ಕರ್ನಾಟಕ ಹಾಗೂ ತಮಿಳುನಾಡಿನಿಂದ ಭಾರೀ ವಿರೋಧಕ್ಕೆ ಮಣಿದು ಹಿಂದಿ ಕಲಿಕೆ ಕಡ್ಡಾಯ ವಿಷಯ ಕೈ ಬಿಟ್ಟ ಕೇಂದ್ರ ಸರ್ಕಾರ!!

0
271

ಶಾಲಾ ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಿಂದಲೇ ಅಲ್ಲಿನ ಸ್ಥಳೀಯ ಮಾತೃಭಾಷೆಯ ಜೊತೆಗೆ ಇಂಗ್ಲೀಷ್​ ಹಾಗೂ ತೃತೀಯ ಭಾಷೆಯಾಗಿ ಹಿಂದಿಯನ್ನೂ ಕಲಿಸುವಂತೆ ಹಿಂದಿ ಭಾಷಾ ಕಲಿಕೆ ಕಡ್ಡಾಯ ನೀತಿ ಬಗ್ಗೆ ರಾಷ್ಟ್ರಾದ್ಯಂತ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತ್ರಿಭಾಷಾ ಶಿಕ್ಷಣ ನೀತಿಯನ್ನು ದಕ್ಷಿಣ ಭಾರತದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Also read: ಸರ್ಕಾರಿ ಶಾಲೆಯಲ್ಲೇ ಆಂಗ್ಲ ಮಾಧ್ಯಮ ಶಿಕ್ಷಣದ ವಿಚಾರದಲ್ಲಿ ಪೋಷಕರು ಸರ್ಕಾರದ ವಿರುದ್ಧ ಯಾಕೆ ಆಕ್ರೋಶಗೊಂಡಿದ್ದಾರೆ ಗೊತ್ತಾ?

ಹೌದು ಹಿಂದಿ ಭಾಷೆ ಕಡ್ಡಾಯ ಕಲಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಯುಟರ್ನ್ ಹೊಡೆದಿದೆ. ಸರ್ಕಾರದ ನಿರ್ಧಾರಕ್ಕೆ ಹಿಂದಿಯೇತರ ರಾಜ್ಯಗಳಿಂದ ಬೃಹತ್ ವಿರೋಧ ವ್ಯಕ್ತವಾಗುತ್ತಿದ್ದಂತೆ ಸರ್ಕಾರವು ಶೈಕ್ಷಣಿಕ ಪಠ್ಯದಲ್ಲಿ ಮೂರು ಭಾಷೆಗಳ ಕಲಿಕೆ ಕಡ್ಡಾಯ ಎಂಬ ಷರತ್ತನ್ನು ಹಿಂಪಡೆದಿದೆ.ವಿದ್ಯಾರ್ಥಿಗಳಿಗೆ ಹಿಂದಿ ಕಡ್ಡಾಯವಾಗಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದ್ದು ಈ ನೀತಿಯನ್ನು ಕೈ ಬಿಡಲು ಒಪ್ಪಿದೆ.

ಈ ನೀತಿಯ ಉದ್ದೇಶ:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ- ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ.ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ತ್ರಿಭಾಷಾ ಸೂತ್ರ ಅಳವಡಿಸಿಕೊಳ್ಳಬೇಕು ಎಂದು ಶಿಫಾರಸು ಮಾಡಿತ್ತು. ಈ ಶಿಫಾರಸು ಆಧಾರಿಸಿ ಕೇಂದ್ರ ಸರ್ಕಾರ ಹಿಂದಿ ಕಡ್ಡಾಯದ ರಾಷ್ಟ್ರೀಯ ಶಿಕ್ಷಣ ರೀತಿಗೆ ಸಂಬಂಧಿಸಿದಂತೆ ಹೊಸಕರಡು ರಚಿಸಿತ್ತು. ಇದಕ್ಕೆ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಮತ್ತು ಪ್ರಾದೇಶಿಕ ಭಾಷೆ, ಪ್ರಾಬಲ್ಯದ ಪ್ರಾಂತ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿ ಬಲವಂತ ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಿ ದೊಡ್ಡಮಟ್ಟದ ಹೋರಾಟಕ್ಕೆ ನಡೆಸಲು ಮುಂದಾದ ಸೂಚನೆಯನ್ನು ಅರಿತ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಕರಡನ್ನು ಪರಿಷ್ಕರಿಸಿ ಹಿಂದಿ ಭಾಷೆ ಕಡ್ಡಾಯವಲ್ಲ ಅದು ಐಚ್ಛಿಕ ಎಂದು ಸ್ಪಷ್ಟಪಡಿಸಿದೆ.

