ಮಂಡ್ಯ ಜಿಲ್ಲೆಯ ಕನಗನಮರಡಿಯಲ್ಲಿ ಖಾಸಗಿ ಬಸ್​ ನಾಲೆಗೆ​ ಉರುಳಿ 21 ಕ್ಕೂ ಹೆಚ್ಚು ಜನ ಸಾವನಪ್ಪಿದ್ದು ಮೃತರ ಸಂಬಧಿಕರ ಆಕ್ರಂದನ ಮುಗಿಲು ಮುಟ್ಟಿದೆ..

0
407

ಪಾಂಡವಪುರದಿಂದ ಕನಗನಮರಡಿ ಮಾರ್ಗವಾಗಿ ಮಂಡ್ಯಕ್ಕೆ ತೆರಳುತ್ತಿದ್ದ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ನಾಲೆಗೆ ಉರುಳಿದ ಪರಿಣಾಮ, 28 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು ಹತ್ತಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ.

Also read: ಪೈಪ್‌ ಮೂಲಕ ಎಲ್‌ಪಿಜಿ ಪೂರೈಕೆ ಮಾಡುವ ಸಿಜಿಡಿ ಯೋಜನೆಗೆ ನರೇಂದ್ರ ಮೋದಿ ಚಾಲನೆ ನೀಡಿದ್ದು, ಕರ್ನಾಟಕದ 8 ಜಿಲ್ಲೆ ಗಳು ಆಯ್ಕೆಯಾಗಿವೆ…

ಹೌದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್​ ವಿ.ಸಿ.ನಾಲೆಗೆ ಉರುಳಿದೆ. ಈ ಬಸ್ ಪಾಂಡವಪುರದಿಂದ ಕನಗನಮರಡಿ ಮಾರ್ಗವಾಗಿ ಮಂಡ್ಯಕ್ಕೆ ಹೊಗುತ್ತಿತು ಇದರಲ್ಲಿ ಸುಮಾರು 40 ಕ್ಕೂ ಹೆಚ್ಚು ಜನರು ಪ್ರಯಾಣ ಮಾಡುತ್ತಿದ್ದರು. ಡ್ರೈವರ್ ವೇಗವಾಗಿ ಬಸ್ ಚಲಾವಣೆ ಮಾಡುತ್ತಿರುವಾಗ ರಸ್ತೆಯಲ್ಲಿನ ಗುಂಡಿಗೆ ಬಸ್ ಇಳಿದಿದ್ದು ಅದನ್ನು ತಪ್ಪಿಸಲು ಹೋದ ಚಾಲಕನ ನಿಯಂತ್ರಣ ತಪ್ಪಿ ಸಿದ ನಾಲೆಗೆ ಬಿದ್ದು ಸಂಪೂರ್ಣವಾಗಿ ಮುಳುಗಿದೆ. ಕೂಡಲೇ ಬಸ್ ನಲ್ಲಿ ನೀರು ತುಂಬಿದ್ದು ಪ್ರಯಾಣಿಕರಿಗೆ ಮೇಲೆಳಲು ಆಗದೆ ಅಲ್ಲಿಯೇ ನೀರು ಕುಡಿದು ಸತ್ತಿದ್ದಾರೆ.

Also read: ಪಶ್ಚಿಮ ಮಧ್ಯ ರೈಲ್ವೇ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಈ ಬಸ್​ನಲ್ಲಿ ಹೆಚ್ಚಾಗಿ ಶಾಲಾ ಮಕ್ಕಳು ಇದ್ದರು ಎನ್ನಲಾಗಿದೆ. ಮೃತರೆಲ್ಲರೂ ಅಕ್ಕಪಕ್ಕದ ಊರಿನವರೇ ಆಗಿದ್ದಾರೆ. ನಾಲೆಯಲ್ಲಿ ಬಿದ್ದಿರುವ ಮೃತದೇಹಗಳನ್ನು ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳೀಯ ಯುವಕರು ಹೊರತೆಗೆಯುತ್ತಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಈವರೆಗೆ 20 ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಬಸ್​ ಚಾಲಕ ಕೂಡ ಮೃತಪಟ್ಟಿದ್ದಾನೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕೆ ಆಗಮಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಶವಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡುತ್ತಿದ್ದಾರೆ. ಬಸ್​​ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವಾಗಿದ್ದು, ‘ಚಾಲಕ ಪ್ರಯಾಣಿಕರನ್ನು ಕೊಲೆ ಮಾಡಿದ್ದಾನೆ’ ಎಂದು ಮಂಡ್ಯ ಉಸ್ತುವಾರಿ ಸಚಿವ ಸಿ.ಎಸ್‌. ಪುಟ್ಟರಾಜು ತಿಳಿಸಿದ್ದಾರೆ.
ಈ ಘಟನೆಗೆ ಸ್ಥಳಿಯರ ಆಕ್ರೋಶ:

ಈ ರಸ್ತೆಯಲ್ಲಿ ಸರ್ಕಾರಿ ಬಸ್ ಸೌಲಭ್ಯಗಳು ಇಲ್ಲ ಖಾಸಗಿ ಬಸ್-ನವರು ಟೈಮ್ ರಿಚ್ ಮಾಡಲು ವೇಗವಾಗಿ ಬಸ್ ಚಲಾಯಿಸುತ್ತಾರೆ. ಮತ್ತು ಮುಖ್ಯ ರಸ್ತೆಯ ಪಕ್ಕದಲ್ಲಿರುವ ನಾಲೆಗಳಿಗೆ ಯಾವುದೇ ತಡೆಗೋಡೆ ಇರಲಿಲ್ಲ ಆದಕಾರಣ ಇಂತಹ ದುರಂತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಸಿಎಂ ರಕ್ಷಣಾ ಕಾರ್ಯಾಚರಣೆಗೆ ಕೂಡಲೇ ಸೂಚನೆ:

ಈ ಘಟನೆಯಿಂದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಸ್ಥಳಕ್ಕೆ ಕೂಡಲೇ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುವ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ.