ಸ್ವಾತಂತ್ರ್ಯ ದಿನಾಚರಣೆಯಂದೂ ಗಡಿಯಲ್ಲಿ ಖ್ಯಾತೆ ತಗೆದ ಪಾಕ್

0
1157

ಕಾಶ್ಮೀರ: ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಆರಂಭವಾಗಿರುವಾಗಲೇ, ಸ್ವಾತಂತ್ಯ್ರ ದಿನಾಚರಣೆಗೆ ಒಂದು ದಿನ ಬಾಕಿ ಇರುವಾಗಲೇ ಪಾಕ್ ತನ್ನ ಚಾಳಿ ತೋರಿಸಿದೆ. ಗಡಿಯಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ.

ಕದನ ವಿರಾಮ ಉಲ್ಲಂಘಿಸಿ, ಭಾರತದ ಸೇನಾ ನೆಲೆಗಳು, ಸೈನಿಕರನ್ನು ಗುರಿಯಾಗಿಸಿಕೊಂಡು, ಪಾಕ್ ಸೇನೆ ಗುಂಡಿನ ದಾಳಿ ನಡೆಸತೊಡಗಿದೆ. ಇದಕ್ಕೆ ಭಾರತದ ಸೈನಿಕರೂ ಕೂಡ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಪಾಕಿಸ್ತಾನ ಸೇನೆ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದಕ್ಕೆ ಭಾರತೀಯ ಸೇನೆ ಕೂಡ, ಪ್ರತಿ ದಾಳಿ ನಡೆಸಿದೆ. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪಾಕಿಸ್ತಾನ ಗುಂಡಿನ ದಾಳಿ ನಡೆಸುವುದು ಹಿಂದಿನಿಂದಲೂ ಇದೆ.

ಪೂಂಚ್ ಮಾರುಕಟ್ಟೆಯಲ್ಲಿ ನಿನ್ನೆಯಷ್ಟೇ ಗ್ರೆನೇಡ್ ಸ್ಪೋಟಿಸಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪಾಕ್ ಅಪ್ರಚೋದಿತವಾಗಿ ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸುತ್ತಿದೆ. ಇದಕ್ಕೆ ಭಾರತ ಪ್ರತ್ಯುತ್ತರ ನೀಡಿದೆ. ಇದುವೆರೆಗೆ ಯಾವುದೇ ಪ್ರಾಣ ಹಾನಿಯ ಬಗ್ಗೆ ವರದಿಯಾಗಿಲ್ಲ. ಗುಂಡಿನ ಚಕಮಕಿ ಮುಂದುವರೆದಿದೆ.