ಸರ್ಕಾರ ರಕ್ಷಣೆ ನೀಡದಿದ್ರೂ ಶಬರಿಮಲೆಗೆ ಭೇಟಿ ನೀಡಲು ಮುಂದಾದ ಕಾರ್ಯಕರ್ತೆ; ಮಹಿಳಾ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಭಕ್ತರಲ್ಲಿ ಆತಂಕ.!

0
132

ಮಹಿಳೆಯರ ಪ್ರವೇಶ ಕುರಿತಂತೆ ಸುಪ್ರಿಂಕೋರ್ಟ್ ಆದೇಶ ನಂತರ ಮತ್ತಷ್ಟು ಗೊಂದಲಗಳು ಮೂಡಿದ್ದು, ಸರಿಯಾದ ತೀರ್ಪು ಬರುವವರೆಗೆ ಮಹಿಳೆಯರಿಗೆ ಪ್ರವೇಶ ನೀಡಬೇಕು ಎನ್ನುವುದು ಮಹಿಳೆಯರ ವಾದವಾಗಿದ್ದು, ಈ ಕುರಿತು ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ ಎಂದು ಕೇರಳ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ. ಆದರೆ ಕೇರಳ ಸರ್ಕಾರದಿಂದ ರಕ್ಷಣೆ ನೀಡುತ್ತಾರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನವೆಂಬರ್ 20ರ ನಂತರ ಶಬರಿಮಲೆ ದೇವಸ್ಥಾನಕ್ಕೆ ತೆರಳುವುದಾಗಿ ಬಲಪಂಥೀಯ ಕಾರ್ಯಕರ್ತೆ ತೃಪ್ತಿ ದೇಸಾಯಿ ಹೇಳಿದ್ದಾರೆ.

ಹೌದು ಶಬರಿಮಲೆ ಮಂಡಲ ಪೂಜೆ ಇಂದು ಆರಂಭವಾಗಿದ್ದು, ಆದರೆ ಮಹಿಳೆಯರ ಪ್ರವೇಶದಿಂದ ಗಲಾಟೆ ಏಳುವ ಲಕ್ಷಣಗಳು ಕಂಡು ಬರುತ್ತಿದೆ. ಇದರಿಂದ ಭಕ್ತರಲ್ಲಿ ಭಯ
ಹುಟ್ಟಿದ್ದು, ಮಂಡಲ ಪೂಜೆಗೆ ಹೋಗುವುದು ಹೇಗೆ ಎನ್ನುವ ಗೊಂದಲದಲ್ಲಿದ್ದಾರೆ. ಆದರೆ ಕೇರಳ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳುವಂತೆ ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ, ದೇವಾಲಯಕ್ಕೆ ಭೇಟಿ ನೀಡುವ ಯಾವುದೇ ಮಹಿಳೆಗೆ ರಾಜ್ಯ ಸರ್ಕಾರ ರಕ್ಷಣೆ ನೀಡುವುದಿಲ್ಲ. ರಕ್ಷಣೆ ಅಗತ್ಯವಿರುವವರು ಸುಪ್ರೀಂ ಕೋರ್ಟಿನಿಂದ ಆದೇಶ ಪಡೆಯಬೇಕು. ತೃಪ್ತಿ ದೇಸಾಯಿ ಅವರಂಥ ಕಾರ್ಯಕರ್ತರು ತಮ್ಮ ಬಲ ತೋರಿಸುವ ಸ್ಥಳವನ್ನಾಗಿ ದೇವಸ್ಥಾನವನ್ನು ನೋಡಬಾರದು.

ರಾಜ್ಯ ಸರ್ಕಾರವು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡುವ ಯಾವುದೇ ಮಹಿಳೆಗೆ ರಕ್ಷಣೆ ನೀಡುವುದಿಲ್ಲ. ಅವರಿಗೆ ಪೊಲೀಸ್ ರಕ್ಷಣೆ ಬೇಕಾದರೆ ಸುಪ್ರೀಂ ಕೋರ್ಟಿನಿಂದ ಆದೇಶ ಪಡೆಯಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಸುರೇಂದ್ರನ್ ಸ್ಪಷ್ಟಪಡಿಸಿದ್ದು, ಸರ್ಕಾರ ಮಹಿಳೆಯರನ್ನು ಶಬರಿಮಲೆಗೆ ಕರೆದುಕೊಂಡು ಹೋಗುವುದಿಲ್ಲ. ಈ ಹಿಂದೆ ಕೂಡ ಮಹಿಳೆಯರನ್ನು ಸರ್ಕಾರ ಕರೆದುಕೊಂಡು ಹೋಗಿರಲಿಲ್ಲ. ಇನ್ನು ಮುಂದೆ ಕೂಡ ಇಲ್ಲ ಎಂದು ತಿಳಿಸಿದ್ದಾರೆ.

