮುಕ್ತಾಯ ಹಂತದ ಯೋಜನೆಗಳು, ನಿಲ್ಲಿಸದೇ ಅಥವಾ ತಡ ಮಾಡದೆ ಮಾಡಬಹುದು. ಇಂಥ ಯೋಜನೆಗಳಲ್ಲಿ ಅಧಿಕಾರಿಗಳು ಪಾಲ್ಗೊಳ್ಳಬಹುದು. ರಾಜಕಾರಣಿಗಳು ಭಾಗವಹಿಸುವಂತಿಲ್ಲ. ಪಕ್ಷದ ಅಭಿಮಾನಿಗಳು, ಕಾರ್ಯಕ್ರಮಗಳು ಅಧಿಕಾರದಲ್ಲಿರುವ ಪಕ್ಷಕ್ಕೆ ಅನುಕೂಲ ಆಗುವಂತೆ ಮಾಡುವಂತಿಲ್ಲ.
 • ಬಜೆಟ್ ನಲ್ಲಿ ಘೋಷಣೆ ಆಗಿದ್ದ ಯೋಜನೆಗಳಿಗೆ ಅಡ್ಡಿ ಇಲ್ಲ
  ಬಜೆಟ್ ನಲ್ಲಿ ಘೋಷಣೆ ಮಾಡಿದ ಯೋಜನೆಗಳು, ನೀತಿ ಸಂಹಿತೆ ಜಾರಿಗೆ ಮುನ್ನವೇ ಘೋಷಣೆಯಾದ ಯೋಜನೆಗಳನ್ನು ಚುನಾವಣೆ ನೀತಿ ಸಂಹಿತೆ ಘೋಷಣೆ ಆದ ಮೇಲೂ ಕೈಗೆತ್ತಿಕೊಳ್ಳಲು ಯಾವುದೇ ತಡೆ ಇಲ್ಲ. ಆದರೆ ಅದು ಮತದಾರರನ್ನು ಸೆಳೆಯುವ ಉದ್ದೇಶದಿಂದ ಕೈಗೊಂಡಿದ್ದಾಗಿರಬಾರದು.


Also read: ಕರ್ನಾಟಕದಲ್ಲಿ ಮೋದಿ ಅಬ್ಬರ; ರಾಹುಲ್ ಸಂವಾದದಲ್ಲೇ ಮೋದಿ ಪರ ಘೋಷಣೆ..

 • ಹೊಸದಾಗಿ ಯೋಜನೆಗಳಿಗೆ ಅನುದಾನ ನೀಡಬಾರದು
  ಹೊಸದಾಗಿ ಸರಕಾರಿ ಯೋಜನೆಗಳಿಗೆ ಅನುದಾನಗಳನ್ನು ನೀಡುವಂತಿಲ್ಲ. ಸಚಿವರು ಯೋಜನೆಗಳ ಪರಿಶೀಲನೆ ಮಾಡುವುದು ಕೂಡ ನಿಷಿದ್ಧ. ಚುನಾವಣೆಗೆ ಪ್ರಯೋಜನ ವಿರುವ ಯೋಜನೆಗಳು ಸದ್ಯಕ್ಕೆ ಚಾಲ್ತಿಯಲ್ಲಿದ್ದರೂ ಅವುಗಳನ್ನು ಚುನಾವಣೆ ಪೂರ್ಣಗೊಳ್ಳುವವರೆಗೆ ನಿಲ್ಲಿಸಬೇಕಾಗುತ್ತದೆ. ಚುನಾವಣೆ ಆಯೋಗದ ಒಪ್ಪಿಗೆ ಇಲ್ಲದೆ ರಾಜ್ಯದ ಯಾವುದೇ ಭಾಗದಲ್ಲಿ ಕಾಮಗಾರಿ ನೀಡುವಂತಿಲ್ಲ.
 • ಈಗಾಗಲೇಚಾಲ್ತಿಯಲ್ಲಿರುವ ಕೆಲಸಕ್ಕೆ ಅಡ್ಡಿಯಿಲ್ಲ
  ಬಜೆಟ್- ನಲ್ಲಿ ಕೆಲಸ ಆರಂಭವಾಗಿದ್ದಲ್ಲಿ ಮುಂದುವರಿಸಬಹುದು. ಆದರೆ ವರ್ಕ್ ಆರ್ಡರ್ ನೀಡಿದ್ದರೂ ಇನ್ನೂ ಕಾಮಗಾರಿ ಶುರುವಾಗಿಲ್ಲ ಅನ್ನೋದಾದರೆ ಈಗ ಯಾವುದೇ ಕೆಲಸವನ್ನು ಶುರು ಮಾಡುವಂತಿಲ್ಲ. ಚುನಾವಣೆ ಪ್ರಕ್ರಿಯೆ ಪೂರ್ತಿಗೊಂಡ ಮೇಲಷ್ಟೇ ಮಾಡಬೇಕು. ಕಾಮಗಾರಿಗಳು ಪೂರ್ಣಗೊಂಡಿದ್ದಲ್ಲಿ, ಆ ಬಗ್ಗೆ ಅಧಿಕಾರಿಗಳು ಸಂಪೂರ್ಣ ತೃಪ್ತರಾಗಿದ್ದಲ್ಲಿ ಹಣ ಬಿಡುಗಡೆ ಮಾಡಬಹುದು.
 • ಬರ ಪರಿಹಾರ ಮಂಜೂರಾತಿಗೆ ಅಡ್ಡಿಯಿಲ್ಲ
  ಬರ, ಪ್ರವಾಹದಂತಹ ಪ್ರಕೃತಿ ವಿಕೋಪಗಳಿಗೆ ಸಂಬಂಧಿಸಿದಂಥ ಪರಿಹಾರ ಮಂಜೂರಾತಿಗೆ ಯಾವುದೇ ಅಡೆತಡೆ ಇಲ್ಲ. ಇನ್ನು ಹಿರಿಯರು, ಅಶಕ್ತರ ಸಲುವಾಗಿ ರೂಪಿಸಿದ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ ಹಣ ಮಂಜೂರಾತಿಗೆ ಮುಂಚೆ ಚುನಾವಣೆ ಆಯೋಗದ ಒಪ್ಪಿಗೆ ಪಡೆಯಬೇಕಾಗುತ್ತದೆ.


