ದೇಶದಲ್ಲಿ ಆಘಾತ ಮೂಡಿಸಿದ ನಿಫಾ ವೈರಸ್ ಹರಡುತ್ತಿದ್ದು, ಕೇರಳದ ಎರ್ನಾಕುಲಂನ 23 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾದ ಸೋಂಕು ತಗುಲಿರುವುದು ಖಚಿತವಾಗಿದೆ. ಕೊಚ್ಚಿಯ ಈ ವ್ಯಕ್ತಿಗೆ ಸೋಂಕು ತಗುಲಿದ ಹಿನ್ನಲೆಯಲ್ಲಿ ಪುಣೆಯ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿ (NIV)ಗೆ ವ್ಯಕ್ತಿಯ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ವೈರಾಣು ಇರುವುದು ಸತ್ಯವಾಗಿದ್ದು, ಸೋಂಕು ತಗುಲಿದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದ ಇಬ್ಬರು ದಾದಿಯರು ಮತ್ತು ವ್ಯಕ್ತಿಯ ಸ್ನೇಹಿತನಿಗೂ ನಿಫಾ ತಗುಲಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಈ ಮೂವರನ್ನೂ ಪ್ರತ್ಯೇಕ ಕೊಠಡಿಗಳಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಿನ್ನಲೆಯಲ್ಲಿ ರಾಜ್ಯದಲ್ಲೂ ಆತಂಕ ಸೃಷ್ಟಿಸಿದ್ದು. ರಾಜ್ಯದ ಕರಾವಳಿ ಸೇರಿ 8 ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.
Also read: ಬಿಟ್ಟೂಬಿಡದೆ ತಲೆನೋವು ಕಾಡುತ್ತಿದೆಯೇ? ಹಾಗಾದ್ರೆ ಕೂಡಲೇ ಎಚ್ಚರವಹಿಸಿ, ಇದರಿಂದಲೇ ಮಿದುಳು ಕ್ಯಾನ್ಸರ್ ಕೂಡ ಬರಬಹುದು..
ಹೌದು ಕೇರಳದಲ್ಲಿ ಪತ್ತೆಯಾಗಿರುವ ಬಾವಲಿ ಜ್ವರದ ಭೀತಿ ಈಗ ರಾಜ್ಯದಲ್ಲಿ ಆತಂಕಕ್ಕೆ ಗುರಿಯಾಗಿದ್ದು. ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರಾವಳಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಕ್ಕೆ ಆರೋಗ್ಯ ಇಲಾಖೆ ಸಕಲ ರೀತಿಯಲ್ಲಿ ಸಜ್ಜಾಗಿದೆ. ವಿಶೇಷವಾಗಿ ಶಂಕಿತ ನಿಫಾ ಲಕ್ಷಣಗಳು ಯಾವುದೇ ರೋಗಿಗಳಲ್ಲಿ ಕಂಡು ಬಂದರೆ ತತ್ಕ್ಷಣ ಆರೋಗ್ಯ ಇಲಾಖೆಗೆ ತಿಳಿಸಬೇಕು ಎಂಬುದಾಗಿ ಇಲಾಖೆಯಿಂದ ಜಿಲ್ಲೆಯ ಎಲ್ಲ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಅದರಂತೆ ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ.
ಕೇರಳದ ಮೂವ್ವರಿಗೆ ನಿಫಾ ವೈರಸ್?
Also read: ಮಕ್ಕಳಿಗೆ ಹುಟ್ಟುವಾಗಲೇ ಅಂಗವೈಕಲ್ಯ ಬರಲು ಮುಖ್ಯಕಾರಣ ದೇಶದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯವಂತೆ..