ರಕ್ಷಣೆ ನೀಡದಿದ್ರೂ ಶಬರಿಮಲೆಗೆ ಭೇಟಿ ನೀಡ್ತೇವೆ;

ಸಚಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮಹಿಳಾ ಕಾರ್ಯಕರ್ತೆ ತೃಪ್ತಿ ದೇಸಾಯಿ ಕೇರಳ ಸರ್ಕಾರದಿಂದ ರಕ್ಷಣೆ ನೀಡುತ್ತಾರೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನವೆಂಬರ್ 20ರ ನಂತರ ಶಬರಿಮಲೆ ದೇವಸ್ಥಾನಕ್ಕೆ ತೆರಳುವುದಾಗಿ ಬಲಪಂಥೀಯ ಕಾರ್ಯಕರ್ತೆ ಹೇಳಿದ್ದು. ನವೆಂಬರ್ 20ರ ನಂತರ ನಾನು ಶಬರಿಮಲೆಗೆ ಹೋಗುತ್ತೇನೆ. ನಾವು ಕೇರಳ ಸರ್ಕಾರದಿಂದ ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದೇವೆ. ನಮಗೆ ರಕ್ಷಣೆ ನೀಡುವುದು ಬಿಡುವುದು ಅವರಿಗೆ ಬಿಟ್ಟದ್ದು. ರಕ್ಷಣೆ ಒದಗಿಸದಿದ್ದರೂ ನಾನು ದರ್ಶನಕ್ಕಾಗಿ ಶಬರಿಮಲೆಗೆ ಭೇಟಿಯೇ ನೀಡುತ್ತೇನೆ ಎಂದು ತೃಪ್ತಿ ಹೇಳಿದ್ದಾರೆ.

ಭಕ್ತರಲ್ಲಿ ಆತಂಕ ಯಾಕೆ?

ಎಲ್ಲಾ ವಯಸ್ಸಿನ ಮಹಿಳೆಯರು ಶಬರಿಮಲೆ ಪ್ರವೇಶಿಸಬಹುದು ಎಂಬ ಸುಪ್ರೀಂ ಕೋರ್ಟ್ ತೀರ್ಪು ನಂತರ ಕೆಲ ಮಹಿಳಾ ಕಾರ್ಯಕರ್ತರು ದೇವಾಲಯ ಪ್ರವೇಶಿಸಿ ತೀವ್ರ ಗಲಾಟೆ, ಪ್ರತಿಭಟನೆಯಾಗಿದ್ದು ಈ ವರ್ಷ ನ್ಯಾಯಾಲಯ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಂಡಿದೆ. ಅದನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದು ಈ ಮಧ್ಯೆ ವಾರ್ಷಿಕ ಶಬರಿಮಲೆ ಯಾತ್ರಾ ಅವಧಿ ಶನಿವಾರ ಆರಂಭವಾಗುತ್ತಿದೆ. ಶಬರಿಮಲೆ ಯಾತ್ರೆಗೆ ಹೋಗುವ ಭಕ್ತರಲ್ಲಿ ಪುನರ್ ಪರಿಶೀಲನಾ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಇನ್ನೂ ಗೊಂದಲವಿದೆ. ಶಬರಿಮಲೆ ಬೆಟ್ಟಕ್ಕೆ ಹೋಗುವ ಮಧ್ಯೆ, ನಿಲಕ್ಕಲ್ ನಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಯಾತ್ರಿಕರಲ್ಲಿ ಆತಂಕ ಮೂಡಿದೆ.

Also read: ಶಬರಿಮಲೆ ಮಹಿಳೆಯರ ಪ್ರವೇಶ ಪ್ರಕರಣವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿದ ಸುಪ್ರೀಂಕೋರ್ಟ್; ಹಿಂದೂಗಳಿಗೆ ಸೀಮಿತವಲ್ಲ ಎಲ್ಲ ಧರ್ಮಗಳಿಗೂ ಅನ್ವಯ.!