ಹಲವಾರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
161

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಗದಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯಲ್ಲಿ ಖಾಲಿ ಇರುವ 110 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಆಸಕ್ತ ಮಾಹಿಳಾ ಅಭ್ಯ್ರಥಿಗಳು ಜುಲೈ 11.2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಬಾರ್ಡರ್ ರೋಡ್ಸ್ ಸಂಸ್ಥೆ (BRO) 778 ಮೆಕ್ಯಾನಿಕ್ ಮತ್ತು ಇಲೆಕ್ಟ್ರೀಶಿಯನ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು

ಸಂಸ್ಥೆ (Organisation): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ವಿದ್ಯಾರ್ಹತೆ (Educational Qualification): ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

ಉದ್ಯೋಗ ಸ್ಥಳ (Job Location): ಗದಗ ಜಿಲ್ಲೆ (ಕರ್ನಾಟಕ

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಅಂಗನವಾಡಿ ಕಾರ್ಯಕರ್ತೆರ ನೇಮಕಾತಿಗಳಲ್ಲಿ ವಿಕಲಚೇತನರಿಗೆ ಗರಿಷ್ಟ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆಯ ಆದ್ಯತೆ: ಮೊದಲ ಆದ್ಯತೆ ಆಸಿಡ್ ದಾಳಿಗೊಳಗಾದವರಿಗೆ, ಎರಡನೇ ಆದ್ಯತೆ: ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ಮೂರನೆ ಆದ್ಯತೆ ವಿಧವೆಯರಿಗೆ , ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಂಗನವಾಡಿಯ ಅಧಿಕೃತ ವೆಬ್‌ಸೈಟ್‌ https://anganwadirecruit.kar.nic.in/ ನಲ್ಲಿ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 11,2019 ರ ಸಂಜೆ 5:30ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/ ಕ್ಲಿಕ್ ಮಾಡಿ.