ಬಿಬಿಎಂಪಿ ಮೇಯರ್ ಚುನಾವಣೆ ಸೆ 19ಕ್ಕೆ…

0
1064

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಸೆ.19ರಂದು ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದ್ದು, 260 ಸದಸ್ಯರು ಮತದಾನ ಮಾಡಲಿದ್ದಾರೆ. ಬುಧವಾರ ನಗರಾಭಿವೃದ್ಧಿ ಇಲಾಖೆ ಪ್ರಾದೇಶಿಕ ಆಯುಕ್ತರು ಚುನಾವಣಾ ಅಧಿಸೂಚನೆ ಹೊರಡಿಸಿದ್ದಾರೆ. ಸೆ.19ರ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ. 260 ಸದಸ್ಯರು ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಮಾಡಲಿದ್ದಾರೆ.

17 ನೇ ಅವಧಿಯ ಮೇಯರ್ ಚುನಾವಣೆ. ಮೇಯರ್ ಸ್ಥಾನ ಹಿಂದುಳಿದ ವರ್ಗ (ಬಿ) ಗೆ ಮೀಸಲು ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ ಎಂದು ಪ್ರಾದೇಶಿಕ ಆಯುಕ್ತ ಚುನಾವಣಾ ಅಧಿಸೂಚನೆ ಪ್ರಕಟಿಸಿದರು.

ಮೇಯರ್‌, ಉಪಮೇಯರ್‌ ಆಯ್ಕೆ ಬಳಿಕ 12 ಸ್ಥಾಯಿ ಸಮಿತಿಗಳ 11 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಹಲವು ಬಾರ ಅವಿರೋಧವಾಗಿ ಈ ಆಯ್ಕೆ ನಡೆಯುತ್ತದೆ. ಪೈಪೋಟಿ ಏರ್ಪಟ್ಟರೆ ಚುನಾವಣೆ ನಡೆಸಲಾಗುತ್ತದೆ. ಒಟ್ಟು 260 ಸದಸ್ಯರು ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಮಾಡಲಿದ್ದಾರೆ.