ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಅಮೂಲ್ಯಾ ಲಿಯೋನಾಗೆ ನಕ್ಸಲ್​ ಜೊತೆ ಸಂಬಂಧ ಇರುವುದು ಸತ್ಯ; ಸಿಎಂ ಬಿ.ಎಸ್. ಯಡಿಯೂರಪ್ಪ

0
163

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸಿಎಎ ಹಾಗೂ ಎನ್‍ಸಿಆರ್ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ 19 ವರ್ಷದ ಯುವತಿ ಅಮೂಲ್ಯ ಮಾತು ಆರಂಭಿಸುವ ಮುನ್ನವೇ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಇಡಿ ದೇಶದ ಜನರ ಆಕ್ರೋಶಕ್ಕೆ ಗುರಿಯಾಗಿದ್ದರು, ಭಾಷಣ ಮಾಡಲು ವೇದಿಕೆ ಮೇಲೆ ಬಂದ ಅಮೂಲ್ಯ ಪಾಕಿಸ್ತಾನಕ್ಕೆ ಜೈಕಾರ ಕೂಗುತ್ತಿದ್ದಂತೆ ಈ ಘಟನೆ ಕಾರ್ಯಕ್ರಮ ಆಯೋಜಕರಲ್ಲಿ ಕೆಲ ಕಾಲ ಗೊಂದಲ ಮೂಡುವಂತೆ ಮಾಡಿತು. ಇನ್ನು ಇದಕ್ಕೆ ವಿರೋಧಿಸಿ ಟ್ವೀಟ್-ನಲ್ಲಿ ಭಾರಿ ವಿರೋಧ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅಮೂಲ್ಯಾಗೆ ನಕ್ಸಲ್ ನಂಟಿದೆ ಎಂದು ಹೇಳಿದ್ದಾರೆ.

ಯುವತಿಗೆ ನಕ್ಸಲ್-ರ ನಂಟು?

ಹೌದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಅಮೂಲ್ಯ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಮೂಲ್ಯ ತಂದೆ ಆಕೆಯ ಕೈ-ಕಾಲು ಮುರಿಯಿರಿ ಎಂದು ಹೇಳಿದ್ದಾರೆ. ಜೊತೆಗೆ ಅವಳ ರಕ್ಷಣೆಗೂ ಹೋಗಲ್ಲ ಎಂದಿದ್ದಾರೆ. ಆಕೆಯ ಹಿಂದಿರುವ ಸಂಘಟನೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ತೆಗೆದುಕೊಳ್ಳದಿದ್ದರೆ ಇದು ಕೊನೆಯಾಗಲ್ಲ, “ಅಮೂಲ್ಯಗೆ ನಕ್ಸಲ್​ ಜೊತೆ ಸಂಬಂಧ ಇರುವುದು ಸಾಬೀತಾಗಿದೆ. ಶಾಂತಿ ಸುವ್ಯವಸ್ಥೆ ಹಾಳು ಮಾಡುವುದು ಇವರ ಷಡ್ಯಂತ್ರವಾಗಿದೆ. ಮೊದಲು ಆಕೆಗೆ ಪ್ರೇರಣೆ ಕೊಟ್ಟವರು ಯಾರೆಂದು ತನಿಖೆಯಾಗಬೇಕು. ಆಗಲೇ ಇದಕ್ಕೆಲ್ಲಾ ಕೊನೆ ಸಿಗಲಿದೆ, ಹಾಗೂ ರಾಜ್ಯದಲ್ಲಿ ಶಾಂತಿ, ಸೌಹಾರ್ದಕ್ಕೆ ಭಂಗ ತರಲು ಇಂತಹ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿರುವ ಶಂಕೆಯನ್ನು ವ್ಯಕ್ತಪಡಿಸಿದರು.

ಮುಖ್ಯಮಂತ್ರಿಯವರೊಡನೆ ಇದ್ದ ಸಚಿವ ಬಿ ಸಿ ಪಾಟೀಲ್, “ಇಂತಹ ಘಟನೆಗಳು ಮರುಕಳಿಸಬಾರದು. ಯುವ ಜನಾಂಗವನ್ನು ದೇಶದ್ರೋಹಕ್ಕೆ ಪ್ರೇರೇಪಿಸುತ್ತಿರುವ ದುಷ್ಟ ಶಕ್ತಿಗಳನ್ನು ಕಾಲಹರಣ ಮಾಡದೇ ಶಿಕ್ಷಿಸಬೇಕಿದೆ” ಎಂದು ಅಭಿಪ್ರಾಯಪಟ್ಟರು. ಏತನ್ಮಧ್ಯೆ ಅಮೂಲ್ಯ ಲಿಯೋನಾ ಅವರನ್ನು 5ನೇ ಎಎಸ್ ಎಮ್ ಎಮ್ ನ್ಯಾಯಾಧೀಶರಾದ ಸಿರನ್ ಜೆ ಅನ್ಸಾರಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಕೋರಮಂಗಲ ನ್ಯಾಯಾಲಯದ ಮುಂದೆ ಆಕೆಯನ್ನು ಹಾಜರುಪಡಿಸಿದ ಬಳಿಕ ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.

ಯಾರಿವಳು ದೇಶದ್ರೋಹಿ?

19 ವರ್ಷದ ಯುವತಿ ಅಮೂಲ್ಯ ಲಿಯೋನಾ ಚಿಕ್ಕಮಗಳೂರಿನ ಕೊಪ್ಪ ಮೂಲದ ಯುವತಿಯಾಗಿದ್ದು, ಸಿಎಎ ಹಾಗೂ ಎನ್‍ಸಿಆರ್ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದಳು, ಅಮೂಲ್ಯ ಮಾತು ಆರಂಭಿಸುವ ಮುನ್ನವೇ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದರು. ಓವೈಸಿ ಆಕೆಯನ್ನು ತಡೆದಿದ್ದಾರೆ. ಬಳಿಕ ಪೊಲೀಸರು ಕೂಡಲೇ ಅಮೂಲ್ಯಳನ್ನು ವೇದಿಕೆಯಿಂದ ಕರೆದುಕೊಂಡು ವಶಕ್ಕೆ ಪಡೆದಿದ್ದಾರೆ. ಅಮೂಲ್ಯ ಪಾಕಿಸ್ತಾನಕ್ಕೆ ಜೈಕಾರ ಕೂಗುತ್ತಿದ್ದಂತೆ ಓವೈಸಿ ಗೊಂದಲಗೊಂಡರು. ತಕ್ಷಣ ಸಂಘಟಕರು ಮೈಕ್ ಕಿತ್ತುಕೊಂಡು ಅಮೂಲ್ಯ ಅವರನ್ನು ತಡೆದಿದ್ದಾರೆ.