ರಾಜ್ಯದ 135 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಚಿತ ವೈಫೈ

0
959

ಬೆಳಗಾವಿ: ಕಾಲೇಜ್ ವಿದ್ಯಾರ್ಥಿಗಳಿಗೊಂದು ಖುಷಿ ವಿಚಾರ ಇಲ್ಲಿದೆ. ಕಾಲೇಜ್ ನಲ್ಲಿ ಇನ್ಮುಂದೆ ಉಚಿತವಾಗಿ ವೈಫೈ ಸೌಲಭ್ಯ ಪಡೆಯಬಹುದಾಗಿದೆ.

ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದ 135 ಸರ್ಕಾರಿ ಪದವಿ ಕಾಲೇಜ್ ಗಳಲ್ಲಿ ಉಚಿತವಾಗಿ ವೈಫೈ ಸೌಲಭ್ಯ ಒದಗಿಸಲಾಗುತ್ತದೆ ಎಂದು ಹೇಳಿದ್ದಾರೆ. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಮೊದಲಿಗೆ 135 ಕಾಲೇಜ್ ಗಳಲ್ಲಿ ಸೌಲಭ್ಯ ಕಲ್ಪಿಸಲಿದ್ದು, ಹಂತ ಹಂತವಾಗಿ ಎಲ್ಲಾ 412 ಸರ್ಕಾರಿ ಪದವಿ ಕಾಲೇಜ್ ಗಳಿಗೆ ವೈಫೈ ಸೌಲಭ್ಯ ಒದಗಿಸಲಾಗುವುದು. ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದ 135 ಸರ್ಕಾರಿ ಪದವಿ ಕಾಲೇಜ್ ಗಳಲ್ಲಿ ಉಚಿತವಾಗಿ ವೈಫೈ ಸೌಲಭ್ಯ ಒದಗಿಸಲಾಗುತ್ತದೆ. ಈ ಕಾಲೇಜ್ ಗಳ ವಿದ್ಯಾರ್ಥಿಗಳು ಕಂಪ್ಯೂಟರ್, ಲ್ಯಾಪ್ ಟಾಪ್ ಬಳಸಿಕೊಂಡು ಜ್ಞಾನ ಪಡೆಯಬೇಕೆಂಬ ಉದ್ದೇಶವಿದೆ. ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.