ಪ್ರತಿ ದಿನ ಕೇರಳದಿಂದ ಮಂಗಳೂರಿಗೆ ಸಾಕಷ್ಟು ಮಂದಿ ಸಂಚರಿಸುತ್ತಿರುತ್ತಾರೆ. ಅಲ್ಲದೆ ಇಲ್ಲಿನ ಆಸ್ಪತ್ರೆಗಳಿಗೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಾರೆ. ಹಾಗಾಗಿ ಶಂಕಿತ ನಿಫಾ ಇರುವ ಸ್ಥಳದಿಂದ ಯಾರಾದರೂ ಬಂದರೆ ಅಂತವರ ಟ್ರಾವೆಲ್ ಲೀಸ್ಟ್ ತೆಗೆದುಕೊಂಡು ಇಲಾಖೆಗೆ ಮಾಹಿತಿ ನೀಡುವ ಜತೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ಜಿಲ್ಲೆಯ ಎಲ್ಲ ಖಾಸಗಿ, ಸರಕಾರಿ, ಹೊರಭಾಗದಲ್ಲಿರುವ ಆಸ್ಪತ್ರೆ, ಐಎಂಎ ಸಂಸ್ಥೆ, ರೈಲ್ವೆ, ಇಎಸ್ಐ, ಪೋರ್ಟ್ ಆಸ್ಪತ್ರೆಗಳಿಗೆ ಸೂಚನೆ ಕಳುಹಿಸಿದೆ.
ನಿಪಾ ವೈರಸ್ ಎಂದರೇನು?
1998ರಲ್ಲಿ ಮಲೇಷ್ಯಾದ ಕಾಂಪುಂಗ್ ಸುಂಗಾತ್ ನಿಪಾ ವಲಯದಲ್ಲಿ ಕಾಣಿಸಿಕೊಂಡ ಮಾರಕ ಜ್ವರಕ್ಕೆ ಕಾರಣವಾದ ವೈರಸನ್ನು ನಿಪಾ ವೈರಸ್ ಎಂದು ಕರೆಯುತ್ತಾರೆ. ನಿಪಾ ವೈರಸ್ ಬಾವಲಿಗಳ ಮೂಲಕ ಹರಡುತ್ತದೆ. ಈ ಕ್ಷಣದವರೆಗೆ ಈ ರೋಗಕ್ಕೆ ಔಷಧಿ ಕಂಡುಹಿಡಿದಿಲ್ಲ. ಹೀಗಾಗಿ ನಿಪಾ ವೈರಸ್ ಮಾರಣಾಂತಿಕ ಎಂದೇ ಕುಖ್ಯಾತಿ ಪಡೆದಿದೆ. ಈ ವೈರಸ್ ಪತ್ತೆಯಾದರೆ ಶೇ.74ರಷ್ಟು ಸಾವು ಖಚಿತ ಎನ್ನಲಾಗಿದೆ.
ವೈರಸ್ ಹೇಗೆ ಹರಡುತ್ತದೆ?
ಸೋಂಕಿರುವ ಬಾವಲಿ ಕಚ್ಚಿದ ಹಣ್ಣನ್ನು ತಿನ್ನೋದ್ರಿಂದ ಹರಡುತ್ತೆ. ಸಾಂಕ್ರಾಮಿಕ ಕಾಯಿಲೆಯಾದ್ರಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತೆ. ಹೀಗಾಗಿ ಬಾವಲಿಗಳು ಕಚ್ಚಿದ ಸಾಧ್ಯತೆಯಿರುವ ಹಣ್ಣುಗಳನ್ನು ತಿನ್ನಲೇಬೇಡಿ.
ನಿಪಾ ವೈರಸ್ ಲಕ್ಷಣಗಳೇನು?
1. ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ.
2. ಕೆಲವರಲ್ಲಿ ಅಪಸ್ಮಾರದ ಲಕ್ಷಣಗಳು ಕಾಣಿಸುತ್ತವೆ.
3. ಈ ಲಕ್ಷಣಗಳು ಸಾಮಾನ್ಯವಾಗಿ 10ರಿಂದ 12 ದಿನ ಕಾಣಿಸುತ್ತದೆ.
4. ಬಳಿಕ ಪ್ರಜ್ಞಾಹೀನರಾಗುತ್ತಾರೆ.
5. ನಂತರ ಈ ಜ್ವರ ತೀವ್ರವಾಗಿ ಮೆದುಳಿಗೆ ವ್ಯಾಪಿಸುತ್ತದೆ.
6. ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದರೆ ಸಾವು ಸಂಭವಿಸಬಹುದು.