Also read: ಒಂದೇ ತಿಂಗಳಲ್ಲಿ 2 ಬಾರಿ ಸಂಚಾರ ನಿಯಮ ಉಲ್ಲಂಘಿಸಿ ಎಚ್ ಡಿ ಕುಮಾರಸ್ವಾಮಿ ಕಾರಿಗೆ ನೋಟಿಸ್; ನಿಯಮ ಉಲ್ಲಂಘಿಸಿದರೂ ದಂಡ ಕಟ್ಟದ ಮುಖ್ಯಮಂತ್ರಿಗಳು..

 • ಅಧಿಕಾರಿಗಳ ವರ್ಗಾವಣೆ ಮೇಲೆ ಕೆಲ ನಿರ್ಬಂಧ
  ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳನ್ನು ಹೊರತುಪಡಿಸಿ ಇನ್ಯಾವುದೇ ವರ್ಗಾವಣೆಗಳನ್ನು ಮಾಡುವಂತಿಲ್ಲ. ಚುನಾವಣೆ ಆಯೋಗದ ಒಪ್ಪಿಗೆ ಇಲ್ಲದೆ ಯಾವುದೇ ನೇಮಕಾತಿ, ಬಡ್ತಿಯನ್ನು ಸರಕಾರಿ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಮಾಡುವಂತಿಲ್ಲ.
 • ಕೇಂದ್ರ ಸರಕಾರ, ರಾಜ್ಯ ಸರಕಾರ, ಸಾರ್ವಜನಿಕ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆ, ಸ್ಥಳೀಯ ಸಂಸ್ಥೆ ಹೀಗೆ ಇಷ್ಟುದ್ದ ಪಟ್ಟಿ ಮಾಡಿರುವ ಸಂಸ್ಥೆಗಳ ಅಧಿಕಾರಿಗಳ ವಾಹನವನ್ನು ಚುನಾವಣೆ ಕೆಲಸಗಳಿಗೆ ಬಳಸುವಂತಿಲ್ಲ.
 • ಸರಕಾರಿ ವಾಹನ ಬಳಕೆಗೆ ನಿಯಮಗಳು
  ತುರ್ತು ಸಂದರ್ಭ ಹೊರತು ಪಡಿಸಿ, ಕೇಂದ್ರ ಅಥವಾ ರಾಜ್ಯದ ಸಚಿವರು ಚುನಾವಣೆ ಕರ್ತವ್ಯನಿರತ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸುವಂತಿಲ್ಲ. ಸಚಿವರಿಗೆ ನೀಡುವ ವಾಹನವನ್ನು ಅಧಿಕೃತ ನಿವಾಸ ಹಾಗೂ ಕಚೇರಿ ಮಧ್ಯದ ಪ್ರಯಾಣಕ್ಕೆ ಮಾತ್ರ ಬಳಸಬೇಕು. ಬೇರೆ ಯಾವುದೇ ರಾಜಕೀಯ ಚಟುವಟಿಕೆಗೆ ಬಳಸುವಂತಿಲ್ಲ.
 • ಜಾಹಿರಾತು ನಿಯಮ
  ಸರಕಾರಿ ಹಣದಲ್ಲಿ ಜಾಹೀರಾತು ನೀಡುವಂತಿಲ್ಲ. ಪೋಸ್ಟರ್, ಬಂಟಿಂಗ್ಸ್ ಬಳಸುವಂತಿಲ್ಲ, ರಾತ್ರಿ ಹತ್ತು ಗಂಟೆ ನಂತರ ಬೆಳಗ್ಗೆ ಆರರವರೆಗೆ ಮೈಕ್ ಬಳಸುವಂತಿಲ್ಲ. ಧಾರ್ಮಿಕ ಸ್ಥಳಗಳಲ್ಲಿ ಚುನಾವಣೆ ಸಭೆಗಳನ್ನು ನಡೆಸುವಂತಿಲ್ಲ. ಹೀಗೆ ಇದೇ ರೀತಿ ನೀತಿ ಸಂಹಿತೆಯ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.