ಏನಿದು ತ್ರಿಭಾಷಾ ಸೂತ್ರ?

ಬಹುಭಾಷಾ ಸಂವಹನ ಕೌಶಲ್ಯವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 1968ರಲ್ಲೇ ಮೊದಲ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಸೂತ್ರವನ್ನು ಪ್ರತಿಪಾದಿಸಲಾಗಿತ್ತು. 1986ರ ನೀತಿಯಲ್ಲಿಯೂ ಇದನ್ನು ಪುನರುಚ್ಚರಿಸಲಾಗಿತ್ತು. ಇದರಂತೆ ದೇಶದಾದ್ಯಂತ ಶಾಲಾ ಮಕ್ಕಳಿಗೆ ಪ್ರಾಥಮಿಕ ಶಾಲಾ ಹಂತದಿಂದಲೇ ಅಲ್ಲಿನ ಸ್ಥಳೀಯ ಮಾತೃಭಾಷೆಯ ಜೊತೆಗೆ ಇಂಗ್ಲೀಷ್​ ಹಾಗೂ ತೃತೀಯ ಭಾಷೆಯಾಗಿ ಹಿಂದಿಯನ್ನೂ ಕಲಿಸುವುದು ಈ ನೀತಿಯ ಉದ್ದೇಶ. ಆದರೆ, ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಭಾಷಾ ಹೇರಿಕೆಯಿಂದ ಒಂದು ಭಾಷೆ ಒಂದು ಸಂಸ್ಕೃತಿ ನಿರ್ಮಾಣವಾಗುತ್ತದೆ. ಇದರಿಂದ ದ್ರಾವಿಡ ಭಾಷೆಗಳ ಅಸ್ಮಿತೆಗೆ ಕೊಡಲಿ ಪೆಟ್ಟು ಬಿದ್ದಂಗಾಗುತ್ತದೆ. ಇದರಿಂದ ಮುಂದೊಂದು ದಿನ ದ್ರಾವಿಡ ಭಾಷೆಗಳು ಕಣ್ಮರೆಯಾಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರದ ಈ ನೀತಿಯನ್ನು 1969 ರಿಂದಲೂ ತೀವ್ರವಾಗಿ ವಿರೋಧಿಸುತ್ತಾ ಬಂದಿತ್ತು.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತೊಬ್ಬರ ಮೇಲೆ ಭಾಷೆ ಬಲವಂತ ಹೇರಬಾರದು. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಮ್ಮ ಪ್ರತಿಭಟನೆಯನ್ನು ತಿಳಿಸುದಾಗಿ ಹೇಳಿದ್ದರು. ತಮಿಳುನಾಡಿನಲ್ಲಿ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಸೇರಿದಂತೆ ವಿವಿಧ ಪಕ್ಷದ ಮುಖಂಡರು ಹಿಂದಿ ಹೇರಿಕೆ ವಿರುದ್ಧ ದೊಡ್ಡಮಟ್ಟದಲ್ಲಿ ಪ್ರತಿಭಟನೆ ದಾಖಲಿಸಿದ್ದರು. ಇವರ ಮನವೊಲಿಕೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ ಸೇರಿದಂತೆ ಹಲವರು ಮುಂದಾಗಿದ್ದರು. ಇಂದು ಹೋರಾಟ ತೀವ್ರ ಸ್ವರೂಪ ಪಡೆಯುವ ಸಾಧ್ಯತೆಯಿತ್ತು. ಅಷ್ಟರೊಳಗೆ ಕೇಂದ್ರ ಸರ್ಕಾರ ಹಿಂದಿ ಭಾಷೆ ಕಡ್ಡಾಯವಲ್ಲ ಅದು ಐಚ್ಛಿಕ ಎಂದು ಸ್ಪಷ್ಟಪಡಿಸಿದೆ.